Homeಮುಖಪುಟಹರಿಯಾಣ | 90ರಲ್ಲಿ 86 ಶಾಸಕರು ಕೋಟ್ಯಾಧಿಪತಿ; 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ -...

ಹರಿಯಾಣ | 90ರಲ್ಲಿ 86 ಶಾಸಕರು ಕೋಟ್ಯಾಧಿಪತಿ; 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ – ಎಡಿಆರ್ ವರದಿ

- Advertisement -
- Advertisement -

ಹರಿಯಾಣ ವಿಧಾನಸಭೆಗೆ ಹೊಸದಾಗಿ ಚುನಾಯಿತವಾದ 90 ಸದಸ್ಯರ ಪೈಕಿ 86 ಶಾಸಕರು (96%) ಕೋಟ್ಯಾಧಿಪತಿಗಳಾಗಿದ್ದು, 12 (13%) ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವಿಶ್ಲೇಷಣೆ ಮಾಡಿದೆ. ಕೋಟ್ಯಾಧಿಪತಿ ಶಾಸಕರ ಸಂಖ್ಯೆ ಏರಿಕೆಯಾಗಿದ್ದು, 2019ರ ಚುನಾವಣೆಯಲ್ಲಿ 93% ಕೋಟ್ಯಾಧಿಪತಿ ಶಾಸಕರಿದ್ದರು ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

90 ಶಾಸಕರ ಪೈಕಿ 44%ದಷ್ಟು ಮಂದಿ 10 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್ ವರದಿ ಹೇಳಿದೆ. ಮತ್ತೊಂದೆಡೆ 2.2%ರಷ್ಟು ಶಾಸಕರು ಮಾತ್ರ 20 ಲಕ್ಷಕ್ಕಿಂತ ಕಡಿಮೆ ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್‌ ಅಂಕಿಅಂಶಗಳು ಹೇಳಿದೆ.

ಪ್ರತಿ ವಿಜೇತ ಅಭ್ಯರ್ಥಿಯ ಸರಾಸರಿ ಆಸ್ತಿಯು 24.97 ಕೋಟಿ ರೂಪಾಯಿಗಳಷ್ಟಿದ್ದು, ಇದು 2019 ರಲ್ಲಿ 18.29 ಕೋಟಿ ರೂಪಾಯಿಗಳಿತ್ತು ಎಂದು ವರದಿ ಉಲ್ಲೇಖಿಸಿದೆ. 

ಪಕ್ಷವಾರು, 96% ಬಿಜೆಪಿ ಶಾಸಕರು, 95% ಕಾಂಗ್ರೆಸ್ ಶಾಸಕರು ಮತ್ತು 100% ಐಎನ್‌ಎಲ್‌ಡಿ ಶಾಸಕರು 1 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿಯನ್ನು ಘೋಷಿಸಿದ್ದಾರೆ. ಜೊತೆಗೆ ಒಬ್ಬ ಪಕ್ಷೇತರ ಶಾಸಕ 1 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿಯನ್ನು ಘೋಷಿಸಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂಓದಿ: ಗ್ರೇಟ್ ನಿಕೋಬಾರ್ ಯೋಜನೆ ನಿಲ್ಲಿಸಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಗ್ರಹ

ನೂತನ ಹರಿಯಾಣ ವಿಧಾನಸಭೆಯಲ್ಲಿ ಹಿಸಾರ್‌ನ ಸ್ವತಂತ್ರ ಶಾಸಕಿ ಸಾವಿತ್ರಿ ಜಿಂದಾಲ್ ಒಟ್ಟು 270 ಕೋಟಿ ರೂಪಾಯಿ ಆಸ್ತಿಯೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಬಿಜೆಪಿಯ ಶಕ್ತಿ ರಾಣಿ ಶರ್ಮಾ ಮತ್ತು ಶ್ರುತಿ ಚೌಧರಿ ಕ್ರಮವಾಗಿ 145 ಕೋಟಿ ಮತ್ತು 134 ಕೋಟಿ ರೂ. ಆಸ್ತಿಗಳನ್ನು ಹೊಂದಿದ್ದಾರೆ ಎಂದು ಎಡಿಆರ್ ವರದಿ ಹೇಳಿದೆ.

2024 ರಲ್ಲಿ ಒಟ್ಟು 30 ಶಾಸಕರು ಮರು ಆಯ್ಕೆಯಾಗಿದ್ದಾರೆ, ಅವರ ಸರಾಸರಿ ಆಸ್ತಿಯು 2019 ರಿಂದ 2024ರ ವೇಳೆಗೆ 59% ದಷ್ಟು ಹೆಚ್ಚಾಗಿದೆ ಎಂದು ವರದಿ ಹೇಳಿದೆ. ಈ 30 ಶಾಸಕರ ಸರಾಸರಿ ಆಸ್ತಿಯು 9.08 ಕೋಟಿಯಿಂದ 14.46 ಕೋಟಿಗೆ ಏರಿಕೆಯಾಗಿದೆ ಎಂದು ವರದಿ ಹೇಳಿದೆ.

ವಿಜೇತ ಅಭ್ಯರ್ಥಿಗಳ ಪೈಕಿ 12 ಮಂದಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ. ಇದರಲ್ಲಿ ಆರು ಮಂದಿ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದು, ಒಬ್ಬ ಆರೋಪಿ ಕೊಲೆ ಯತ್ನದ ಆರೋಪಿ ಎಂದು ಅಂಕಿಅಂಶಗಳು ಹೇಳಿವೆ. 2019ರಲ್ಲಿ ಏಳು ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳಿದ್ದವು.

ಪಕ್ಷವಾರು, 19% ಕಾಂಗ್ರೆಸ್ ಶಾಸಕರು, 6% ಬಿಜೆಪಿ ಶಾಸಕರು ಮತ್ತು 67% ಪಕ್ಷೇತರ ಶಾಸಕರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇವೆ ಎಂದು ಘೋಷಿಸಿದ್ದಾರೆ.

ಇದನ್ನೂಓದಿ: ಬಾಲ್ಯವಿವಾಹ | 11 ಲಕ್ಷ ಮಕ್ಕಳನ್ನು ಗುರುತಿಸಿದ ಮಕ್ಕಳ ಹಕ್ಕುಗಳ ಆಯೋಗ

ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ, 68% ವಿಜೇತ ಅಭ್ಯರ್ಥಿಗಳು ಪದವೀಧರರು ಅಥವಾ ಉನ್ನತ ಪದವಿಗಳನ್ನು ಹೊಂದಿದ್ದಾರೆ. ಆದರೆ 29% ದಷ್ಟು ಶಾಸಕರು 8 ನೇ ತರಗತಿಯಿಂದ 12 ನೇ ತರಗತಿಯವರೆಗೆ ಮಾತ್ರ ಶೈಕ್ಷಣಿಕ ಹಿನ್ನೆಲೆಯನ್ನು ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಹರಿಯಾಣದ ಹೊಸ ಸದನವು 14% ಮಹಿಳಾ ಶಾಸಕರನ್ನು ಹೊಂದಿದೆ. ಇದು 2019ಕ್ಕೆ ಹೋಲಿಸಿದರೆ 10% ಹೆಚ್ಚಳವಾಗಿದೆ. ಅದಾಗ್ಯೂ, ಈ ಶಾಸಕರಲ್ಲಿ 66% ಶಾಸಕರು 51 ರಿಂದ 80 ವರ್ಷ ವಯಸ್ಸಿನವರಾಗಿದ್ದಾರೆ ಎಂದು ವರದಿ ಹೇಳಿದೆ.

ಹರಿಯಾಣದ ವಿಧಾನಸಭಾ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಆಡಳಿತ ವಿರೋಧಿ ಅಲೆಯ ಮಧ್ಯೆ ಕೂಡಾ ಕಾಂಗ್ರೆಸ್‌ ಅನ್ನು ಅಧಿಕಾರದಿಂದ ಹೊರಗಿಟ್ಟಿದೆ.

ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಗೆದ್ದಿದ್ದರೆ, ಕಾಂಗ್ರೆಸ್‌ 37 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು. ಐಎನ್‌ಎಲ್‌ಡಿ ಕೇವಲ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಜೆಜೆಪಿ ಮತ್ತು ಎಎಪಿಯಂತಹ ಪಕ್ಷಗಳು ಖಾತೆ ತೆರೆಯುವಲ್ಲಿ ವಿಫಲವಾಗಿವೆ.

ವಿಡಿಯೊ ನೋಡಿ: ಗಾಂಧೀಜಿಯವರನ್ನು ಕೊಂದ ಮನಸ್ಥಿತಿಯವರೇ ಗೌರಿ ಲಂಕೇಶ್‌ರನ್ನು ಹತ್ಯೆ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...