Homeಕರ್ನಾಟಕʼದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

ʼದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

- Advertisement -
- Advertisement -

ದತ್ತ ಜಯಂತಿ ಹಿನ್ನೆಲೆಯಲ್ಲಿ ಕುಡಿದು ಗಲಭೆ ಮಾಡುವ ಸಾಧ್ಯತೆ ಇದ್ದು, ಯಾವುದೇ ಅಹಿತಕರ ಘಟನೆ ನಡೆಯದಿರಲೆಂದು ದತ್ತ ಜಯಂತಿಯ ದಿನ ಬೇಲೂರು ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇದಿಸಲಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ದಿನಾಂಕ 19-12-2021ರಂದು (ಸೋಮವಾರ) ಚಿಕ್ಕಮಗಳೂರು ನಗರದಲ್ಲಿ ನಡೆಯಲಿರುವ ದತ್ತ ಜಯಂತಿಯ ಅಂಗವಾಗಿ ಹಾಸನ ಜಿಲ್ಲೆಯ ಸಕಲೇಶಪುರದಿಂದ ಅರೇಹಳ್ಳಿ, ಬಿಕ್ಕೋಡು, ಬೇಲೂರು ಮತ್ತು ಹಳೇಬೀಡು ಮಾರ್ಗವಾಗಿ ಸಾವಿರಾರು ವಾಹನಗಳಲ್ಲಿ ದತ್ತಮಾಲೆ ಧರಿಸಿಕೊಂಡು ಚಿಕ್ಕಮಗಳೂರಿಗೆ ಹೋಗಲಿದ್ದಾರೆ.

ನಂತರ ವಾಪಸ್‌ ಸಕಲೇಶಪುರದ ಕಡೆಗೆ ಬರುವಾಗ ಬೇಲೂರು, ಹಳೇಬೀಡು, ಬಿಕ್ಕೋಡು ಅರೇಹಳ್ಳಿಯಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ಮದ್ಯವನ್ನು ಸೇವಿಸಿ ಅನ್ಯ ಧರ್ಮಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗುವಂತೆ ಘೋಷಣೆಗಳನ್ನು ಕೂಗುತ್ತಾ ಹೋಗುವ ಸಂಭವವಿರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಜರುಗಿಸಲಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್ ತಿಳಿಸಿದ್ದಾರೆ.

“ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ವ್ಯವಸ್ಥೆಯನ್ನು ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಬೇಲೂರು ತಾಲ್ಲೂಕಿನಾದ್ಯಂತ ದಿನಾಂಕ 19-12-2021ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ 19-12-2021ರ ಮಧ್ಯರಾತ್ರಿ 12 ಗಂಟೆಯವರೆಗೆ ಪಾನ ನಿರೋಧ (ಒಣ) ದಿನ ಘೋಷಿಸಲು ಹಾಸನ ಪೊಲೀಸ್ ಅಧೀಕ್ಷಕರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಪ್ರಸ್ತಾವನೆಯನ್ನು ಪರಿಶೀಲಿಸಲಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ‘ಬೇಲೂರು ತಾಲ್ಲೂಕಿನಾದ್ಯಂತ’ ಮದ್ಯ ಮಾರಾಟ ನಿಷೇಧಿಸುವುದು ಅಗತ್ಯವಿರುವುದಾಗಿ ಕಂಡು ಬಂದಿರುವುದರಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಅಬಕಾರಿ ಕಾಯಿದೆ 1965ರ ಕಲಂ 21 ಅಡಿ ನನಗೆ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ದಿನಾಂಕ 19-12-2021ರಂದು ಬೆಳಿಗ್ಗೆ 6 ಗಂಟೆಯಿಂದ 19-12-2021ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಬೇಲೂರು ತಾಲ್ಲೂಕಿನಾದ್ಯಂತ ಎಲ್ಲ ಬಗೆಯ ಮದ್ಯ ಹಾಗೂ ಅಮಲು ಪಾನೀಯಗಳ ಶೇಖರಣೆಯನ್ನು, ಸರ್ಕಾರಿ ಹಾಗೂ ಖಾಸಗಿ ಮದ್ಯ ಅಂಗಡಿಗಳಲ್ಲಿ, ಡಾಬಾಗಳಲ್ಲಿ, ಬಾರುಗಳಲ್ಲಿ, ಹೋಟೆಲ್‌ಗಳಲ್ಲಿ, ರೆಸ್ಟೋರೆಂಟ್‌ಗಳಲ್ಲಿ ಮದ್ಯ ಮಾರಾಟ ಮಾಡುವುದನ್ನು ಹಾಗೂ ಮದ್ಯ ಸಾಗಾಟ, ಸರಬರಾಜು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಆದೇಶಿದ್ದಾರೆ.


ಇದನ್ನೂ ಓದಿರಿ: ಕೇಂದ್ರದ ಮಾಜಿ ಸಚಿವ, ಅಹಿಂದ ನಾಯಕ ಆರ್‌.ಎಲ್‌.ಜಾಲಪ್ಪ ನಿಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಜಯಪುರ: ಗೋ ಸಾಗಾಟಗಾರನ ಮೇಲೆ ಬಜರಂಗದಳದಿಂದ ಥಳಿತ

0
ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಝ್‌...