Homeಕರ್ನಾಟಕಹಾಸನ: ಗುರಾಯಿಸಿ ನೋಡಿದ್ದಾಗಿ ಆರೋಪಿಸಿ ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ ಮಾಡಿದ ಸವರ್ಣೀಯರು

ಹಾಸನ: ಗುರಾಯಿಸಿ ನೋಡಿದ್ದಾಗಿ ಆರೋಪಿಸಿ ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ ಮಾಡಿದ ಸವರ್ಣೀಯರು

- Advertisement -
- Advertisement -

ಗುರಾಯಿಸಿ ನೋಡಿದ್ದಾರೆ ಎಂಬ ಕಾರಣಕ್ಕೆ ಲಿಂಗಾಯತ ಸಮುದಾಯದ ಇಬ್ಬರು ವ್ಯಕ್ತಿಗಳು ದಲಿತ ಯುವಕನೊಬ್ಬನಿಗೆ ಜಾತಿ ನಿಂದನೆ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಗುರುವಾರ ವರದಿಯಾಗಿದೆ. ತೀವ್ರ ದಾಳಿಗೊಳಗಾಗಿರುವ ಯುವಕ ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಘಟನೆಯ ಬಗ್ಗೆ ಸಂತ್ರಸ್ತ ಸುನಿಲ್ ಕುಮಾರ್ ಅವರು ಪೊಲೀಸರಿಗೆ ದೂರು ನೀಡಿದ್ದಾಗಿ ಅವರ ಸ್ನೇಹಿತರು ನಾನುಗೌರಿ.ಕಾಂಗೆ ತಿಳಿಸಿದ್ದು, ಈವರೆಗೆ ಯಾವುದೆ ಎಫ್‌ಐಆರ್‌ ದಾಖಲಾಗಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಬೇಳೂರು ಪೊಲೀಸ್ ಠಾಣೆಯ ಎಸ್‌ಐ ಪಾಟೀಲ್‌ ಎರಡೂ ಕಡೆಯವರು ಠಾಣೆಗೆ ಬರುತ್ತಿದ್ದು, ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಘಟನೆ ವಿವರ

ಬೇಲೂರು ತಾಲೂಕಿನ ಮಲ್ಲೇನಹಳ್ಳಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿರುವ ಸುನಿಲ್ ಕುಮಾ‌ರ್‌ (30) ಅವರು ತನ್ನ ಎತ್ತುಗಳನ್ನು ಹೊಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಲಿಂಗಾಯತ ಸಮುದಾಯದ ಚಂದ್ರೇಗೌಡ ಮತ್ತು ಅವರ ಮಗ ಲೋಕೇಶ್‌ ಅವರು ಸುನಿಲ್‌ ಕುಮಾರ್‌ ಅವರು ಗುರಾಯಿಸಿದ್ದಾರೆ ಎಂದು ಕೋಪಗೊಂಡಿದ್ದಾರೆ.

ಇದರ ನಂತರ ಆರೋಪಿಗಳಾದ ಚಂದ್ರೇಗೌಡ ಮತ್ತು ಲೋಕೇಶ್‌ ಇಬ್ಬರೂ, ಸುನಿಲ್ ಕುಮಾರ್‌ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ ಸುನಿಲ್ ಕುಮಾರ್‌ ಅವರನ್ನು ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನಾನುಗೌರಿ.ಕಾಂಗೆ ಅವರ ಸ್ನೇಹಿತರು ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೇಲೂರು ಪೊಲೀಸ್ ಠಾಣೆಯ ಎಸ್‌ಐ ಪಾಟೀಲ್‌, “ಘಟನೆಯ ಬಗ್ಗೆ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಎರಡೂ ಕಡೆಯವರು ಠಾಣೆಗೆ ಮಾತುಕತೆಗೆ ಬರುತ್ತಿದ್ದಾರೆ. ಮಾತುಕತೆ ಸರಿಯಾಗಿಲ್ಲ ಅಂದರೆ ಎಫ್‌ಐಆರ್‌ ಮಾಡಲಾಗುವುದು. ಪ್ರಕರಣವು ದಲಿತರ ದೌರ್ಜನ್ಯ  ಮತ್ತು ಕೊಲೆ ಯತ್ನದ ಅಡಿಯಲ್ಲಿ ಬರುತ್ತದೆ. ಎಫ್‌ಐಆರ್‌ ಆದರೆ ಇವುಗಳನ್ನು ಸೇರಿಸಲಾಗುವುದು” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಅಸ್ಪೃಶ್ಯತಾ ವಿರೋಧಿ ಯೋಜನೆಗೆ ದಲಿತ ಬಾಲಕನ ಹೆಸರಿಟ್ಟ ಕರ್ನಾಟಕ ಸರ್ಕಾರ: ಆ ಬಾಲಕನ ಕುಟುಂಬವನ್ನೆ ಹೊರದಬ್ಬಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...