HomeUncategorizedಹರಿಯಾಣ: ರಾಜ್ಯದ 90 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭ; ಚುನಾವಣೆ ಬಗ್ಗೆ ಸಂಕ್ಷಿಪ್ತ ವಿವರ

ಹರಿಯಾಣ: ರಾಜ್ಯದ 90 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭ; ಚುನಾವಣೆ ಬಗ್ಗೆ ಸಂಕ್ಷಿಪ್ತ ವಿವರ

- Advertisement -
- Advertisement -

ಬಿಗಿ ಭದ್ರತೆಯ ನಡುವೆ ಹರಿಯಾಣದ ಎಲ್ಲಾ 90 ವಿಧಾನಸಭಾ ಸ್ಥಾನಗಳಿಗೆ ಶನಿವಾರ ಬೆಳಗ್ಗೆ ಮತದಾನ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್ ನಾಯಕರಾದ ಭೂಪಿಂದರ್ ಸಿಂಗ್ ಹೂಡಾ ಮತ್ತು ವಿನೇಶ್ ಫೋಗಟ್, ಜೆಜೆಪಿಯ ದುಷ್ಯಂತ್ ಚೌಟಾಲಾ ಮತ್ತು 1,027 ಇತರ ಅಭ್ಯರ್ಥಿಗಳ ಭವಿಷ್ಯವು ಎರಡು ಕೋಟಿಗೂ ಹೆಚ್ಚು ಜನರು ಮತ ಚಲಾಯಿಸಲು ಅರ್ಹತೆ ಹೊಂದಿರುವ ಈ ಚುನಾವಣೆಯಲ್ಲಿ ನಿರ್ಧಾರವಾಗಲಿದೆ.ಹರಿಯಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಡಳಿತಾರೂಢ ಬಿಜೆಪಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದ್ದು, ಆದರೆ ಕಾಂಗ್ರೆಸ್ 10 ವರ್ಷಗಳ ನಂತರ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂಓದಿ: ಸರ್ಕಾರವನ್ನು ಟೀಕಿಸುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತಿಲ್ಲ: ಸುಪ್ರೀಂ ಕೋರ್ಟ್

8,821 ನೂರು ವರ್ಷ ವಯಸ್ಸು ಕಳೆದ ಮತದಾರರು ಸೇರಿದಂತೆ 2,03,54,350 ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಹರಿಯಾಣದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಪಂಕಜ್ ಅಗರ್ವಾಲ್ ಅವರು ಹೇಳಿದ್ದಾರೆ. ಚುನಾವಣೆಯಲ್ಲಿ 101 ಮಹಿಳೆಯರು ಮತ್ತು 464 ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ ಒಟ್ಟು 1,031 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಒಟ್ಟು 20,632 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಅಗರ್ವಾಲ್ ಹೇಳಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿ, ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಐಎನ್‌ಎಲ್‌ಡಿ-ಬಿಎಸ್‌ಪಿ ಮತ್ತು ಜೆಜೆಪಿ-ಆಜಾದ್ ಸಮಾಜ ಪಕ್ಷದ ಮೈತ್ರಿಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ. ಕಳೆದ 2019 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್ 31 ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) 10 ಸ್ಥಾನಗಳನ್ನು ಗೆದ್ದಿತ್ತು.

ಕಾಂಗ್ರೆಸ್ ತನ್ನ ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷವಾದ ಸಿಪಿಐ(ಎಂ) ಗೆ ಭಿವಾನಿ ಸ್ಥಾನವನ್ನು ಬಿಟ್ಟುಕೊಟ್ಟಿದೆ. ಸಿರ್ಸಾ ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸದೆ, ಹರಿಯಾಣ ಲೋಕಿತ್ ಪಕ್ಷದ ಮುಖ್ಯಸ್ಥ ಗೋಪಾಲ್ ಕಾಂಡಾ ಅವರಿಗೆ ಬಿಟ್ಟುಕೊಟ್ಟಿದೆ. ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಡುವ ಸಾಧ್ಯತೆ ಇದೆ. ಇದರ ನಡುವೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಕೆಲವು ನಾಯಕರು ಬಂಡಾಯವೆದ್ದು ಕಣದಲ್ಲಿದ್ದಾರೆ.

ಇದನ್ನೂಓದಿ: ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 30 ಮಾವೋವಾದಿಗಳ ಹತ್ಯೆ

ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತವಾಗಿ ನಡೆಸಲು ಹರಿಯಾಣ ಪೊಲೀಸರು ಸಂಪೂರ್ಣ ಸನ್ನದ್ಧರಾಗಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಶತ್ರುಜೀತ್ ಕಪೂರ್ ಶುಕ್ರವಾರ ಹೇಳಿದ್ದಾರೆ. ಸುಮಾರು 30,000 ಪೊಲೀಸ್ ಸಿಬ್ಬಂದಿ ಮತ್ತು 225 ಅರೆಸೇನಾ ಕಂಪನಿಗಳನ್ನು ನಿಯೋಜಿಸಲಾಗಿದೆ. ಸಾಕಷ್ಟು ಸಂಖ್ಯೆಯಲ್ಲಿ ಗೃಹ ರಕ್ಷಕ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ.

3,616 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು 145 ಅತಿ ಸೂಕ್ಷ್ಮ ಎಂದು ಪರಿಗಣಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಮಾದರಿ ನೀತಿ ಸಂಹಿತೆಯ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು, 516 ಫ್ಲೈಯಿಂಗ್ ಸ್ಕ್ವಾಡ್‌ಗಳು, 469 ಸ್ಥಿರ-ಕಣ್ಗಾವಲು ತಂಡಗಳು ಮತ್ತು 32 ತ್ವರಿತ-ಪ್ರತಿಕ್ರಿಯೆ ತಂಡಗಳನ್ನು ರಚಿಸಿದೆ. ಹೆಚ್ಚುವರಿಯಾಗಿ, 1,156 ಗಸ್ತು ತಂಡಗಳು ಪರಿಸ್ಥಿತಿಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತಿವೆ ಎಂದು ಡಿಜಿಪಿ ಹೇಳಿದರು.

ಒಟ್ಟು ಮತದಾರರಲ್ಲಿ 1,07,75,957 ಪುರುಷರು, 95,77,926 ಮಹಿಳೆಯರು ಮತ್ತು 467 ತೃತೀಯಲಿಂಗಿಗಳಾಗಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. 18 ರಿಂದ 19 ವರ್ಷದೊಳಗಿನ 5,24,514 ಮತದಾರರು ಇದ್ದು, 1,49,142 ವಿಕಲಚೇತನ ಮತದಾರರಿದ್ದಾರೆ. ಒಟ್ಟು 2,31,093 ಮತದಾರರು 85 ವರ್ಷ ಮೇಲ್ಪಟ್ಟವರಾಗಿದ್ದು, ಇದರಲ್ಲಿ 89,940 ಪುರುಷರು ಮತ್ತು 1,41,153 ಮಹಿಳೆಯರು ಇದ್ದಾರೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...