Homeಕರ್ನಾಟಕಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

- Advertisement -
- Advertisement -

“ಪ್ರಕರಣ ಬಯಲಿಗೆ ಬಂದಾಗ ಒಂದೇ ರೀತಿಯ ಪ್ರತಿಕ್ರಿಯೆಗಳು ಬಂದವು. ಅಪರಾಧಿಗಳು ಮತ್ತವರ ಕುಟುಂಬಗಳು ಪೆನ್‌ಡ್ರೈವ್‌ನ ಹಂಚಿದ್ಯಾರು ಎಂಬುದರ ಬಗ್ಗೆ ಮಾತನಾಡುತ್ತಾ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಂತ್ರಸ್ತ ಮಹಿಳೆಯರನ್ನೇ ಅಪರಾಧಿಗಳನ್ನಾಗಿ ಮಾಡುವ ಯತ್ನಗಳು ನಡೆದವು. ಸರ್ಕಾರವೂ ಕೂಡ ಪ್ರಕರಣದಲ್ಲಿ ತಮ್ಮದು ಹೆಚ್ಚಿನ ಪಾತ್ರವಿಲ್ಲ ಎಂಬಂತೆ ನುಣುಚಿಕೊಳ್ಳಲು ಯತ್ನಿಸಿತು. ಈ ಎಲ್ಲ ನುಣುಚುಕೋರರ ಬಣ್ಣ ಬಯಲಾಗಿದೆ. ಇದು, ಇಡೀ ವ್ಯವಸ್ಥೆಯ ವೈಫಲ್ಯ” ಎಂದು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹೆಣ್ಣು ಮಕ್ಕಳು ತಮ್ಮ ಚಿಕ್ಕ ಕೆಲಸಕ್ಕಾಗಿ, ಪ್ರಮೋಷನ್‌ಗಾಗಿ, ಪಂಚಾಯಿತಿ ಮಟ್ಟದ ಟಿಕೆಟ್‌ಗಾಗಿ ಇಂತಹ ಕಾಮಕರ ದೌರ್ಜನ್ಯ ಬಲಿಯಾಗಬೇಕಿರುವ ಪರಿಸ್ಥಿತಿಯನ್ನು ಈ ವ್ಯವಸ್ಥೆ ಮಹಿಳೆಯರಿಗೆ ನೀಡಿದೆ. ಈ ವ್ಯವಸ್ಥೆಯನ್ನು ಬದಲಿಸಲು ಇಡೀ ದೇಶ ಒಗ್ಗೂಡಿ ಹೋರಾಟ ನಡೆಸಬೇಕು. ಇಂತಹ ದೌರ್ಜನ್ಯ ಪ್ರಕರಣಗಳನ್ನ ಸಮಗ್ರವಾಗಿ ಪರಿಶೀಲಿಸಲು ಉನ್ನತ ಸಮಿತಿಯನ್ನು ಸರ್ಕಾರ ರಚನೆ ಮಾಡಬೇಕು. ಗುಹೆಯಲ್ಲಿ ಅವಿತಿರುವ ಪ್ರಧಾನಿ ಮೋದಿಯವರು ಹೊರಬರಬೇಕು. ತಮ್ಮದೇ ಮಿತ್ರ ಪಕ್ಷದ ಸಂಸದ ಎಸಗಿರುವ ದೌರ್ಜನ್ಯದ ವಿರುದ್ಧ ಕ್ರಮಕ್ಕೆ ಮುಂದಾಗಬೇಕು” ಎಂದು ಆಗ್ರಹಿಸಿದರು.

ರೇವಣ್ಣ ಕಟುಂಬದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ:

ಬಂಧಿಸಿ ಬಂಧಿಸಿ ವಿಕೃತಿ ಕಾಮಿ ಪ್ರಜ್ವಲ್‌ನನ್ನು ಬಂಧಿಸಿ. ಅಡಗಲಿ ಅಡಗಲಿ ಪಾಳೇಗಾರಿಕೆ ಅಡಗಲಿ. ಪ್ರಜ್ವಲ್ ರೇವಣ್ಣನ ಬಂಧನ ಕೂಡಲೇ ಆಗಬೇಕು. ದೇವೆಗೌಡರ ಕುಟುಂಬಕ್ಕೆ ಧಿಕ್ಕಾರ. ಸಂತ್ರಸ್ತ ಮಹಿಳೆಯರೇ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಹಾಸನ ಚಲೋ ಹೋರಾಟದಲ್ಲಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಹಾಸನ ನಗರದ ಮಹಾರಾಜ ಪಾರ್ಕ್ ಮುಂಭಾಗ ಆರಂಭವಾದ ಹಾಸನ ಚಲೋ ಬೃಹತ್ ಹೋರಾಟದ ಆರಂಭದಲ್ಲಿ ಘೋಷವಾಕ್ಯಗಳನ್ನು ಕೂಗುವ ಮೂಲಕ ಅತ್ಯಾಚಾರಿ ಆರೋಪಿ ಪ್ರಜ್ವಲ್‌ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು 11 ಗಂಟೆಗೆ ಆರಂಭವಾದ ಹೋರಾಟದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಪ್ರಗತಿಪರ ಹೋರಾಟಗಾರರು, ಸಾಹಿತಿಗಳು, ಚಿಂತಕರು, ಕೂಲಿ ಕಾರ್ಮಿಕರು ಸೇರಿದಂತೆ ಹಲವು ಮಹಿಳಾಪರ ಸಂಘಟನೆಗಳು, ಜನಪರ ಸಂಘಟನೆಗಳು ಬ್ಯಾನರ್, ಪೋಸ್ಟರ್‌ಗಳನ್ನು ಹಿಡಿದು ಕಾಮುಕ ಪ್ರಜ್ವಲ್‌ ರೇವಣ್ಣ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ವಿವಿಧ ಸಂಘಟನೆಗಳ ಸಾವಿರಾರು ಜನರು ರಾಜ್ಯದ ಮೂಲೆ ಮೂಲೆಗಳಿಂದ ಟೆಂಪೋ, ಟ್ರಕ್‌ಗಳಲ್ಲಿ ಬಂದ ಸಾವಿರಾರು ಮಂದಿ ಮಹಿಳೆಯರು, ಹೋರಾಟಗಾರರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಮಹಾರಾಜ ಪಾರ್ಕ್‌ನಿಂದ ಆರಂಭವಾದ ‘ಹಾಸನ ಚಲೋ’ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಸಾಗಿ ತಾಲೂಕು ಕಚೇರಿ ವೃತ್ತದ ಬಳಿಯ ಹಾಸನ ಚಲೋ ವೇದಿಕೆಯನ್ನು ಸೇರಿತು.

ಪ್ರತಿಭಟನೆಯ ದಾರಿಯುದ್ದಕ್ಕೂ ಧಿಕ್ಕಾರದ ಘೋಷಣೆಗಳು ಹಾಸನ ಜನರ ಗಮನ ಸೆಳೆದವು. ಎತ್ತ ನೋಡಿದರೂ ಮಹಿಳೆಯರ ಸಾಲು. ಸರ್ವಾಧಿಕಾರಿಗಳ ವಿರುದ್ಧದ ಹೋರಾಟವನ್ನು ಕಂಡು ಹಾಸನದ ಜನತೆ ನಿಬ್ಬೆರಗಾಗಿ ನಿಂತು ನೋಡುತ್ತಿದ್ದ ದೃಶ್ಯಗಳು ಕಂಡುಬಂದಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ದಲಿತ ಸಂಘರ್ಷ ಸಮಿತಿ, ಜನ ಶಕ್ತಿ, ಜನವಾದಿ, ರೈತ ಸಂಘಟನೆಗಳು, ಎದ್ದೇಳು ಕರ್ನಾಟಕ, ಜಾಗೃತ ಕರ್ನಾಟಕ, ಸಿಐಟಿಯು, ಭೀಮ್‌ ಆರ್ಮಿ ಸೇರಿದಂತೆ 150ಕ್ಕೂ ಅಧಿಕ ಸಂಘಟನೆಗಳು ಭಾಗವಹಿಸಿದ್ದು, ಕಾರ್ಯಕ್ರಮದಲ್ಲಿ ನ್ಯಾಯಕ್ಕಾಗಿ ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ; ಪ್ರಜ್ವಲ್ ಪ್ರಕರಣ ಹಳ್ಳ ಹಿಡಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ: ಮಾವಳ್ಳಿ ಶಂಕರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಿಯಾಂಕ ಗಾಂಧಿ

ಗಾಜಾದಲ್ಲಿ ಇಸ್ರೇಲ್‌ನ ‘ಜನಾಂಗೀಯ ಕೃತ್ಯಗಳು’ ನಿಲ್ಲಬೇಕು: ಪ್ರಿಯಾಂಕಾ ಗಾಂಧಿ

0
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ಸ್ವೀಕಾರಾರ್ಹವಲ್ಲ ಮತ್ತು ಹತ್ಯಾಕಾಂಡ ಎಂದು ಹೇಳಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇದನ್ನು ಜಗತ್ತಿನ ಪ್ರತಿಯೊಂದು ಸರ್ಕಾರ ಖಂಡಿಸಬೇಕು ಎಂದು ಶುಕ್ರವಾರ ಕರೆ...