Homeಕರೋನಾ ತಲ್ಲಣಕೊರೊನಾ ನಿಯಮಗಳ ಉಲ್ಲಂಘನೆ, 3ನೇ ಅಲೆಗೆ ಕಾರಣವಾಗಬಹುದು: ದೆಹಲಿ ಹೈಕೋರ್ಟ್

ಕೊರೊನಾ ನಿಯಮಗಳ ಉಲ್ಲಂಘನೆ, 3ನೇ ಅಲೆಗೆ ಕಾರಣವಾಗಬಹುದು: ದೆಹಲಿ ಹೈಕೋರ್ಟ್

- Advertisement -
- Advertisement -

ಕೋವಿಡ್ ನಿಯಮಾವಳಿಗಳ ಉಲ್ಲಂಘನೆಯು ಮೂರನೇ ಅಲೆಯ ತೀವ್ರತೆಗೆ ಕಾರಣವಾಗುತ್ತದೆ ಎಂದು ಶುಕ್ರವಾರ ದೆಹಲಿ ಹೈಕೋರ್ಟ್ ಎಚ್ಚರಿಸಿದೆ. ಈ ವಾರ ರಾಜಧಾನಿ ದೆಹಲಿಯಲ್ಲಿ ಭಾರೀ ಪ್ರಮಾಣದ ನಿರ್ಬಂಧಗಳನ್ನು ಸಡಿಲಿಸಿರುವ ಕಾರಣ ಮಾರುಕಟ್ಟೆಗಳಲ್ಲಿ ಕೊರೊನಾ ನಿಯಮಗಳ ಉಲ್ಲಂಘನೆ ಕಂಡುಬಂದಿದೆ. ಇದಕ್ಕೆ ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ದೆಹಲಿಯಲ್ಲಿ ಅನ್‌ಲಾಕ್‌ ಮಾಡುವ ಬಗ್ಗೆ ವರದಿ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್, ಒಕ್ಕೂಟ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಕೊರೊನಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮತ್ತು ಅಂಗಡಿ ವ್ಯಾಪಾರಿಗಳಿಗೆ ಸೂಕ್ಷ್ಮತೆಯನ್ನು ಅರ್ಥ ಮಾಡಿಸಲು ಅಧಿಕಾರಿಗಳಿಗೆ ತಿಳಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇದೇ ರೀತಿ ಕೊರೊನಾ ನಿಯಮಾವಳಿಗಳನ್ನು ಉಲ್ಲಂಘಿಸುವುದು ಮುಂದುವರಿದರೆ, ನಾವು ದೊಡ್ಡ ತೊಂದರೆಗೆ ಸಿಲುಕುತ್ತೇವೆ. ಪರಿಸ್ಥಿತಿ ಹೀಗೆ ಆದರೆ, ದೇವರೇ ನಮಗೆ ಸಹಾಯ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ದೆಹಲಿಯಲ್ಲಿ, ಈಗ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಹಂತ ಹಂತವಾಗಿ ಅನ್‌ಲಾಕ್ ಮಾಡಲಾಗುತ್ತಿದೆ. ಈ ಹಿನ್ನೆಲೆ ನಗರದ ಜನಪ್ರಿಯ ಶಾಪಿಂಗ್ ಮಾರುಕಟ್ಟೆಗಳಲ್ಲಿ, ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಕಂಡುಬಂದಿದೆ. ಸಾಮಾಜಿಕ ಅಂತರ ಇಲ್ಲದಿರುವುದು, ಮಾಸ್ಕ್‌ಗಳನ್ನು ಬಳಸದಿರುವುದು ಸೇರಿದಂತೆ ಕೊರೊನಾ ನಿಯಮಾವಳಿಗನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ದೆಹಲಿಯ ಹಲವು ವೈದ್ಯರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ದೆಹಲಿಯ ಏಮ್ಸ್ ವೈದ್ಯರೊಬ್ಬರು ಜನರು ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿರುವ ಚಿತ್ರಗಳನ್ನು ನ್ಯಾಯಮೂರ್ತಿಗಳಿಗೆ ಕಳುಹಿಸಿದ್ದರು. ಈ ಚಿತ್ರಗಳನ್ನು ಗಮನಿಸಿದ ನ್ಯಾಯಪೀಠ, “ನಾವು ಈ ನಗರದ ಪ್ರಜೆಯಾಗಿ ಈ ಚಿತ್ರಗಳನ್ನು ನೋಡಿದಾಗ ಚಿಂತೆ ಉಂಟಾಗುತ್ತದೆ” ಎಂದಿದೆ.

ಇನ್ನು 3ನೇ ಅಲೆಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ದೆಹಲಿಯಲ್ಲಿ ವೈದ್ಯರು ಮತ್ತು ನರ್ಸ್‌ಗಳಿಗೆ ಸಹಾಯ ಮಾಡಲು 5,000 ಯುವಜನರಿಗೆ ವೈದ್ಯಕೀಯ ತರಬೇತಿ ನೀಡಲು ಅರವಿಂದ್ ಕೇಜ್ರಿವಾಲ್ ಸರ್ಕಾರ ಮುಂದಾಗಿದೆ.


ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

0
ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿರುವ ಮತ್ತು ಆ ಯುವಕ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಜಾತಿ...