Homeಚಳವಳಿಹಾಸನ: ಮದ್ಯದಂಗಡಿ ತೆರವುಗೊಳಿಸಲು ಆಗ್ರಹಿಸಿ ಪಾದಯಾತ್ರೆ - ಉಪವಾಸ ಸತ್ಯಾಗ್ರಹ

ಹಾಸನ: ಮದ್ಯದಂಗಡಿ ತೆರವುಗೊಳಿಸಲು ಆಗ್ರಹಿಸಿ ಪಾದಯಾತ್ರೆ – ಉಪವಾಸ ಸತ್ಯಾಗ್ರಹ

- Advertisement -
- Advertisement -

ಸ್ಥಳೀಯ ಜನರ ವಿರೋಧದ ನಡುವೆಯೂ MSIL ಮದ್ಯದಂಗಡಿ ತೆರಯಲು ಅವಕಾಶ ನೀಡಿರುವ ಹಾಸನ ಜಿಲ್ಲಾಧಿಕಾರಿಗಳ ಕ್ರಮ ಖಂಡಿಸಿ ಮತ್ತು ಕೂಡಲೇ ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಅಕ್ಟೋಬರ್ 07 ರಂದು ಜನಸಂಗ್ರಾಮ ಪರಿಷರ್ ವತಿಯಿಂದ ಅರಕಲಗೂಡಿನಿಂದ ಹಾಸನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮತ್ತು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಅರಕಲಗೂಡು ನಗರದ ‘ಅರಕಲಗೂಡು – ಮಲ್ಲಿಪಟ್ಟಣ ರಸ್ತೆಯಲ್ಲಿ’ MSIL ಮದ್ಯದಂಗಡಿ ತೆರೆಯುವುದಕ್ಕೆ ಅವಕಾಶ ನೀಡಬಾರದೆಂದು ಸ್ಥಳೀಯ ನಿವಾಸಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಸ್ಥಳೀಯ ಶಾಸಕರು ಸೇರಿ ನೂರಾರು ಜನರು ಮನವಿ ಸಲ್ಲಿಸಿದ್ದರೂ ಜಿಲ್ಲಾಡಳಿತ ಕಾನೂನುಬಾಹಿರವಾಗಿ ಅವಕಾಶ ನೀಡಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಕುರಿತು ಜನಸಂಗ್ರಾಮ ಪರಿಷತ್ ಕಾರ್ಯದರ್ಶಿ ಜಗದೀಶ್‌ರವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಯಾವುದೇ ಕಟ್ಟಡ ಮಳಿಗೆಗಳನ್ನು ರಾಜ್ಯ ಹೆದ್ದಾರಿ ಸೇರಿದಂತೆ ರಸ್ತೆಯಿಂದ 6 ಮೀಟರ್‌ ದೂರದಲ್ಲಿ ಕಟ್ಟಬೇಕು ಎನ್ನುವ ನಿಯಮವಿದೆ. ಆದರೆ ಸದರಿ ಮದ್ಯ ಮಳಿಗೆಯು ರಸ್ತೆಯಿಂದ ಕೇವಲ ಎರಡು ಮೀಟರ್ ಅಂತರದಲ್ಲಿದೆ. ಇದು ಕಾನೂನಿನ ಉಲ್ಲಂಘನೆಯಾಗಿದೆ. ಅದೇ ರೀತಿ MSIL ಮದ್ಯದಂಗಡಿಯ ಮುಂದೆ ಮದ್ಯಪಾನ ಮಾಡುವಂತಿಲ್ಲ. ಕೇವಲ ಮನೆಗೆ ತೆಗೆದಕೊಂಡು ಹೋಗುವ ಅವಕಾಶ ಮಾತ್ರವಿದೆ. ಆದರೆ ಅರಕಲಗೂಡಿನ ಈ ಮದ್ಯದಂಗಡಿ ಮುಂದೆಯೇ ಜನ ಮದ್ಯಪಾನ ಮಾಡುತ್ತಿದ್ದಾರೆ. ಇದರಿಂದ ರಸ್ತೆಯಲ್ಲಿ ಸಂಚರಿಸುವ ಮಹಿಳೆಯರು, ಶಾಲಾ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದರೆ ಅವರು ಉತ್ತಿರಿಸುತ್ತಿಲ್ಲ. ಹಾಗಾಗಿ ಹೋರಾಟವೊಂದೇ ನಮಗಿರುವ ಏಕೈಕ ದಾರಿಯಾಗಿದೆ. ಹಾಗಾಗಿ ಅಕ್ಟೋಬರ್ 07 ರಂದು ಜನಸಂಗ್ರಾಮ ಪರಿಷತ್ ಸದಸ್ಯರು ಮತ್ತು ಅರಕಲಗೂಡು – ಮಲ್ಲಿಪಟ್ಟಣ ರಸ್ತೆ ನಿವಾಸಿಗಳು ಸೇರಿ ಅರಕಲಗೂಡಿನಿಂದ ಹಾಸನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸುತ್ತೇವೆ. ಅಕ್ಟೋಬರ್ 08 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ಮದ್ಯದಂಗಡಿ ತೆರವುಗೊಳಿಸುವವರೆಗೂ ಹೋರಾಟ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ಪಡೆಯಲು ಹಾಸನ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಲಾಯಿತು. ಆದರೆ ಅವರು ಲಭ್ಯವಾಗಿಲ್ಲ. ಅವರು ಪ್ರತಿಕ್ರಿಯೆಗೆ ಸಿಕ್ಕಲ್ಲಿ ಅದನ್ನು ಅಪ್ಡೇಟ್ ಮಾಡಲಾಗುವುದು.

ಕಾನೂನು ಏನು ಹೇಳುತ್ತದೆ?

ಕರ್ನಾಟಕ ಅಬಕಾರಿ ಅಧಿನಿಯಮ, 1967 ರ ರೂಲ್‌ 5 ರ ಪ್ರಕಾರ ಶಾಲೆ, ಧಾರ್ಮಿಕ ಸ್ಥಳ, ಆಸ್ಪತ್ರೆ, ಎಸ್‌ಸಿ ಎಸ್‌ಎಸ್‌ಟಿ ಸಮುದಾಯದ ಜನವಸತಿಯಿಂದ 100 ಮಿ. ಅಂತರದಲ್ಲಿ ಮದ್ಯದಂಗಡಿಯನ್ನು ತೆರೆಯುವಂತಿಲ್ಲ. ಕರ್ನಾಟಕ ವೈನ್‌ ಮರ್ಚೆಂಟ್ಸ್‌ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಹೈಕೋರ್ಟ್ ಜನವಸತಿ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆ, ಧಾರ್ಮಿಕ ಸ್ಥಳದ ಸಮೀಪ ಮದ್ಯದಂಗಡಿಯನ್ನು ತೆರೆಯಬಾರದು ಎಂದು ಆದೇಶ ನೀಡಿದೆ. ಜನ ವಿರೋಧವಿದ್ದಾಗ 100 ಮೀ. ಎಂಬ ಸರ್ಕಾರಿ ಮಾನದಂಡಕ್ಕೆ ಕಟ್ಟು ಬಿದ್ದು ಮದ್ಯದಂಗಡಿ ತೆರೆಯುವುದು ಸೂಕ್ತವಲ್ಲ ಎಂದು ಮಾನ್ಯ ಕರ್ನಾಟಕ ಹೈಕೋರ್ಟ್‌ 1997 ರಲ್ಲಿ ಅಭಿಪ್ರಾಯ ಪಟ್ಟಿದೆ.

ಅಬಕಾರಿ ಪರವಾನಗೆಯನ್ನು ನೀಡುವ ಮುನ್ನ 100 ಮೀ. ಅಂತರ ಎಂಬ ನಿಯಮ 5 ಕ್ಕೆ ಬದ್ಧರಾಗಿ ಜನಸಾಮಾನ್ಯರ ಸಾಮಾಜಿಕ ಸ್ಥಿತಿಗತಿಗಳನ್ನು ಕಡೆಗಣಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿರುತ್ತದೆ.


ಇದನ್ನೂ ಓದಿ: ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...