Homeಮುಖಪುಟರೈತ ಹೋರಾಟಗಾರ ನವದೀಪ್ ಸಿಂಗ್ ಜಲ್ಬೇರಾ ಬಂಧನ

ರೈತ ಹೋರಾಟಗಾರ ನವದೀಪ್ ಸಿಂಗ್ ಜಲ್ಬೇರಾ ಬಂಧನ

- Advertisement -
- Advertisement -

ರೈತರ ‘ದೆಹಲಿ ಚಲೋ’ ಪ್ರತಿಭಟನೆಯ ವೇಳೆ ದಾಖಲಿಸಿದ್ದ ಎಫ್‌ಐಆರ್‌ಗೆ  ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ರೈತ ಹೋರಾಟಗಾರ ನವದೀಪ್ ಸಿಂಗ್ ಜಲ್ಬೇರಾ ಅವರನ್ನು ಬಂಧಿಸಿದ್ದಾರೆ.

ಫೆಬ್ರವರಿ 21ರಂದು ಪಂಜಾಬ್-ಹರಿಯಾಣ ಗಡಿಯಲ್ಲಿ ಪೊಲೀಸರೊಂದಿಗಿನ ಘರ್ಷಣೆಯಲ್ಲಿ ಹುತಾತ್ಮರಾದ ಪಂಜಾಬ್‌ನ ಬಟಿಂಡಾದ ರೈತ ಶುಭಕರನ್ ಸಿಂಗ್ (21) ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮುಕ್ತಿ ಮೋರ್ಚಾ (ಕೆಎಂಎಂ) ನಾಳೆ ಸಭೆಯನ್ನು ಆಯೋಜಿಸಿತ್ತು. ಆದರೆ ಇದಕ್ಕೂ ಮುನ್ನಾ ಈ ಮಹತ್ವದ ಬೆಳವಣಿಗೆ ನಡೆದಿದೆ. ಅಂಬಾಲಾ ಪೊಲೀಸರು ಗುರುವಾರ ಮೊಹಾಲಿಯಿಂದ ನವದೀಪ್ ಸಿಂಗ್ ಜಲಬೇರಾ ಅವರನ್ನು ಬಂಧಿಸಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎರಡು ದಿನಗಳ ಕಾಲ ಹರ್ಯಾಣ ಪೊಲೀಸ್‌ನ ಅಪರಾಧ ತನಿಖಾ ಸಂಸ್ಥೆಯ ಕಸ್ಟಡಿಗೆ ನೀಡಲಾಗಿದೆ.

ಪೊಲೀಸರ ಪ್ರಕಾರ, ಫೆಬ್ರವರಿ 13 ರಂದು 307 (ಕೊಲೆ ಯತ್ನ) ಸೇರಿದಂತೆ ವಿವಿಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾದ ಪ್ರಕರಣ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಜಲ್ಬೇರಾ ಅವರನ್ನು ಬಂಧಿಸಲಾಗಿದೆ.

ಅಂಬಾಲಾ ಮೂಲದ ಜಲ್ಬೆರಾ ಅವರು ನವೆಂಬರ್ 2020ರಲ್ಲಿ ಕೇಂದ್ರದ ಮೂರು  ಕೃಷಿ ಕಾನೂನುಗಳ ವಿರುದ್ಧ ರೈತರ ಚಳವಳಿಯ ಸಮಯದಲ್ಲಿ ಪೊಲೀಸ್ ವಾಟರ್ ಟಾಂಕ್‌ ಮೇಲೆ ಏರಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದರು. 2020ರಲ್ಲಿ ಕೃಷಿ ಕಾನೂನುಗಳ ವಿರುದ್ಧ ಸಾವಿರಾರು ರೈತರು ದೆಹಲಿಯತ್ತ ಮೆರವಣಿಗೆ ನಡೆಸಿದ್ದರು ಮತ್ತು ಭಾರೀ ಪೊಲೀಸ್ ಬ್ಯಾರಿಕೇಡ್‌ಗಳ ಮಧ್ಯೆ ರಾಜಧಾನಿಯ ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ರೈತರು ತಿಂಗಳುಗಟ್ಟಲೆ ಪ್ರತಿಭಟನೆ ನಡೆಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಜಲಬೇರಾ ಪರ ವಕೀಲ ರೋಹಿತ್ ಜೈನ್ ಹೇಳಿದ್ದಾರೆ. ಎಫ್‌ಐಆರ್‌ನಲ್ಲಿ ಹಲವಾರು ಉನ್ನತ ರೈತ ಮುಖಂಡರು ಸೇರಿದಂತೆ 20 ಜನರನ್ನು ಹೆಸರಿಸಲಾಗಿದೆ. ಪೊಲೀಸರು ತಮ್ಮ ವಿರುದ್ಧ ಹೊರಿಸಿರುವ ಆರೋಪಗಳನ್ನು ರೈತರು ನಿರಾಕರಿಸಿದ್ದಾರೆ ಎಂದು ಜೈನ್ ಹೇಳಿದ್ದಾರೆ.

ಆಂದೋಲನಕ್ಕೆ ಬಳಸಿದ ಕಾರು ಮತ್ತು ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಲು ಜಲಬೇರಾ ಅವರ ಬಂಧನದ ಅಗತ್ಯವಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು. ಪಂಜಾಬ್ ಮತ್ತು ಹರಿಯಾಣ ನಡುವಿನ ಎರಡು ಗಡಿ ಭಾಗಗಳಲ್ಲಿ ಮೊಕ್ಕಾಂ ಹೂಡಿರುವ ರೈತರು ಇತ್ತೀಚೆಗೆ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಹೇಳಿದ್ದರು.

ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸಂಬಂಧಿಸಿದ ಕಾನೂನು ಖಾತರಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಅಂಗೀಕರಿಸುವಂತೆ ಬಿಜೆಪಿ ನೇತೃತ್ವದ ಕೇಂದ್ರವನ್ನು ಒತ್ತಾಯಿಸಲು ‘ದೆಹಲಿ ಚಲೋ’ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಪೊಲೀಸರು ರೈತರನ್ನು ತಡೆದಿದ್ದರು. ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖಾನೌರಿಯಲ್ಲಿ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಸಿಂಗ್ ಕೊಲ್ಲಲ್ಪಟ್ಟಿದ್ದರು. ಘರ್ಷಣೆಯಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಕೂಡ ಗಾಯಗೊಂಡಿದ್ದರು.

ಇದನ್ನು ಓದಿ: ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...

ಪರಿಶಿಷ್ಟ ಜಾತಿ ಪಟ್ಟಿಗೆ ಜಮ್ಮು-ಕಾಶ್ಮೀರದ ವಾಲ್ಮೀಕಿ ಸಮುದಾಯ: ಒಕ್ಕೂಟ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ವಾಲ್ಮೀಕಿ ಸಮುದಾಯವನ್ನು ಈಗ ಅಧಿಕೃತವಾಗಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬುಧವಾರ ಸಂಸತ್ತಿಗೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆಗೊಳಿಸಲಾದ...

ತಿರುಪತಿ ದೇಣಿಗೆ ಕಳ್ಳತನ ಪ್ರಕರಣ: ಕಾನೂನು ಕ್ರಮ ತೆಗೆದುಕೊಳ್ಳವಂತೆ ‘ಸಿಐಡಿ-ಎಸಿಬಿ’ಗೆ ಹೈಕೋರ್ಟ್ ನಿರ್ದೇಶನ

ತಿರುಮಲ ತಿರುಪತಿ ದೇವಸ್ಥಾನದ ಪರಕಮಣಿ (ದೇಣಿಗೆ ಪೆಟ್ಟಿಗೆ) ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ ಹೈಕೋರ್ಟ್ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಭ್ರಷ್ಟಾಚಾರ ನಿಗ್ರಹ ದಳ...

ದಲಿತರ ಮನೆಯಲ್ಲಿ ಊಟ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಗ್ರಾಮೀಣ ಭಾರತದ ಕೆಲವು ಭಾಗಗಳಲ್ಲಿ ಜಾತಿ ಪೂರ್ವಾಗ್ರಹಗಳು ಎಷ್ಟು ಆಳವಾಗಿ ಉಳಿದಿವೆ ಎಂಬುದನ್ನು ನೆನಪಿಸುವ ರೀತಿಯಲ್ಲಿ, ಮಧ್ಯಪ್ರದೇಶದ ರೈಸೇನ್ ಜಿಲ್ಲೆಯ ಹಳ್ಳಿಯೊಂದರಿಂದ ಸಾಮಾಜಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆಯ ಪ್ರಕರಣ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ. ಡಿಸೆಂಬರ್...

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...