Homeಮುಖಪುಟಹರಿಯಾಣ: ದುಷ್ಕರ್ಮಿಗಳಿಂದ ಯೇಸು ಕ್ರಿಸ್ತನ ಪ್ರತಿಮೆ ಧ್ವಂಸ

ಹರಿಯಾಣ: ದುಷ್ಕರ್ಮಿಗಳಿಂದ ಯೇಸು ಕ್ರಿಸ್ತನ ಪ್ರತಿಮೆ ಧ್ವಂಸ

- Advertisement -
- Advertisement -

ಹರಿಯಾಣ ರಾಜ್ಯದ ಅಂಬಾಲಾದಲ್ಲಿ 173 ವರ್ಷದ ಹಳೆಯ ಚರ್ಚ್‌ ಆವರಣದಲ್ಲಿದ್ದ ಯೇಸು ಕ್ರಿಸ್ತನ ಪ್ರತಿಮೆಯನ್ನು ದುಷ್ಕರ್ಮಿಗಳಿಬ್ಬರು ಧ್ವಂಸಗೊಳಿಸಿರುವ ಘಟನೆ ಭಾನುವಾರ ಮಧ್ಯರಾತ್ರಿ ಜರುಗಿದೆ.

ಕಾಂಪೌಂಡ್ ಹಾರಿ ಚರ್ಚ್ ಒಳನುಗ್ಗಿರುವ ಇಬ್ಬರು ದುಷ್ಕರ್ಮಿಗಳು ಪ್ರತಿಮೆ ಹಾನಿ ಮಾಡಿರುವುದು ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇಬ್ಬರು ವ್ಯಕ್ತಿಗಳು 12:30 ಕ್ಕೆ ಕಾಂಪೌಂಡ್ ಗೋಡೆಯನ್ನು ಹಾರಿ 1:40 ರ ಸುಮಾರಿಗೆ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸಗೊಳಿಸಿದರು. ಆರೋಪಿಗಳನ್ನು ಇನ್ನೂ ಗುರುತಿಸಲಾಗಿಲ್ಲ, ಅದರ ತನಿಖೆಗಾಗಿ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ದೂರು ದಾಖಲಾಗಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದು ಸದರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ನರೇಶ್ ತಿಳಿಸಿದ್ದಾರೆ.

ಇತ್ತೀಚೆಗೆ ಅಲ್ಪಸಂಖ್ಯಾತರ ಮೇಲೆ ಮತ್ತು ಚರ್ಚ್‌ಗಳ ಮೇಲೆ ದಾಳಿ, ಶಾಲೆಗಳ ಮೇಲೆ ದಾಳಿ ನಡೆಸಿ ಕ್ರಿಸ್‌ಮಸ್‌ ಆಚರಣೆಗೆ ಬಲಪಂಥೀಯ ಶಕ್ತಿಗಳು ತಡೆಯೊಡ್ಡುವ ಕೆಲಸ ಆರಂಭಿಸಿದ್ದಾರೆ. ಕ್ರಿಶ್ಚಿಯನ್ನರು ಮಾತ್ರ ಕ್ರಿಸ್‌ಮಸ್ ಆಚರಿಸಬೇಕೆ ಹೊರತು ಹಿಂದೂಗಳು ಆಚರಿಸಬಾರದು ಎಂದು ಬಜರಂಗದಳ ಸದಸ್ಯರು ಚರ್ಚ್‌ಗೆ ನುಗ್ಗಿ, ದಾಂಧಲೆ ನಡೆಸಿ ಕ್ರಿಸ್‌ಮಸ್ ಆಚರಣೆಗೆ ತಡೆಯೊಡ್ಡಿರುವ ಅಹಿತಕರ ಘಟನೆ ಅಸ್ಸಾಂನ ಸಿಲ್ಚಾರ್‌ನಲ್ಲಿ ಇಂದು ನಡೆದಿದೆ. ನಿನ್ನೆ ಬಲಪಂಥೀಯ ಗುಂಪು ಗುರ್ಗಾಂವ್‌ನ ಪಟೌಡಿ ಚರ್ಚ್ ಒಂದಕ್ಕೆ ನುಗ್ಗಿ ದಾಂಧಲೆ ನಡೆಸಿ, ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿಪಡಿಸಿರುವ ಘಟನೆ ವರದಿಯಾಗಿದೆ.

ಅದೇ ರೀತಿಯ ರಾಜ್ಯದ ಮಂಡ್ಯ ಜಿಲ್ಲೆಯ ಪಾಂಡವಪುರದ ನಿರ್ಮಲ ಇಂಗ್ಲಿಷ್ ಶಾಲೆಯಲ್ಲಿ ವಿದ್ಯಾರ್ಥಿಗಳು ಕ್ರಿಸ್‌ಮಸ್ ಆಚರಣೆ ಮಾಡದಂತೆ ತಡೆದ ಘಟನೆ ಗುರುವಾರ ನಡೆದಿದೆ. ದುಷ್ಕರ್ಮಿಗಳ ಗುಂಪು ಬಲವಂತವಾಗಿ ಶಾಲೆಗೆ ನುಗ್ಗಿ ಶಾಲೆಯಲ್ಲಿರುವ ಶಿಕ್ಷಕರ ಜೊತೆಗೆ ವಾಗ್ವಾದ ನಡೆಸಿ ಬೆದರಿಕೆ ಹಾಕಿದ್ದಾರೆ.


ಇದನ್ನೂ ಓದಿ: ಅಸ್ಸಾಂ: ಕ್ರಿಸ್‌ಮಸ್ ಆಚರಣೆಗೆ ತಡೆಯೊಡ್ಡಿದ ಬಜರಂಗದಳ ಸದಸ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. So for in many places OBC and downtrodden category people found involved in clashes and conflicts. Now all of them become educated and think wise , decided not involve in any such unwanted activities however in many packets these people are hired to miss use them for personal gridges . Hope This portal( gowri.com ) certainly create more awareness among these communities not involve such hired activities. Respective communities must organise such awareness sessions in all places. Certainly we can nullify the conflicts and clashes.
    I appreciate the comments by educated Intellectual s for peaceful society.
    Regards.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...