ಸೋಮವಾರ (ಜುಲೈ 8) ಹರಿಯಾಣದ ಪಂಚಕುಲದ ಪಿಂಜೋರ್‌ನಲ್ಲಿ ಗುಡ್ಡಗಾಡು ಪ್ರದೇಶದ ಬಳಿ ವೇಗವಾಗಿ ಬಂದ ಬಸ್ ಒಂದು, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸುಮಾರು 50 ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಪಿಂಜೋರ್‌ನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
“ಹರಿಯಾಣ ರೋಡ್‌ವೇಸ್ ಬಸ್ ಅಪಘಾತದಲ್ಲಿ ಗಾಯಗೊಂಡವರಲ್ಲಿ ಕೆಲವು ಶಾಲಾ ಮಕ್ಕಳು ಸೇರಿದ್ದಾರೆ” ಎಂದು ಕಲ್ಕಾದ ಪೊಲೀಸ್ ಅಧಿಕಾರಿಯೊಬ್ಬರು ದೂರವಾಣಿಯಲ್ಲಿ ತಿಳಿಸಿದ್ದಾರೆ. ಅಪಘಾತದ ನಂತರ, ಹರಿಯಾಣ ರೋಡ್‌ವೇಸ್ ಬಸ್‌ನ ಚಾಲಕ ಮತ್ತು ಕಂಡಕ್ಟರ್ ಅನ್ನು ಅಮಾನತುಗೊಳಿಸಿದೆ.
ಹರಿಯಾಣ ರೋಡ್‌ವೇಸ್ ಮಿನಿಬಸ್‌ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಮತ್ತು ಕಂಡಕ್ಟರ್ ಗಾಯಗಳಿಂದಾಗಿ ಪಂಚಕುಲದ ಸೆಕ್ಟರ್ 6 ರಲ್ಲಿನ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ ತುಂಬಿದ್ದು, ಸುಮಾರು 70 ಮಕ್ಕಳಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಗಾಯಾಳುಗಳನ್ನು ನಗರದ ಪಿಂಜೋರ್ ಆಸ್ಪತ್ರೆ ಮತ್ತು ಸೆಕ್ಟರ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಂಜಾನೆ ಅಪಘಾತದ ನಂತರ ಗಂಭೀರವಾಗಿರುವ ಮಹಿಳಾ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಂಡೀಗಢಕ್ಕೆ ರವಾನಿಸಲಾಗಿದೆ.
ಆಸ್ಪತ್ರೆಗಳ ದೃಶ್ಯಗಳಲ್ಲಿ ಸ್ಟ್ರೆಚರ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ನೀಡುತ್ತಿರುವುದನ್ನು ಮತ್ತು ವೈದ್ಯರು ಅವರ ಆರೋಗ್ಯವನ್ನು ವಿಚಾರಿಸುತ್ತಿರುವುದನ್ನು ಕಾಣಬಹುದಾಗಿದೆ. ಹರಿಯಾಣ ರೋಡ್‌ವೇಸ್ ತಕ್ಷಣದಿಂದ ಜಾರಿಗೆ ಬರುವಂತೆ ಬಸ್‌ನ ಚಾಲಕ ಮತ್ತು ಕಂಡಕ್ಟರ್ ಅನ್ನು ಅಮಾನತುಗೊಳಿಸಿದೆ.
ಇದನ್ನೂ ಓದಿ; ವರ್ಲಿ ಹಿಟ್ ಅಂಡ್ ರನ್ ಪ್ರಕರಣ: ಈವರೆಗೆ ಇಬ್ಬರ ಬಂಧನ, ಪ್ರಮುಖ ಆರೋಪಿ ಪತ್ತೆಗೆ ಲುಕೌಟ್ ನೋಟಿಸ್


