Homeಮುಖಪುಟದಿಲ್ಲಿ ಚಲೋ: ಶಂಭು ಗಡಿಯಲ್ಲಿ ರೈತರ ಮೇಲೆ ಪೊಲೀಸ್‌ ದೌರ್ಜನ್ಯ

ದಿಲ್ಲಿ ಚಲೋ: ಶಂಭು ಗಡಿಯಲ್ಲಿ ರೈತರ ಮೇಲೆ ಪೊಲೀಸ್‌ ದೌರ್ಜನ್ಯ

- Advertisement -
- Advertisement -

ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಕಾನೂನು, ಪಿಂಚಣಿ ಮತ್ತು ವಿಮಾ ಸೌಲಭ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಿಲ್ಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದು, ಬಿಜೆಪಿ ಆಡಳಿತದ ಹರ್ಯಾಣದಲ್ಲಿ ಪೊಲೀಸರು ಶಂಭು ಗಡಿಯಲ್ಲಿ ಪ್ರತಿಭಟನೆಗೆ ತೆರಳುತ್ತಿದ್ದ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿ ರೈತರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಹರ್ಯಾಣ ಪೊಲೀಸರು ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದ್ದು, ಗಡಿಯಲ್ಲಿ ರೈತರ ಟ್ರಕ್‌ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ರೈತ ಸಂಘದ ಮುಖಂಡರು ಹಾಗೂ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಅರ್ಜುನ್ ಮುಂಡಾ ನಡೆಸಿದ ಮಾತುಕತೆ ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ ರೈತರು ದೆಹಲಿ ಚಲೋ ಯಾತ್ರೆಯನ್ನು ಮುಂದುವರಿಸಿದ್ದಾರೆ. ಬವಾನಾ ಕ್ರೀಡಾಂಗಣವನ್ನು ತಾತ್ಕಾಲಿಕ ಕಾರಾಗೃಹವನ್ನಾಗಿ ಪರಿವರ್ತಿಸುವಂತೆ ದೆಹಲಿ ಸರ್ಕಾರಕ್ಕೆ ಕೇಂದ್ರ ಸರ್ಕಾರ ಮನವಿ ಮಾಡಿತ್ತು. ಮನವಿಯನ್ನು ತಿರಸ್ಕರಿಸಿದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್, ರೈತರ ಬೇಡಿಕೆಗಳು ನಿಜವಾದವು ಮತ್ತು ಶಾಂತಿಯುತ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕು. ಕೇಂದ್ರ ಸರ್ಕಾರ ವಾಸ್ತವವಾಗಿ ಅವರನ್ನು ಮಾತುಕತೆಗೆ ಆಹ್ವಾನಿಸಬೇಕು ಮತ್ತು ಅವರ ನಿಜವಾದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯಲು ಪ್ರಯತ್ನಿಸಬೇಕು. ನಾಡಿನ ರೈತರು ನಮ್ಮ ಅನ್ನದಾತರು, ಅವರನ್ನು ಬಂಧಿಸಿ ಈ ರೀತಿ ನಡೆಸಿಕೊಳ್ಳುವುದು ಅವರ ಗಾಯಕ್ಕೆ ಉಪ್ಪು ಸವರಿದಂತಾಗುತ್ತದೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ನಾವು ಬೆಂಬಲಿಸಲು  ಸಾಧ್ಯವಿಲ್ಲ. ಹೀಗಾಗಿ ಕ್ರೀಡಾಂಗಣವನ್ನು ಜೈಲಾಗಿ ಪರಿವರ್ತಿಸಲು ಒಪ್ಪಿಗೆ ನೀಡಲಾಗದು ಎಂದು ಹೇಳಿದ್ದಾರೆ.

ಹರ್ಯಾಣ ಮತ್ತು ಉತ್ತರಪ್ರದೇಶದ ಗಡಿ ಪ್ರದೇಶಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಕಂಡುಬಂದಿದ್ದು, ಪೊಲೀಸರು ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಬ್ಯಾರಿಕೇಡ್‌ಗಳು, ಕಾಂಕ್ರೀಟ್ ಬ್ಲಾಕ್‌ಗಳು, ಕಬ್ಬಿಣದ ಮೊಳೆಗಳನ್ನು ಹಾಕಿ ರೈತರು ರಾಜಧಾನಿಗೆ ಪ್ರವೇಶಿಸದಂತೆ ನಿರ್ಬಂಧವನ್ನು ವಿಧಿಸಲಾಗಿದೆ. ದೆಹಲಿ ಪೊಲೀಸರು ಸೋಮವಾರ ನಗರದಾದ್ಯಂತ ಸೆಕ್ಷನ್ 144ನ್ನು ಜಾರಿಗೊಳಿಸಿದ್ದಾರೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಗಡಿಗಳನ್ನು ಭದ್ರಪಡಿಸಿದ್ದಾರೆ. ಹೆಚ್ಚುವರಿಯಾಗಿ ಯಾವುದೇ ಚಟುವಟಿಕೆಗಳ ಬಗ್ಗೆ ನಿಗಾ ಇಡಲು ಡ್ರೋನ್‌ಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳಂತಹ ಕಣ್ಗಾವಲು ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುತ್ತಿದೆ.

ರಾಜೀವ್ ಚೌಕ್, ಮಂಡಿ ಹೌಸ್, ಸೆಂಟ್ರಲ್ ಸೆಕ್ರೆಟರಿಯೇಟ್, ಪಟೇಲ್ ಚೌಕ್, ಉದ್ಯೋಗ ಭವನ, ಜನಪಥ್ ಮತ್ತು ಬರಾಖಂಬಾ ರಸ್ತೆಯ ಮೆಟ್ರೋ ನಿಲ್ದಾಣಗಳ ಕೆಲವು ಗೇಟ್‌ಗಳನ್ನು ಮುಚ್ಚಲಾಗಿದೆ. ಬೃಹತ್ ಭದ್ರತೆಗೆ ಬೆದರದ ರೈತರು ದೆಹಲಿಯತ್ತ ಸಾಗಿದ್ದಾರೆ. ರಾಜ್ಯ ಸರ್ಕಾರಗಳು ದೆಹಲಿಗೆ ತೆರಳದಂತೆ ತಡೆದರೆ  ಅನಿರ್ದಿಷ್ಟಾವಧಿವರೆಗೆ ಧರಣಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್ ಅವರು ರೈತರೊಂದಿಗೆ ಚರ್ಚೆಗೆ ಸರ್ಕಾರ ಏಕೆ ಸಿದ್ಧವಾಗಿಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಬೇಕು. ನಾವು ಭಾರತದ ಜನರಿಗೆ ಹೇಳಲು ಬಯಸುತ್ತೇವೆ, ನಾವು ಸರ್ಕಾರದ ವಿರುದ್ಧವಲ್ಲ, ನಾವು ಪರಿಹಾರವನ್ನು ಕಂಡುಹಿಡಿಯಲು ಪ್ರಯತ್ನಿಸಿದ್ದೇವೆ. ಅವರು ಪೊಲೀಸರನ್ನು ಕಳುಹಿಸುತ್ತಿದ್ದಾರೆ ಮತ್ತು ಹರಿಯಾಣದ ಪ್ರತಿಯೊಂದು ಹಳ್ಳಿಗಳಲ್ಲಿ ಜಲಫಿರಂಗಿಗಳನ್ನು ಬಳಸುತ್ತಿದ್ದಾರೆ. ಹರ್ಯಾಣದಲ್ಲಿ ರೈತರಿಗೆ ಹಿಂಸೆ ನೀಡುತ್ತಿದ್ದಾರೆ. ಈ ಎರಡೂ ರಾಜ್ಯಗಳು ಗಡಿಯನ್ನು ಬಂದ್‌ ಮಾಡಿರುವ ರೀತಿ ನೋಡಿದರೆ ಅದು ಭಾರತದ ಭಾಗವಾಗಿಲ್ಲದಂತೆ ತೋರುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: 17ನೇ ಲೋಕಸಭೆ: ಸಂಸತ್ತಿನಲ್ಲಿ ಒಂದೇ ಒಂದು ಮಾತನ್ನಾಡದ ಕರ್ನಾಟಕದ ನಾಲ್ವರು ಸೇರಿ 6 ಮಂದಿ ಬಿಜೆಪಿ ಸಂಸದರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...