Homeಚಳವಳಿಬಿಜೆಪಿಯು ಹರ್ಯಾಣದಲ್ಲಿ ಅತ್ಯಾಚಾರಿ ಗುರ್ಮೀತ್ ಹೆಸರಲ್ಲಿ ಮತ ಕೇಳಲು ಬಿಡುಗಡೆ ಮಾಡುತ್ತಿದೆ: ಯೋಗೇಂದ್ರ ಯಾದವ್

ಬಿಜೆಪಿಯು ಹರ್ಯಾಣದಲ್ಲಿ ಅತ್ಯಾಚಾರಿ ಗುರ್ಮೀತ್ ಹೆಸರಲ್ಲಿ ಮತ ಕೇಳಲು ಬಿಡುಗಡೆ ಮಾಡುತ್ತಿದೆ: ಯೋಗೇಂದ್ರ ಯಾದವ್

"ರಾಮ್ ರಹೀಮ್" ನನ್ನು ಪೆರೋಲ್ ಮೇಲೆ ಹರಿಯಾಣ ಸರ್ಕಾರ ಬಿಡುಗಡೆ ಮಾಡುವುದು ಸರಿಯೇ ತಪ್ಪೇ ಎಂದು ಪೋಲ್ ಅನ್ನು ಯೋಗೆಂದ್ರ ಯಾದವ್ ರವರು ಕ್ರಿಯೇಟ್ ಮಾಡಿದ್ದಾರೆ. ಇದುವರೆಗೂ 11 ಸಾವಿರಕ್ಕೂ ಹೆಚ್ಚು ಜನರ ವೋಟ್ ಮಾಡಿದ್ದು ಶೇ.92% ಜನರು ಬಿಡುಗಡೆ ಮಾಡಬಾರದೆಂದು ವೋಟ್ ಮಾಡಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣದ ವಿಚಾರವಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವ ಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್, ಇಲ್ಲಿರುವ ಸುನಾರಿಯಾ ಜೈಲು ಅಧಿಕಾರಿಗಳಿಗೆ ಪೆರೋಲ್ ನೀಡುವಂತೆ ಮನವಿ ಮಾಡಿದ್ದಾರೆ, ಸಿರ್ಸಾದಲ್ಲಿ ತನ್ನ ಬಂಜರು ಭೂ ಪ್ರದೇಶದಲ್ಲಿ ಕೃಷಿ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್ ಮನವಿಯನ್ನು ಜಿಲ್ಲಾಡಳಿತದ ಅಧಿಕಾರಿಗಳು ಹರಿಯಾಣ ಸರ್ಕಾರಕ್ಕೆ ರವಾನಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಮ್ ರಹೀಂ ಮೊದಲ ಬಾರಿಗೆ ಅಪರಾಧಿ, ಸನ್ನಡತೆ ಆಧಾರದಲ್ಲಿ ಅವರಿಗೆ ಪೆರೋಲ್ ನೀಡಬಹುದು ಎಂದು ಬಿಜೆಪಿಯ ನಾಯಕ ವೈಭವ್ ಅಗರ್ವಾಲ್ ಹೇಳಿದ್ದಾರೆ. ಅಲ್ಲಿನ ಬಿಜೆಪಿಯ ಮುಖ್ಯಮಂತ್ರಿ ಖಟ್ಟರ್ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಈ ಅತ್ಯಾಚಾರಿಯ ಬೆಂಬಲ ಪಡೆಯಲು ಆತನಿಗೆ ಪೆರೋಲ್ ಮೇಲೆ ಹೊರಬರಲು ಕುತಂತ್ರ ಮಾಡುತ್ತಿದ್ದಾರೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಆರೋಪ ಮಾಡಿದ್ದಾರೆ.

ಹರ್ಯಾಣ ಸರ್ಕಾರವು ಮತಗಳಿಸುವ ನೆಪದಿಂದ ಗುರ್ಮೀತ್ ಸಿಂಗ್ ಅವರನ್ನು ಬಿಡುಗಡೆ ಮಾಡಿದರೆ, ನ್ಯಾಯಾಲಯ ಮತ್ತು ಬೀದಿ ಹೋರಾಟದ ಮೂಲಕ ಆ ಅಪರಾಧಿಗೆ ಪೆರೋಲ್ ಸಿಗದಂತೆ ಸ್ವರಾಜ್ ಇಂಡಿಯಾ ಸವಾಲು ಹಾಕುತ್ತದೆ ಎಂದು ಯೋಗೇಂದ್ರ ಯಾದವ್ ರವರು ಟ್ವೀಟ್ ಮಾಡಿದ್ದಾರೆ.

ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಗುರ್ಮೀತ್ “ರಾಮ್ ರಹೀಮ್” ನನ್ನು ಪೆರೋಲ್ ಮೇಲೆ ಹರಿಯಾಣ ಸರ್ಕಾರ ಬಿಡುಗಡೆ ಮಾಡುವುದು ಸರಿಯೇ ತಪ್ಪೇ ಎಂದು ಪೋಲ್ ಅನ್ನು ಯೋಗೆಂದ್ರ ಯಾದವ್ ರವರು ಕ್ರಿಯೇಟ್ ಮಾಡಿದ್ದಾರೆ. ಇದುವರೆಗೂ 11 ಸಾವಿರಕ್ಕೂ ಹೆಚ್ಚು ಜನರ ವೋಟ್ ಮಾಡಿದ್ದು ಶೇ.92% ಜನರು ಬಿಡುಗಡೆ ಮಾಡಬಾರದೆಂದು ವೋಟ್ ಮಾಡಿದ್ದಾರೆ. ಈ ಕುರಿತು ಯೋಗೇಂದ್ರ ಯಾದವ್ ರವರು ಕೋರ್ಟ್ ನಲ್ಲಿಯೂ ಪ್ರಶ್ನಿಸಿದ್ದಾರೆ.

ಹರಿಯಾಣದ 2012 ರ ಉತ್ತಮ ನಡವಳಿಕೆ ಖೈದಿ (ತಿದ್ದುಪಡಿ) ಕಾಯ್ದೆಯ ಪ್ರಕಾರ, ಗುರ್ಮೀತ್ ರಾಮ್ ರಹೀಮ್ “ಹಾರ್ಡ್‌ಕೋರ್” ಖೈದಿಗಳ ವರ್ಗಕ್ಕೆ ಸೇರುತ್ತಾನೆ, ಏಕೆಂದರೆ ಅವನು ಎರಡು ಬಾರಿ ಭೀಕರ ಅಪರಾಧಕ್ಕೆ ಶಿಕ್ಷೆಗೊಳಗಾಗಿದ್ದಾನೆ. ಅವನಿಗೆ ಪೆರೋಲ್ ಪಡೆಯಲು ಅರ್ಹನಲ್ಲ. ಅಲ್ಲದೇ ಕಾನೂನು ಮತ್ತು ಸುವ್ಯವಸ್ಥೆಯ ಬೆದರಿಕೆ ಇದ್ದರೆ ಯಾವುದೇ ಖೈದಿಗಳನ್ನು ಬಿಡುಗಡೆ ಮಾಡಬಾರದು ಎಂದು ಅದೇ ಕಾಯಿದೆಯ ಸೆಕ್ಷನ್ 6 (1) ಹೇಳುತ್ತದೆ. ಪಂಚಕುಲದಲ್ಲಿ 2017 ರಲ್ಲಿ ತನಿಖೆ ನಡೆಯುತ್ತಿರುವಾಗಲೇ ಭಾರೀ ಹಿಂಸಾಚಾರ ನಡೆದು 40 ಮಂದಿ ಸಾವಿಗೀಡಾಗಿದ್ದರು. ಈಗಲೂ ಆತ ಹೊರಬಂದರೆ ಹಿಂಸಾಚಾರವಾಗುವುದು ಖಚಿತ ಎಂದಿದ್ದಾರೆ.

ಪ್ರಸ್ತುತ ಆತನನ್ನು ಭಾಯ್ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಹಾಗಾಗಿ ಬಿಡುಗಡೆ ಮಾಡಬಾರದೆಂದು ಸ್ವರಾಜ್ ಇಂಡಿಯಾ ಪಕ್ಷದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇಂದು, ಸ್ವರಾಜ್ ಇಂಡಿಯಾದ ನಿಯೋಗ ಸಿರ್ಸಾ ಡಿಸಿ ಅವರನ್ನು ಭೇಟಿಯಾಗಿ ಪ್ರತಿಭಟನೆ ಜ್ಞಾಪಕ ಪತ್ರವನ್ನು ನೀಡಿದ್ದು ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೇಳಿದೆ.

ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ಜನವರಿ 17 ರಂದು ಪತ್ರಕರ್ತ ರಾಮ್‌ಚಂದರ್  ಛತ್ರಪತಿ ಅವರನ್ನು 2002 ರ ಅಕ್ಟೋಬರ್‌ನಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮ್ ರಹಿಮ್  ಮತ್ತು ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಡೇರಾ ಸಾಚಾ ಸೌದಾ ಪ್ರಧಾನ ಕಚೇರಿಯಲ್ಲಿ ರಾಮ್ ರಹೀಮ್ ಅವರು ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಿಕೆ ಪ್ರಕಟಿಸಿದ ನಂತರ ಪತ್ರಕರ್ತನನ್ನು ಸಿರ್ಸಾದಲ್ಲಿ ಕೊಲ್ಲಲಾಯಿತು. ನಂತರ ಅತ್ಯಾಚಾರ ನಡೆದಿದ್ದು ದೃಢಪಟ್ಟಿದ್ದು ತನ್ನ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಆತನಿಗೆ 2017 ರ ಆಗಸ್ಟ್‌ನಲ್ಲಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...