Homeಕರ್ನಾಟಕದ್ವೇಷಕ್ಕೆ ಜನರನ್ನ ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲ - ಪ್ರಿಯಾಂಕ್ ಖರ್ಗೆ

ದ್ವೇಷಕ್ಕೆ ಜನರನ್ನ ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲ – ಪ್ರಿಯಾಂಕ್ ಖರ್ಗೆ

- Advertisement -
- Advertisement -

ದ್ವೇಷಕ್ಕೆ ಜನರನ್ನ ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲಾ. ಆದರೆ ಪ್ರೀತಿ ಹಾಗೂ ಕಾಂಗ್ರೆಸ್ ನ “ಶಕ್ತಿ” ಜನರನ್ನ ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ನೂತನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದಾಗಿ ಬಹಳಷ್ಟು ಮಹಿಳೆಯರು ತಮ್ಮಿಷ್ಟದ ಪೂಜ್ಯ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಮುಖ್ಯವಾಗಿ ಧರ್ಮಸ್ಥಳ, ಮಲೈ ಮಹದೇಶ್ವರ ಬೆಟ್ಟಗಳಿಗೆ ಹೆಚ್ಚಿನ ಸಂಖ್ಯೆಯ ಮಹಿಳೆಯರು ಹರಿದುಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆಯರವರು, “ಹಿಂದುತ್ವ ಜನರನ್ನ ಧರ್ಮದ ದಾರಿಯಲ್ಲಿ ಸಾಗಿಸುವ ಬದಲಿಗೆ ಸಮಾಜವನ್ನು ಇಬ್ಬಾಗಿಸುವ ದ್ವೇಷ ಹಾಗೂ ಅಸೂಯೆಯ ಕೂಪಕ್ಕೆ ತಳ್ಳಿತ್ತು. ಆದರೆ ನಮ್ಮ ಶಕ್ತಿ ಯೋಜನೆ ಜನರನ್ನು ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ” ಎಂದಿದ್ದಾರೆ.

“ಶಕ್ತಿ ಯೋಜನೆಯಿಂದಾಗಿ ದೇವಸ್ಥಾನ ಹಾಗೂ ಪೂಜಾ ಕೇಂದ್ರಗಳಿಗೆ ಬರುವ ಭಕ್ತರ ಸಂಖ್ಯೆ ದ್ವಿಗುಣವಾಗಿದೆ. ಜನರ ಅಂತರಾಳದಲ್ಲಿ ಪೂಜಿಸುವ, ಪ್ರೀತಿಸುವ ಭಾವನೆಯನ್ನು ಸಬಲಗೊಳಿಸಲಾಗಿದೆ. ಇದರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳ ಸುತ್ತಲಿನ ಸಾವಿರಾರು ಸಣ್ಣ ವ್ಯಾಪಾರಿಗಳಿಗೆ ನೇರ ಅನುಕೂಲ ಸಿಗಲಿದ್ದು, ಅಲ್ಲಿನ ಆರ್ಥಿಕ ಪ್ರಗತಿಯ ವೇಗ ಕೂಡ ದ್ವಿಗುಣಗೊಳ್ಳಲಿದೆ. ದ್ವೇಷ ಕೇಂದ್ರಿತ ಅಧರ್ಮವನ್ನು ಸೋಲಿಸಿ, ಪ್ರೀತಿ ಹಾಗೂ ಸಹಬಾಳ್ವೆ ಕೇಂದ್ರಿತ ಧರ್ಮವನ್ನು ಗೆಲ್ಲಿಸಲು ನಾವು ‘ಶಕ್ತಿ’ಯುತ ಹೆಜ್ಜೆ ಇಟ್ಟಿದ್ದೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ಶಕ್ತಿ ಯೋಜನೆ ಪ್ರಾರಂಭವಾದ ಈ ಒಂದು ವಾರದಲ್ಲಿ ಸುಮಾರು 3 ಕೋಟಿ ಮಹಿಳೆಯರು ಇದರ ಪ್ರಯೋಜನ ಪಡೆದಿದ್ದಾರೆ. ಆರಂಭದಲ್ಲಿ ಸಹಜವಾಗಿ ಹೆಚ್ಚಿನ ಜನ ಬರುತ್ತಿರುವುದರಿಂದ ನೂಕುನುಗ್ಗಲು ಉಂಟಾಗಿದೆ. ಆದರೆ ಕ್ರಮೇಣ ಅದು ಸಹಜ ಸ್ಥಿತಿಗೆ ಬರುತ್ತದೆ. ಏಕೆಂದರೆ ಜನ ಪದೇ ಪದೇ ಅದೇ ಸ್ಥಳಗಳಿಗೆ ಹೋಗಲು ಬಯಸುವುದಿಲ್ಲ. ಇನ್ನು ಶಕ್ತಿಯೋಜನೆಯನ್ನು 5 ವರ್ಷಗಳ ಕಾಲವೂ ಜಾರಿಗೊಳಿಸಲಾಗುವುದು” ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಮಹಿಳೆಯರಿಗೆ ಬಸ್‌ ಪ್ರಯಾಣ ಉಚಿತವಾದ ಹಿನ್ನೆಲೆಯಲ್ಲಿ ಅವರು ತಮ್ಮ ಬಿಡುವಿನ ವೇಳೆಯಲ್ಲಿ ತಮ್ಮಿಷ್ಟದ ಸ್ಥಳಗಳಿಗೆ ಹೋಗುತ್ತಿದ್ದಾರೆ. ಬಹುತೇಕರು ತಮ್ಮೊಂದಿಗೆ ತಮ್ಮ ಪತಿಯರನ್ನು ಕರೆದೊಯ್ಯುತ್ತಿದ್ದಾರೆ. ಹಾಗಾಗಿ ರಸ್ತೆ ಸಾರಿಗೆ ಇಲಾಖೆಗೂ ಲಾಭವಾಗುತ್ತಿದೆ ಎಂಬುದಾಗಿ ಮೂಲಗಳು ತಿಳಿಸಿವೆ. ಅಲ್ಲದೇ ಜನರ ಓಡಾಟ ಹೆಚ್ಚಾದಂತೆ ಹೋಟೆಲ್‌ಗಳು-ಅಂಗಡಿಗಳ ವ್ಯಾಪಾರ ವಹಿವಾಟು ಕೂಡ ಹೆಚ್ಚಾಗುತ್ತಿದೆ. ಇದು ಆರ್ಥಿಕತೆ ಬೆಳವಣಿಗೆಯ ದೃಷ್ಟಿಯಿಂದ ಒಳ್ಳೆಯದಾಗಲಿದೆ ಎಂಬ ಮಾತುಗಳು ಕೇಳಿಬಂದಿವೆ.

ಇದನ್ನೂ ಓದಿ: ಕಡುಬಡವರ ಬದುಕಲ್ಲಿ ಕೊಂಚ ಆಸರೆ ಗ್ಯಾರಂಟಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...