Homeಚಳವಳಿಹರಿಯಾಣ: ಹಲ್ಲೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

ಹರಿಯಾಣ: ಹಲ್ಲೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

ಬೇಡಿಕೆಗಳನ್ನು ಸೆ. 6 ರ ಒಳಗೆ ಈಡೇರಿಸದಿದ್ದಲ್ಲಿ ಕರ್ನಾಲ್ ಮಿನಿ-ಸೆಕ್ರೆಟರಿಯೇಟ್‌ಗೆ ಅನಿರ್ದಿಷ್ಟಾವಧಿ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ

- Advertisement -
- Advertisement -

ಕಳೆದ ಶನಿವಾರ ಹರಿಯಾಣದ ಕರ್ನಾಲ್‌ನಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ನಡೆದ ಮಾರಣಾಂತಿಕ ಲಾಠಿಚಾರ್ಜ್, ಪೊಲೀಸರು ಮತ್ತು ಹಲ್ಲೆಗೆ ಆದೇಶಿಸಿದ ಅಧಿಕಾರಿ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರೈತರು ಸಭೆ ನಡೆಸಿದ್ದಾರೆ.

ಹಲ್ಲೆಗೆ ಆದೇಶ ನೀಡಿದ್ದ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ಮತ್ತು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಮಾರಣಾಂತಿಕ ಹಲ್ಲೆಯಲ್ಲಿ ಗಾಯಗಳಿಂದ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಹರಿಯಾಣದ ರೈತ ಸಂಘಟನೆಗಳು ಒತ್ತಾಯಿಸಿವೆ.

ಸೋಮವಾರ ಕರ್ನಾಲ್‌ನಲ್ಲಿ ಸಭೆ ನಡೆಸಿದ ಹರಿಯಾಣ ರೈತ ಸಂಘಟನೆಗಳು, ತಮ್ಮ ಬೇಡಿಕೆಗಳನ್ನು ಸೆಪ್ಟೆಂಬರ್ 6 ರ ಒಳಗೆ ಈಡೇರಿಸದಿದ್ದಲ್ಲಿ ಕರ್ನಾಲ್ ಮಿನಿ-ಸೆಕ್ರೆಟರಿಯೇಟ್‌ಗೆ (Karnal mini-Secretariat) ಅನಿರ್ದಿಷ್ಟಾವಧಿ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿವೆ.

ಇದನ್ನೂ ಓದಿ: ರೈತರ ಮೇಲಿನ ಕ್ರೂರ ಲಾಠಿಚಾರ್ಜ್‌ಗೆ ಹರಿಯಾಣ ಸಿಎಂ ಕ್ಷಮೆ ಕೇಳಬೇಕು: ಮೇಘಾಲಯ ರಾಜ್ಯಪಾಲ

ಭಾರತೀಯ ಕಿಸಾನ್ ಯೂನಿಯನ್ (ಚಾರುಣಿ) ಅಧ್ಯಕ್ಷ ಗುರ್ನಾಮ್ ಸಿಂಗ್ ಚಾರುಣಿ, ಸರ್ಕಾರವು ಶಾಂತಿಯುತ ಪ್ರತಿಭಟನೆಗಳನ್ನು ನಡೆಸುತ್ತಿರುವ ರೈತರ ಮೇಲೆ ಹಿಂಸಾಚಾರವನ್ನು ಎಸಗಿದೆ. ಘಟನೆಯಲ್ಲಿ 11 ಜನರಿಗೆ ಗಂಭೀರ ಗಾಯಗಳಾಗಿದ್ದು, 40ಕ್ಕೂ ಹೆಚ್ಚು ರೈತರಿಗೆ ಗಾಯಗಳಾಗಿವೆ. ಹಲ್ಲೆಯಿಂದಾ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿರುವ ಸುಶೀಲ್ ಕಾಜಲ್ ಅವರ ಕುಟುಂಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಸಂಘಟನೆ ಆಗ್ರಹಿಸಿದೆ. ಜೊತೆಗೆ ಗಾಯಗೊಂಡಿರುವ ರೈತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನಿಡಬೇಕು ಎಂದಿದೆ.

ರೈತ ಸಂಘಗಳ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಪತ್ರಿಕಾ ಹೇಳಿಕೆಯಲ್ಲಿ, “ಮನೋಹರ್ ಲಾಲ್ ಖಟ್ಟರ್‌ ಸರ್ಕಾರವು ಲಾಠಿಚಾರ್ಜ್‌ಗೆ ಆದೇಶಿಸಿದ ಅಧಿಕಾರಿಯನ್ನು ತಕ್ಷಣವೇ ವಜಾಗೊಳಿಸದಿದ್ದರೆ, ಆತನ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಆ ಅಧಿಕಾರಿ ಬೇರೆಡೆಯಿಂದ ಬಂದ ಸೂಚನೆಗಳ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಯಬೇಕಾಗುತ್ತದೆ” ಎಂದು ಹರಿಯಾಣ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಕಳೆದ ಶನಿವಾರ “ಇದು ತುಂಬಾ ಸರಳ ಮತ್ತು ಸ್ಪಷ್ಟವಾಗಿದೆ. ಅವರು ಯಾರಾದರೂ ಆಗಿರಲಿ, ಎಲ್ಲಿಂದ ಬಂದಿರಲಾಗಿರಲಿ ಯಾರೊಬ್ಬರೂ ಬ್ಯಾರಿಕೇಡ್‌ನಿಂದ ಮುಂದೆ ಹೋಗಬಾರದು. ಒಂದು ವೇಳೆ ಬಂದರೆ ಅವರ ಬುರುಡೆಯನ್ನು ಒಡೆಯಿರಿ. ಯಾವುದೇ ಸೂಚನೆ ಅಥವಾ ನಿರ್ದೇಶನದ ಅಗತ್ಯವಿಲ್ಲ. ನಮ್ಮಲ್ಲಿ ಸಾಕಷ್ಟು ಪೊಲೀಸ್ ಪಡೆಯಿದೆ” ಎಂದು ಕರ್ನಾಲ್‌ನಲ್ಲಿ ಪ್ರತಿಭಟನಾ ನಿರತ ರೈತರನ್ನು ನಿಭಾಯಿಸಲು ನಿಯೋಜಿಸಲಾದ ಪೊಲೀಸರಿಗೆ ಆಯುಷ್ ಸಿನ್ಹಾ ಹೇಳಿದ್ದರು.


ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...