Homeಚಳವಳಿಹರಿಯಾಣ: ಪ್ರತಿಭಟನಾನಿರತ ರೈತರ ಮೇಲೆ ಮತ್ತೆ ಜಲ ಫಿರಂಗಿ ಬಳಸಿದ ಪೊಲೀಸರು

ಹರಿಯಾಣ: ಪ್ರತಿಭಟನಾನಿರತ ರೈತರ ಮೇಲೆ ಮತ್ತೆ ಜಲ ಫಿರಂಗಿ ಬಳಸಿದ ಪೊಲೀಸರು

- Advertisement -

ಹರಿಯಾಣದಲ್ಲಿ ರೈತರು ಮತ್ತು ಮನೋಹರ್‌ ಲಾಲ್ ಖಟ್ಟರ್‌ ಸರ್ಕಾರದ ನಡುವಿನ ಬಿಕ್ಕಟ್ಟು ಮತ್ತಷ್ಟು ಹದಗೆಟ್ಟಿದ್ದು, ಪ್ರತಿಭಟನಾ ನಿರತ ರೈತರ ಮೇಲೆ ಮತ್ತೆ ಪೊಲೀಸ್ ಸಿಬ್ಬಂದಿ ಜಲ ಫಿರಂಗಿ ಬಳಸಿ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಿದ್ದಾರೆ.

ಹರಿಯಾಣದ ಜಜ್ಜಾರ್‌ನಲ್ಲಿ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಅವರ ಕಾರ್ಯಕ್ರಮದ ವಿರುದ್ಧ ರೈತರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ರೈತರನ್ನು ತಡೆಯಲು ಭದ್ರತಾ ಸಿಬ್ಬಂದಿ ಜಲ ಫಿರಂಗಿ ಬಳಸಿದ್ದಾರೆ.

ಕಪ್ಪು ಧ್ವಜಗಳನ್ನು ಹಿಡಿದ ರೈತರು ಮತ್ತು ಮಹಿಳೆಯರು ಭಾರಿ ಸಂಖ್ಯೆಯಲ್ಲಿ ನಿಯೋಜನೆಯಾಗಿದ್ದ ಭದ್ರತಾ ಸಿಬ್ಬಂದಿಯನ್ನು ಕಂಡು ಹಿಂದೆ ಸರಿಯದೆ ಮುನ್ನುಗ್ಗುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ.

 ಇದನ್ನೂ ಓದಿ: ರೈತ ಹೋರಾಟ: ಹೆದ್ದಾರಿಗಳನ್ನು ಶಾಶ್ವತವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ

ಕಳೆದ ಒಂದು ವರ್ಷದಿಂದಲೂ ವಿವಾದಿತ ಕೃಷಿ ಕಾನೂನುಗಳ ರದ್ದಿಗಾಗಿ ಹೋರಾಡುತ್ತಿರುವ ರೈತರು ಹರಿಯಾಣದಲ್ಲಿ ಖಟ್ಟರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯ ಯಾವುದೇ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ನಡೆಯಲು ಬಿಡದೆ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ಈ ಹಿನ್ನೆಲೆಯಲ್ಲಿ ಇಂದಿನ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಅವರ ಕಾರ್ಯಕ್ರಮಕ್ಕೂ ಭಾರಿ ಭದ್ರತೆ ಒದಗಿಸಲಾಗಿತ್ತು. ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕುವ ಮೂಲಕ ಹಲವು ಮಾರ್ಗಗಳನ್ನು ಬದಲಾಯಿಸಲಾಗಿತ್ತು. ಆದರೂ ಪಟ್ಟು ಬಿಡದ ರೈತರು ಕಾರ್ಯಕ್ರಮ ನಡೆಸದಂತೆ ಪ್ರತಿಭಟನೆ ನಡೆಸಿದ್ದಾರೆ.

ರೈತರ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಉಪ ಆಯುಕ್ತ ಶ್ಯಾಮ್ ಲಾಲ್ ಪೂನಿಯಾ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸದಂತೆ ರೈತರಲ್ಲಿ ಮನವಿ ಮಾಡಿದ್ದಾರೆ.

“ನೀವು ಪ್ರಜಾಪ್ರಭುತ್ವ ರೀತಿಯಲ್ಲಿ ಪ್ರತಿಭಟಿಸಬಹುದು. ನಾವೆಲ್ಲ ನಿಮ್ಮ ಮಕ್ಕಳು. ನಾವೀಗ ನಾವು ಸರ್ಕಾರಿ ಕರ್ತವ್ಯದಲ್ಲಿದ್ದೇವೆ. ದಯವಿಟ್ಟು ನಮ್ಮನ್ನು ಕರ್ತವ್ಯ ನಿರ್ವಹಿಸುವುದರಿಂದ ತಡೆಯಬೇಡಿ. ದಯವಿಟ್ಟು ಕಾರ್ಯಕ್ರಮಕ್ಕೆ ಅಡ್ಡಿಪಡಿಸದೆ ನಿಮ್ಮ ಪ್ರತಿಭಟನೆಯನ್ನು ಮುಂದುವರೆಸಿ” ಎಂದು ರೈತರಲ್ಲಿ ಮನವಿ ಮಾಡಿದ್ದಾರೆ.

ಈ ಹಿಂದೆ ಕರ್ನಾಲ್‌ನಲ್ಲಿ ರೈತರು ಪ್ರತಿಭಟನೆ ನಡೆಸುವ ವೇಳೆ ರೈತರ ತಲೆ ಒಡೆಯಿರಿ ಎಂದು ಅಧಿಕಾರಿಯೊಬ್ಬ ಆದೇಶ ನೀಡಿ, ಹತ್ತಕ್ಕೂ ಹೆಚ್ಚು ರೈತರಿಗೆ ಗಂಭೀರ ಗಾಯಗಳಾಗಿದ್ದವು. ಈ ವಿಚಾರದಿಂದ ಖಟ್ಟರ್‌ ಸರ್ಕಾರ ಭಾರಿ ಟೀಕೆಗೆ ಒಳಗಾಗಿತ್ತು.


ಇದನ್ನೂ ಓದಿ: 10 ತಿಂಗಳಲ್ಲ, 10 ವರ್ಷಗಳವರೆಗೂ ಹೋರಾಡಲು ಸಿದ್ದರಿದ್ದೇವೆ: ರಾಕೇಶ್ ಟಿಕಾಯತ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಕೋಮು ಪ್ರಚೋದನೆ ಮಾಡಿರುವ ರಿಷಿ ಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಈಗ ಸುದ್ದಿಯಲ್ಲಿದ್ದಾರೆ. ಮಸೀದಿ ಒಡೆಯಬೇಕೆಂದು ಕರೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವಬೇಕೆಂದು ಕಾಳಿ...
Wordpress Social Share Plugin powered by Ultimatelysocial