ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾವ, ಸಂಸದೆ ಪ್ರಿಯಾಂಕ ಗಾಂಧಿ ಅವರ ಪತಿ ಉದ್ಯಮಿ ರಾಬರ್ಟ್ ವಾದ್ರಾ ಅವರು ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾದರು ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಹರಿಯಾಣ ಭೂ ವ್ಯವಹಾರ
56 ವರ್ಷದ ವಾದ್ರಾ ತಮ್ಮ ಭದ್ರತಾ ಸಿಬ್ಬಂದಿ ಮತ್ತು ಮಾಧ್ಯಮ ಸಿಬ್ಬಂದಿಯೊಂದಿಗೆ ಕೇಂದ್ರ ದೆಹಲಿಯ ಸುಜನ್ ಸಿಂಗ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಡಿ ಪ್ರಧಾನ ಕಚೇರಿಗೆ ಸುಮಾರು 2 ಕಿ.ಮೀ ನಡೆದುಕೊಂಡು ಹೋದರು ಎಂದು ವರದಿ ಹೇಳಿದೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ರಾಜಕೀಯ ದ್ವೇಷವಲ್ಲದೆ ಬೇರೇನೂ ಅಲ್ಲ. ನಾನು ಅಲ್ಪಸಂಖ್ಯಾತರ ಪರವಾಗಿ ಮಾತನಾಡುವಾಗಲೆಲ್ಲಾ ಅವರು ನನ್ನನ್ನು ತಡೆಯಲು ಪ್ರಯತ್ನಿಸುತ್ತಾರೆ, ನಮ್ಮನ್ನು ಹತ್ತಿಕ್ಕಲು ಪ್ರಯತ್ನಿಸುತ್ತಾರೆ. ಸಂಸತ್ತಿನಲ್ಲಿಯೂ ರಾಹುಲ್ (ಗಾಂಧಿ) ಅವರನ್ನು ತಡೆಯಲು ಅವರು ಪ್ರಯತ್ನಿಸಿದರು. ಇದು ಏಜೆನ್ಸಿಗಳ ದುರುಪಯೋಗ ಮತ್ತು ಇದು ರಾಜಕೀಯ ದ್ವೇಷ” ಎಂದು ಆರೋಪಿಸಿದ್ದಾರೆ.
ಹಿಂದಿನಂತೆ ನಾನು ಅವರೊಂದಿಗೆ ಸಹಕರಿಸುತ್ತೇನೆ ಎಂದು ಅವರು ಹೇಳಿದ್ದಾರೆ.
VIDEO | The Enforcement Directorate has summoned businessman Robert Vadra for questioning in a land deal-linked money laundering case. The probe against Vadra is linked to a land deal in Haryana’s Shikohpur.
Here’s what Robert Vadra said outside the ED office, “23,000 document… pic.twitter.com/siGKwZeMo7
— Press Trust of India (@PTI_News) April 15, 2025
ಈ ಪ್ರಕರಣದಲ್ಲಿ ಏಪ್ರಿಲ್ 8 ರಂದು ವಾದ್ರಾ ಅವರಿಗೆ ಮೊದಲ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ಅವರು ಇಡಿ ಮುಂದೆ ಹಾಜರಾಗಿ ಹೇಳಿಕೆ ನೀಡಿರಲಿಲ್ಲ, ಅದಕ್ಕೆ ಬದಲಾಗಿ ಅವರು ಹೊಸ ದಿನಾಂಕವನ್ನು ಕೋರಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಹರಿಯಾಣದ ಶಿಕೋಹ್‌ಪುರದಲ್ಲಿ ನಡೆದ ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ವಾದ್ರಾ ಅವರ ವಿರುದ್ಧ ತನಿಖೆ ನಡೆಯುತ್ತಿದೆ. ಫೆಬ್ರವರಿ 2008 ರಲ್ಲಿ ಈ ಭೂ ವ್ಯವಹಾರ ನಡೆದಿತ್ತು ಎಂದು ಇಡಿ ಹೇಳಿದೆ. ಪ್ರಕರಣದಲ್ಲಿ, ವಾದ್ರಾ ಅವರ ಸ್ಕೈಲೈಟ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯು ಗುರುಗ್ರಾಮ್‌ನ ಶಿಕೋಹ್‌ಪುರದಲ್ಲಿ 3.5 ಎಕರೆ ಭೂಮಿಯನ್ನು ಓಂಕಾರೇಶ್ವರ ಪ್ರಾಪರ್ಟೀಸ್ ಎಂಬ ಸಂಸ್ಥೆಯಿಂದ 7.5 ಕೋಟಿ ರೂ.ಗೆ ಖರೀದಿಸಿತ್ತು. ಈ ಭೂಮಿಯನ್ನು ಕೆಲವೇ ಗಂಟೆಗಳಲ್ಲಿ ರೂಪಾಂತರಿಸಲಾಗಿದೆ ಎಂದು ಆರೋಪಿಸಲಾಗಿದೆ.
ಹಣಕಾಸು ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಇಡಿ ಅವರ ಹೇಳಿಕೆಯನ್ನು ದಾಖಲಿಸಲಿದೆ ಎಂದು ಮೂಲಗಳು ತಿಳಿಸಿವೆ. ವಿವಿಧ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಾದ್ರಾ ಅವರನ್ನು ಫೆಡರಲ್ ತನಿಖಾ ಸಂಸ್ಥೆ ಹಲವು ಬಾರಿ ಪ್ರಶ್ನಿಸಿದೆ. ಹರಿಯಾಣ ಭೂ ವ್ಯವಹಾರ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ರಾಜ್ಯ ಸರ್ಕಾರದ ವಿರುದ್ಧ ಸಾರಿಗೆದಾರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

