Homeಕರ್ನಾಟಕಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

- Advertisement -
- Advertisement -

ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, “ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರು ಸಹಾಯವಾಣಿ ಸಂಖ್ಯೆ 6360938947ಕ್ಕೆ ಬೆಳ್ಳಿಗ್ಗೆ 8 ರಿಂದ ರಾತ್ರಿ 8 ಗಂಟೆಯ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದು. ಕರೆ ಮಾಡುವವರ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್‌ಐಟಿ ಕಚೇರಿಗೂ ಬರುವ ಅಗತ್ಯವಿಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುವುದು” ಎಂದಿದ್ದಾರೆ.

ವಿಡಿಯೋ ಹಂಚಿದರೆ ಕ್ರಮ :

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ವಾಟ್ಸಾಪ್ ಮೆಸೆಂಜರ್ ಆ್ಯಪ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ (67(ಎ) ಹಾಗೂ ಕಲಂ (228ಎ(1), ಐಪಿಸಿ ಸೆಕ್ಷನ್ 292ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆ್ಯಪ್‌ ಮೂಲಕ ಹಂಚುವುದನ್ನೂ ಪತ್ತೆ ಹಚ್ಚಲು ಸಾಧ್ಯವಿದೆ. ಯಾರಾದರು ವಿಡಿಯೋ ಹಂಚಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಮುಖ್ಯಸ್ಥರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ, ಸಂಸ್ಥೆಗಳು ಮಾಡಬಾರದು. ಈ ವಿಚಾರದಲ್ಲಿ ಅಗತ್ಯ ಕಂಡು ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸಂತ್ರಸ್ತರ ವಿಚಾರದಲ್ಲಿ ಎಸ್ಐಟಿ ಬಹಳ ಸಂವೇದನೆಯಿಂದ ನಡೆದುಕೊಳ್ಳಲಿದೆ. ಇದಕ್ಕಾಗಿ ಆಪ್ತ ಸಮಾಲೋಚಕರು, ವೈದ್ಯರು ಮತ್ತು ಈ ಬಗ್ಗೆ ಅನುಭ ಇರುವವರ ಸಹಾಯವನ್ನು ಈಗಾಗಲೇ ಪಡೆದುಕೊಂಡಿದೆ ಎಂದು ಬಿ.ಕೆ ಸಿಂಗ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read