Homeಮುಖಪುಟಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

- Advertisement -
- Advertisement -

ಕಾಂಗ್ರೆಸ್ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಚೇರಿಯಲ್ಲಿ ಬುಧವಾರ (ನವೆಂಬರ್ 5, 2025) ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ್ದು, 2024ರ ಅಕ್ಟೋಬರ್ ತಿಂಗಳಲ್ಲಿ ನಡೆದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಮಟ್ಟದ ‘ಮತಗಳ್ಳತನ’ ನಡೆದಿದೆ ಎಂದು ಆರೋಪ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ‘ಹೆಚ್‌ ಫೈಲ್ಸ್’ (ಹರಿಯಾಣ ಫೈಲ್ಸ್ ) ಎಂಬ ಶೀರ್ಷಿಕೆಯಲ್ಲಿ ತಮ್ಮ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ. ಡಿಜಿಟಲ್ ರೂಪದಲ್ಲಿ ವಿವರಣೆ ಕೊಟ್ಟಿದ್ದಾರೆ.

2024ರಲ್ಲಿ ಹರಿಯಾಣದಲ್ಲಿ ನಡೆದಿರುವುದು ಚುನಾವಣೆ ಅಲ್ಲ, ಬಿಜೆಪಿ ಮತ್ತು ಭಾರತೀಯ ಚುನಾವಣಾ ಆಯೋಗ (ಇಸಿಐ) ಜಂಟಿಯಾಗಿ ನಡೆಸಿದ ‘ಮತಗಳ್ಳತನ’. ಬಿಜೆಪಿ ಕಾಂಗ್ರೆಸ್ ವಿರುದ್ದ ಅಲ್ಪ ಮತದಿಂದ ಗೆದ್ದಿದ್ದರೂ, ದೊಡ್ಡ ಮಟ್ಟದ ವಂಚನೆ ನಡೆದಿದೆ. ಇದಕ್ಕಾಗಿ ‘ಕೇಂದ್ರೀಕೃತ ಕಾರ್ಯಾಚರಣೆ’ ನಡೆಸಲಾಗಿದೆ. ಮುಂಬವರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಇದೇ ರೀತಿ ನಡೆಯಬಹುದು ಎಂದು ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆಯ ಮತದಾನದ ಬಳಿಕ ಎಕ್ಸಿಟ್ ಪೋಲ್‌ಗಳು ಮತ್ತು ಒಪೀನಿಯನ್ ಪೋಲ್‌ಗಳು ಕಾಂಗ್ರೆಸ್‌ ಭರ್ಜರಿ ಜಯಗಳಿಸುವ ಮುನ್ಸೂಚನೆ ನೀಡಿತ್ತು. ಆದರೆ, ನಾವು ಕೇವಲ 8 ಪ್ರಮುಖ ಸ್ಥಾನಗಳಲ್ಲಿ 22,779 ಮತಗಳಿಂದ ಸೋತೆವು. ನಕಲಿ ಮತಗಳು ಮತ್ತು ವಂಚನೆಯ ಮೂಲಕ ಫಲಿತಾಂಶವನ್ನು ತಿರುಗಿಸಲಾಯಿತು ಎಂದು ಆರೋಪಿಸಿದ್ದಾರೆ. “ಜೆನ್‌ ಝೀ’ ಮತದಾರರೇ ನಿಮ್ಮ ಭವಿಷ್ಯವನ್ನು ಕದಿಯಲಾಗುತ್ತಿದೆ” ಎಂದು ಎಚ್ಚರಿಸಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 25,41,144 ನಕಲಿ ಮತಗಳು ಚಲಾವಣೆಯಾಗಿವೆ. ಇದು ಹರಿಯಾಣದ ಒಟ್ಟು 2 ಕೋಟಿ ಮತದಾರರಲ್ಲಿ 12.5 ಶೇಕಡ ಆಗಿದೆ. ಎಂಟರಲ್ಲಿ ಒಂದು ನಕಲಿ ಮತ ಚಲಾವಣೆಯಾಗಿದೆ. ಮತದಾರರ ಪಟ್ಟಿ, ಮಾಹಿತಿ, ಫೋಟೋ ಮತ್ತು ಸಂಖ್ಯೆಗಳು ‘ನನ್ನ ಆರೋಪಗಳಿಗೆ ಅಲ್ಲಗಳೆಯಲಾಗದ ಸಾಕ್ಷಿಗಳಾಗಿವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಒಟ್ಟು 5.21 ಲಕ್ಷ ಹೆಸರುಗಳು ಮತದಾರರ ಪಟ್ಟಿಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಇದೆ. 1.24 ಲಕ್ಷ ಒಂದೇ ಫೋಟೋ ಇದೆ. ಸಾವಿರಾರು ಬಿಜೆಪಿ ಕಾರ್ಯಕರ್ತರು ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಎರಡೂ ಕಡೆ ಮತ ಹಾಕಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಅಸ್ಥಿತ್ವದಲ್ಲಿಯೇ ಇಲ್ಲದ 93,174 ಮತದಾರರ ವಿಳಾಸಗಳು ಪಟ್ಟಿಯಲ್ಲಿವೆ. ಮನೆ ಇಲ್ಲದವರ ಮನೆ ಸಂಖ್ಯೆ ಶೂನ್ಯ ಆಗಿರುತ್ತದೆ. ಆದರೆ, ಇಲ್ಲಿ ಮನೆ ಇಲ್ಲದವರು ಎಂದು ಉಲ್ಲೇಖಿಸಿ ನಕಲಿ ವಿಳಾಸಗಳನ್ನು ಸೇರಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪರಿಶೀಲನೆ ಇಲ್ಲದೆ 19.26 ಲಕ್ಷ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಒಬ್ಬ ಮತದಾರ 2 ಬೂತ್‌ಗಳಲ್ಲಿ 223 ಬಾರಿ ಕಾಣಿಸಿಕೊಂಡಿದ್ದಾರೆ. ಫಾರ್ಮ್ 6 (ಹೊಸ ಮತದಾರ ಸೇರ್ಪಡೆ) ಮತ್ತು ಫಾರ್ಮ್ 7 (ಅಳಿಸುವಿಕೆ) ದುರುಪಯೋಗವಾಗಿದೆ. ಇತರ ರಾಜ್ಯಗಳಿಂದ ನಕಲಿ ಲಾಗಿನ್‌ಗಳ ಮೂಲಕ ಕಾಂಗ್ರೆಸ್ ಮತಗಳನ್ನು ಅಳಿಸಲಾಗಿದೆ. ಪ್ರತ್ಯೇಕವಾಗಿ ಲೆಕ್ಕವಿಲ್ಲ, ಆದರೂ ಈ ಸಂಖ್ಯೆ 25 ಲಕ್ಷದ ಒಳಗೆಯಿದೆ ಎಂದು ವಿವರಿಸಿದ್ದಾರೆ.

ಬ್ರೆಝಿಲ್‌ನ ಮಾಡೆಲ್ ಒಬ್ಬರ ಫೋಟೋ. ಸೀಮಾ, ಸ್ವೀಟಿ, ಸರಸ್ವತಿ, ರಶ್ಮಿ, ವಿಮಲಾ ಮುಂತಾದ ವಿಭಿನ್ನ ಹೆಸರುಗಳಲ್ಲಿ ಹರಿಯಾಣದ ಮತದಾರರ ಪಟ್ಟಿಯಲ್ಲಿ ಹಲವು ಬಾರಿ ಕಾಣಿಸಿಕೊಂಡಿದೆ. ಇವರು ಹರಿಯಾಣದ 10 ವಿಭಿನ್ನ ಬೂತ್‌ಗಳಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇತಿಹಾಸದಲ್ಲಿ ಮೊದಲ ಬಾರಿಗೆ ಅಂಚೆ ಮತಗಳು (ಸರ್ಕಾರಿ ನೌಕರರಿಂದ) ಭಾರೀ ಪ್ರಮಾಣದಲ್ಲಿ ಬಿಜೆಪಿಗೆ ಬಿದ್ದಿವೆ. ಇದು ಮತ್ತು ಬೂತ್ ಮತಗಳ ನಡುವೆ ದೊಡ್ಡ ವ್ಯತ್ಯಾಸ ಕಂಡು ಬಂದಿದೆ ಎಂದಿದ್ದಾರೆ.

ಚುನಾವಣಾ ಆಯೋಗ ಸಿಸಿಟಿವಿ ದೃಶ್ಯಗಳನ್ನು ನಾಶ ಮಾಡಿದೆ. ಡಿಜಿಟಲ್ ಮತದಾರ ಪಟ್ಟಿಗಳನ್ನು ಬಿಡುಗಡೆ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಸೇರಿ ಭಾರತೀಯ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮತಗಳ್ಳತನ ಕುರಿತು ಸ್ವತಂತ್ರ ತನಿಖೆ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಚುನಾವಣಾ ಆಯೋಗ ಡೇಟಾವನ್ನು ಸಾರ್ವಜನಿಕ ಆಡಿಟ್‌ಗೆ ಬಿಡುಗಡೆ ಮಾಡುವಂತೆ ಮತ್ತು ಮತಗಳ್ಳತನದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಚುನಾವಣಾ ಆಯೋಗ ಈ ಹಿಂದಿನಂತೆ ರಾಹುಲ್ ಗಾಂಧಿಯ ಆರೋಪಗಳನ್ನು ಆಧಾರರಹಿತ ಎಂದು ತಿರಸ್ಕರಿಸಿದೆ. ಯಾವುದೇ ಅಕ್ರಮದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ ಎಂದಿದೆ.

ಬ್ರೆಝಿಲ್ ಮಾಡೆಲ್ ಹರಿಯಾಣದಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ : ರಾಹುಲ್ ಗಾಂಧಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...