Homeಕರ್ನಾಟಕಹಾಸನ ಲೈಂಗಿಕ ಹಗರಣ: ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತಿಗೆ ಶಾಸಕ ಶರಣಗೌಡ ಆಗ್ರಹ

ಹಾಸನ ಲೈಂಗಿಕ ಹಗರಣ: ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತಿಗೆ ಶಾಸಕ ಶರಣಗೌಡ ಆಗ್ರಹ

- Advertisement -
- Advertisement -

ದೇಶದಲ್ಲಿ ಭಾರೀ ಸದ್ದು ಮಾಡಿರುವ, ರಾಜ್ಯದಲ್ಲಿ ಯಾರೂ ಊಹಿಸಲು ಸಾಧ್ಯವಾಗದ ಅತಿದೊಡ್ಡ ಲೈಂಗಿಕ ಹಗರಣದ ಪ್ರಮುಖ ಆರೋಪಿ, ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಆಗ್ರಹ ಕೇಳಿಬಂದಿದೆ.

ಬಿಜೆಪಿ ಜತೆಗಿನ ಮೈತ್ರಿ ಕಾರಣಕ್ಕೆ ಬಹಿರಂಗವಾಗಿಯೇ ಅಸಮಾಧಾಣ ಹೊರಹಾಕಿದ್ದ, ಗುರುಮಿಠಕಲ್ ಜೆಡಿಎಸ್ ಶಾಸಕ ಶರಣಗೌಡ ಕುಂದಕೂರು ಅವರು, ಪಕ್ಷದ ಸರ್ವೋಚ್ಛ ನಾಯಕ ಎಚ್.ಡಿ.ದೇವೇಗೌಡ ಮತ್ತು ರಾಜ್ಯಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ‘ಕೂಡಲೇ ಪ್ರಜ್ವಲ್‌ ಅವರನ್ನು ಅಮಾನತು ಮಾಡಬೇಕು; ಎಂದು ಒತ್ತಾಯಿಸಿದ್ದಾರೆ.

ಪ್ರಜ್ವಲ್ ಅಶ್ಲೀಲ ವಿಡಿಯೋಗಳ ಪ್ರಕರಣದಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ‌; ರಾಜ್ಯದಲ್ಲಿ 2ನೇ ಹಂತದ ಮತದಾನ ಇನ್ನೂ ನಡೆಯಬೇಕಿದೆ. ಇದು ಚುನಾವಣೆ ಮೇಲೆ ಪ್ರಭಾವ ಬೀರಿ, ಪಕ್ಷಕ್ಕೂ ಹಾನಿಯಾಗಲಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಅಮಾನತುಪಡಿಸಬೇಕು’ ಎಂದು ಗುರುಮಿಠಕಲ್ ಶಾಸಕ ಶರಣಗೌಡ ಆಗ್ರಹಿಸಿದ್ದಾರೆ.

ಸರ್ಕಾರ ಈ ಪ್ರಕರಣವನ್ನು ಈಗಾಗಲೇ ಎಸ್‌ಐಟಿ ತನಿಖೆಗೆ ವಹಿಸಿದೆ. ಪ್ರಕರಣ ಇತ್ಯರ್ಥ ಆಗುವವರೆಗೂ ಅಮಾನತು ಮಾಡಿ ಪಕ್ಷಕ್ಕೆ ಆಗುತ್ತಿರುವ ಮುಜುಗರ ತಪ್ಪಿಸಿ ಎಂದು ಅವರು ಕೋರಿದ್ದಾರೆ.

ಪೂರ್ವ ಯೋಜಿತವಾಗಿರಬೇಕು: ಬಸವರಾಜ ಬೊಮ್ಮಾಯಿ

ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ, “ಲೋಕಸಭೆ ಚುನಾವಣೆಯ ಸಮಯದಲ್ಲಿ ಈ ವಿಷಯವು ‘ಪೂರ್ವ ಯೋಜಿತ’ ಆಗಿರಬೇಕು. ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತ ಭಾವನೆ ಹೊಂದಿಲ್ಲ” ಎಂದು ಹೇಳಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, “ಘಟನೆಯ ಸಮಯವನ್ನು ಗಮನಿಸಿದರೆ, ಹಾಸನ ಲೈಂಗಿಕ ಹಗರಣವನ್ನು ಯಾರೋ ಮೊದಲೇ ಯೋಜಿಸಿದ್ದಾರೆ ಎಂದು ತೋರುತ್ತದೆ. ಕೆಲವು ವೀಡಿಯೋಗಳು ನಕಲಿ ಎಂದು ನಾನು ಕೇಳಿದೆ. ಇದೇ ರೀತಿಯ ಹಲವು ವಿಡಿಯೋಗಳು ಹರಿದಾಡುತ್ತಿವೆ. ಆದರೆ, ಈ ಬಗ್ಗೆ ಎಸ್‌ಐಟಿ ತನಿಖೆ ಏಕೆ” ಎಂದು ಪ್ರಶ್ನಿಸಿದ್ದಾರೆ.

ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ‘ಅಶ್ಲೀಲ ವಿಡಿಯೋ’ಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ಅಲ್ಲದೇ ಮಹಿಳಾ ಆಯೋಗದ ಅಧ್ಯಕ್ಷರು ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಕಳೆದ ವಾರ, ಜನತಾ ದಳ (ಜಾತ್ಯತೀತ) ಮತ್ತು ಬಿಜೆಪಿಯ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ಎಂಜಿ, ನವೀನ್ ಗೌಡ ಮತ್ತು ಇತರರು ಪ್ರಜ್ವಲ್ ರೇವಣ್ಣ ಅವರ ಇಮೇಜ್‌ಗೆ ಕಳಂಕ ತರಲು ಅಶ್ಲೀಲ ವೀಡಿಯೊಗಳನ್ನು ಪ್ರಸಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ, ಪ್ರಜ್ವಲ್ ಶನಿವಾರ ಬೆಳಗ್ಗೆ ಜರ್ಮನಿಗೆ ಫ್ರಾಂಕ್‌ಫರ್ಟ್‌ಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ; ಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....