Homeಮುಖಪುಟಆಮ್ಲಜನಕ ಸಾಗಣೆಗೆ ಹರಿಯಾಣದ ಅಧಿಕಾರಿಯಿಂದ ತಡೆ: ಮನೀಶ್ ಸಿಸೋಡಿಯಾ

ಆಮ್ಲಜನಕ ಸಾಗಣೆಗೆ ಹರಿಯಾಣದ ಅಧಿಕಾರಿಯಿಂದ ತಡೆ: ಮನೀಶ್ ಸಿಸೋಡಿಯಾ

- Advertisement -
- Advertisement -

ಹರಿಯಾಣ ಸರ್ಕಾರದ ಅಧಿಕಾರಿಯೊಬ್ಬರು ಫರಿದಾಬಾದ್‌ನ ಆಮ್ಲಜನಕ ಸ್ಥಾವರದಿಂದ ದೆಹಲಿಗೆ ಆಮ್ಲಜನಕ ಪೂರೈಕೆಯಾಗುವುದಕ್ಕೆ ತಡೆಯೊಡ್ಡಿದ್ದರು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ  ಆರೋಪಿಸಿದ್ದಾರೆ.

ದೆಹಲಿಯ ಆಮ್ಲಜನಕದ ಪ್ರಮಾಣವನ್ನು 378 ಮೆಟ್ರಿಕ್ ಟನ್‌ನಿಂದ 700 ಮೆಟ್ರಿಕ್ ಟನ್‌ಗೆ ಹೆಚ್ಚಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಸರ್ಕಾರ ಒತ್ತಾಯಿಸುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಹರಿಯಾಣ ಸರ್ಕಾರದ ಅಧಿಕಾರಿಯೊಬ್ಬರು ಫರಿದಾಬಾದ್‌ನ ಸ್ಥಾವರದಿಂದ ದೆಹಲಿಗೆ ಆಮ್ಲಜನಕ ಪೂರೈಕೆಯಾಗುವುದನ್ನು ನಿಲ್ಲಿಸಿದ್ದಾರೆ. ಉತ್ತರಪ್ರದೇಶದಲ್ಲಿಯೂ ಮಂಗಳವಾರ ಇದೇ ರೀತಿಯ ಘಟನೆ ನಡೆದಿದೆ. ಇದರಿಂದ ಕೆಲವು ಆಸ್ಪತ್ರೆಗಳಲ್ಲಿ ಸಮಸ್ಯೆಗೆ ಕಾರಣವಾಯಿತು, ಈಗ ಆಮ್ಲಜನಕದ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಸಿಸೋಡಿಯಾ ಹೇಳಿದ್ದಾರೆ.

ಇದನ್ನೂ ಓದಿ: ಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

“ಹೆಚ್ಚಿದ ಆಮ್ಲಜನಕದ ಬಳಕೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಆಮ್ಲಜನಕ ಕೋಟಾವನ್ನು 700 ಮೆಟ್ರಿಕ್ ಟನ್‌ಗೆ ಹೆಚ್ಚಿಸಬೇಕೆಂದು ನಾವು ಮತ್ತೆ ಒತ್ತಾಯಿಸುತ್ತೇವೆ. ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ ಸೇರಿದಂತೆ ಹಲವಾರು ರಾಜ್ಯಗಳ ರೋಗಿಗಳನ್ನು ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ” ಎಂದು ಸಿಸೋಡಿಯಾ ಮಾಹಿತಿ ನೀಡಿದ್ದಾರೆ.

ದೆಹಲಿಯ ಹಲವಾರು ಆಸ್ಪತ್ರೆಗಳಿಗೆ ಹರಿಯಾಣ ಸರ್ಕಾರವು ಆಮ್ಲಜನಕವನ್ನು ಪೂರೈಸಲು ಅನುಮತಿಸುತ್ತಿಲ್ಲ. ನೂರಾರು ಕೊರೊನಾ ವೈರಸ್ ಸೋಂಕಿತ ರೋಗಿಗಳು ತಮ್ಮ ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಆಮ್ಲಜನಕ ಪೂರೈಕೆಮಾಡಲು ನಮ್ಮಲ್ಲಿ ಸೀಮಿತ ಸ್ಟಾಕ್ ಮಾತ್ರ ಉಳಿದಿದೆ. ಇದರ ನಡುವೆ ಹರಿಯಾಣ ಸರ್ಕಾರ ಇಂತಹ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

“ಹರಿಯಾಣದಿಂದ ದೆಹಲಿಗೆ ಆಮ್ಲಜನಕ ಪೂರೈಕೆಯನ್ನು ನಿಲ್ಲಿಸುವುದರಿಂದ ಹೆಚ್ಚಿನ ಸಂಖ್ಯೆಯ ಆಸ್ಪತ್ರೆಗಳ ಮೇಲೆ ತೀವ್ರತರದ ಪರಿಣಾಮ ಬೀರುತ್ತದೆ. ಇದರಿಂದ ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ಸಿಸೋಡಿಯಾ ಒತ್ತಾಯಿಸಿದ್ದರು.


ಇದನ್ನೂ ಓದಿ: ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಬಾಂಡ್‌ ಹಗರಣ: ಸುಪ್ರೀಂ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆಗೆ ಮನವಿ

0
ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪ್ರೇರಿತ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಶಂಕಿತ ಹಗರಣದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು...