ವಿವಾಹಿತ ದಲಿತ ಯುವತಿಯನ್ನು ಅಪಹರಿಸಿ, ಸೆರೆಯಾಳಾಗಿಸಿಕೊಂಡು ಸತತ ಒಂಬತ್ತು ದಿನಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹರಿಯಾಣದ ಗುರುಗಾಂವ್‌ನಲ್ಲಿ ನಡೆದಿದೆ. ಘಟನೆ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
20 ವರ್ಷದ ವಿವಾಹಿತ ಸಂತ್ರಸ್ತ ಯುವತಿಗೆ ದೂರು ದಾಖಲಿಸಲು ಸಹಾಯ ಮಾಡಿದ್ದಕ್ಕಾಗಿ ವ್ಯಕ್ತಿಯೊಬ್ಬನ ಮೇಲೆ ಕೆಲವು ಜನರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಯುವತಿ ತನ್ನ ದೂರಿನಲ್ಲಿ ಆರೋಪಿಗಳಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಕೂಡ ಇದ್ದು ಎಂದಿದ್ದಾರೆ. ಆರೋಪಿಗಳು ಆಕೆಗೆ ಮಂಪರು ಬರುವ ಔಷಧಿಗಳನ್ನು ನೀಡುತ್ತಿದ್ದರು, ಹಾಗಾಗಿ ತಾನು ಹೆಚ್ಚಿನ ಸಮಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದೆ ಎಂದು ಆರೋಪಿಸಿದ್ದಾರೆ.
ಗುರುಗಾಂವ್ ಜಿಲ್ಲೆಯ ಸೊಹ್ನಾ ಬಳಿಯ ತನ್ನ ಹಳ್ಳಿಯವರೇ ಶಂಕಿತ ಆರೋಪಿಗಳು ಎಂದು ಯುವತಿ ಅನುಮಾನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಮೈಸೂರು: ಕೆಆರ್ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಅತ್ಯಾಚಾರ
ಜೂನ್ 30 ರಂದು ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಸೆರೆಯಲ್ಲಿಡಲಾಗಿತ್ತು. ಫರಿದಾಬಾದ್‌ನ ಬಲ್ಲಭ್‌ಗಢ ಎಂಬಲ್ಲಿ ಆಕೆಯ ಮೇಲೆ ಪದೇ ಪದೇ ಅತ್ಯಾಚಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನಂತರ ಯುವತಿಯನ್ನು ಜುಲೈ 8 ರಂದು ಬಲ್ಲಭ್‌ಗಢ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾರೆ. ಆಕೆ ತನ್ನ ಕುಟುಂಬವನ್ನು ಸಂಪರ್ಕಿಸಿ ಮನೆಗೆ ತಲುಪಿದ ಬಳಿಕ ಜುಲೈ 10 ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅತ್ಯಾಚಾರ, ಅಪಹರಣ, ಮತ್ತು ಎಸ್‌ಸಿ / ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ವಿಭಾಗಗಳು ಸೇರಿದಂತೆ ಐಪಿಸಿಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸುತ್ತೇವೆ. ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಸೊಹ್ನಾ ವ್ಯಾಪ್ತಿಯ ಸಾದರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಉಮೇಶ್ ಕುಮಾರ್ ಬುಧವಾರ ಹೇಳಿದ್ದಾರೆ.
ಪ್ರಕರಣದಲ್ಲಿ ಆರೋಪಿಯಾಗಿರುವ ಕಾನ್‌ಸ್ಟೆಬಲ್ ಫರಿದಾಬಾದ್‌ನ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.
ಮಂಗಳವಾರ, ಯುವತಿಗೆ ಹಳ್ಳಿಯ ವ್ಯಕ್ತಿಯೊಬ್ಬರು ಪೊಲೀಸ್ ದೂರು ದಾಖಲಿಸಲು ಸಹಾಯ ಮಾಡಿದ್ದಕ್ಕಾಗಿ ಕೆಲವು ಜನರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ನಡೆಸುತ್ತಿದ್ದ ಖಾಸಗಿ ಶಾಲೆಯ ಆವರಣದಲ್ಲಿ ಕೆಲವರು ಪ್ರವೇಶಿಸಿ ಹಲ್ಲೆ ನಡೆಸಿ ಹಳ್ಳಿಯಲ್ಲಿ ಮೆರವಣಿಗೆ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ



ಅಪರಾದಿಗಳಿಗೆ ಕಟಿಣ ಶಿಕ್ಷೆ ಆಗಬೇಕು.