Homeಮುಖಪುಟತ್ರಿವಳಿ ಕೊಲೆ ಪ್ರಕರಣ: ಹೆಂಡತಿ, ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

ತ್ರಿವಳಿ ಕೊಲೆ ಪ್ರಕರಣ: ಹೆಂಡತಿ, ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

- Advertisement -
- Advertisement -

ಕಳೆದ ಎರಡು ತಿಂಗಳ ಹಿಂದೆ ಹರಿಯಾಣದಲ್ಲಿ ಆತಂಕ ಮೂಡಿಸಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಭದೋಹಿಯಲ್ಲಿ ಪಾಣಿಪತ್ ಅಪರಾಧ ವಿಭಾಗವು ಉತ್ತರ ಪ್ರದೇಶ ಪೊಲೀಸರ ಸಹಾಯದಿಂದ ಆರೋಪಿಯನ್ನು ಬಂಧಿಸಿದೆ.

ಹರಿಯಾಣದ ಮನೆಯೊಂದರಲ್ಲಿ ಕಳೆದ ಎರಡು ತಿಂಗಳ ಹಿಂದೆ ಮೂರು ಅಸ್ಥಿಪಂಜರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ಪೊಲೀಸರು ಎಂಟು ಮಂದಿಯ ತಂಡವನ್ನು ರಚಿಸಿ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.

ಆರೋಪಿ ಎಹ್ಸಾನ್ ತನ್ನ ಪತ್ನಿ ಮತ್ತು 10 ಮತ್ತು 14 ವರ್ಷ ವಯಸ್ಸಿನ ಇಬ್ಬರು ಮಕ್ಕಳನ್ನು ಪಾಣಿಪತ್‌ನ ಶಿವನಗರ ಪ್ರದೇಶದಲ್ಲಿ ಸುಮಾರು ಮೂರು ವರ್ಷಗಳ ಹಿಂದೆ ಕೊಲೆ ಮಾಡಿದ್ದನು. ಶವಗಳನ್ನು ಮನೆಯಲ್ಲಿ ಹೂಳಿದ್ದ ಆರೋಪಿ, ಏನು ನಡೆದಿಲ್ಲ ಎನ್ನುವಂತೆ ಮನೆಯನ್ನು ಪವನ್ ಎಂಬ ವ್ಯಕ್ತಿಗೆ ಮಾರಿ ಅಲ್ಲಿಂದ ಪರಾರಿಯಾಗಿದ್ದರು.

ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ಕಳೆದ ಎರಡು ತಿಂಗಳ ಹಿಂದೆ ಮನೆಯಲ್ಲಿ ಇರುವೆಗಳು ಹೆಚ್ಚಾದ ಕಾರಣ ಅವುಗಳನ್ನು ನಾಶಗೊಳಿಸಲು, ಮನೆಯನ್ನು ಸ್ವಚ್ಛಗೊಳಿಸುವ ಉದ್ದೇಶದಿಂದ ಮನೆಯ ಹೊಸ ಮಾಲೀಕ ಪವನ್, ನೆಲವನ್ನು ಆಗಿದಾಗ ಮೂರು ಅಸ್ಥಿ ಪಂಜರಗಳು ಕಾಣಿಸಿಕೊಂಡಿದ್ದವು. ನಂತರ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಚಿತ್ರಕೂಟ್ ಪುರಿ ತಿಳಿಸಿದ್ದಾರೆ.

ಪಾಣಿಪತ್‌ನ ಎಂಟು ಸದಸ್ಯರ ಪೊಲೀಸ್ ತಂಡ ಭದೋಹಿ ಪೊಲೀಸರ ಸಹಾಯದಿಂದ ಬುಧವಾರ ಮರಿಯಾದ್‌ಪಟ್‌ನ ಕಾನ್ಶಿರಾಮ್ ಕಾಲೋನಿಯಲ್ಲಿರುವ ಬಾಡಿಗೆ ಮನೆಯಲ್ಲಿ ತ್ರಿವಳಿ ಕೊಲೆ ಆರೋಪಿ ಎಹ್ಸಾನ್‌ನನ್ನು ಪತ್ತೆ ಹಚ್ಚಿ ಬಂಧಿಸಿದೆ.

ಹೆಂಡತಿ ಮಕ್ಕಳನ್ನು ಕೊಲೆ ಮಾಡಿ ಮನೆಯಲ್ಲಿ ಹೂಳಿದ್ದ ಆರೋಪಿ ಕಳೆದ ಎರಡೂವರೆ ವರ್ಷಗಳಿಂದ ಕಾನ್ಶಿರಾಮ್ ಕಾಲೋನಿಯಲ್ಲಿ ವಾಸಿಸುತ್ತಿದ್ದರು ಎಂದು ಕಾನ್ಶಿರಾಮ್ ಕಾಲೋನಿ ನಿವಾಸಿಗಳು ಪೊಲೀಸರಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ: ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆ ಹಿಡಿದು ತಮಿಳುನಾಡಿನ ರೈತರಿಂದ ಪ್ರತಿಭಟನೆ

0
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡಿನ ಸುಮಾರು 200ರೈತರು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆ ಮತ್ತು ಮೂಳೆಗಳನ್ನು ತಮಿಳುನಾಡಿನಿಂದ ದೆಹಲಿಗೆ ಹೊತ್ತೊಯ್ದಿದ್ದಾರೆ. ಕೃಷಿಯಲ್ಲಿ...