Homeಮುಖಪುಟಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ವಿವಾದ ಭಾರಿ ಆಕ್ರೋಶಕ್ಕೆ ಕಾರಣವಾಗಿರುವ ನಡುವೆ ದ್ವೇಷದ ಸಂದೇಶಗಳನ್ನು ಹರಡಿದ ಆರೋಪದಲ್ಲಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ, ಉಚ್ಛಾಟಿತ ನಾಯಕ ನವೀನ್ ಜಿಂದಾಲ್ ಮತ್ತು ಪತ್ರಕರ್ತೆ ಸಬಾ ನಖ್ವಿ ಏರಿದಂತೆ ಇತರರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದ್ವೇಷದ ಸಂದೇಶಗಳನ್ನು ಹರಡುವ, ವಿವಿಧ ಗುಂಪುಗಳ ನಡುವೆ ಗಲಭೇಗೆ ಪ್ರಚೋದಿಸುವ ಮತ್ತು ಸಾರ್ವಜನಿಕ ನೆಮ್ಮದಿಗೆ ಹಾನಿಕಾರಕವಾದ ಸನ್ನಿವೇಶಗಳನ್ನು ಸೃಷ್ಟಿಸುತ್ತಿರುವ ಕೆಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಐಎಫ್‌ಎಸ್‌ಒ (Intelligence Fusion and Strategic Operation) ಘಟಕ ದಾಖಲಿಸಿದ ಎಫ್‌ಐಆರ್‌ನಲ್ಲಿ ದೆಹಲಿ ಬಿಜೆಪಿಯ ಮಾಧ್ಯಮ ಘಟಕದ ಉಚ್ಛಾಟಿತ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್, ಪೀಸ್ ಪಾರ್ಟಿಯ ಮುಖ್ಯ ವಕ್ತಾರ ಶಾದಾಬ್ ಚೌಹಾಣ್ ಸೇರಿದ್ದಾರೆ. ಪತ್ರಕರ್ತೆ ಸಬಾ ನಖ್ವಿ, ಹಿಂದೂ ಮಹಾಸಭಾದ ಪದಾಧಿಕಾರಿ ಪೂಜಾ ಶಕುನ್ ಪಾಂಡೆ, ರಾಜಸ್ಥಾನದ ಮೌಲಾನಾ ಮುಫ್ತಿ ನದೀಮ್, ಅಬ್ದುರ್ ರೆಹಮಾನ್, ಅನಿಲ್ ಕುಮಾರ್ ಮೀನಾ ಮತ್ತು ಗುಲ್ಜಾರ್ ಅನ್ಸಾರಿ ಹೆಸರಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

ದೆಹಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಒಂದು ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಮತ್ತು ಇನ್ನೊಂದು “ವಿವಾದಾತ್ಮಕ” ಹೇಳಿಕೆಗಳನ್ನು ನಿರಂತರವಾಗಿ ನೀಡುತ್ತಿರುವ ಆರೋಪ ಹೊತ್ತಿರುವವರ ವಿರುದ್ಧ.

ಸೈಬರ್‌ಸ್ಪೇಸ್‌ನಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶದಿಂದ ಸುಳ್ಳು ಮಾಹಿತಿಯನ್ನು ಪ್ರಚಾರ ಮಾಡುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಪಾತ್ರವನ್ನು ಐಎಫ್‌ಎಸ್‌ಒ ಘಟಕವು ತನಿಖೆ ಮಾಡುತ್ತದೆ ಪೊಲೀಸ್ ಉಪ ಆಯುಕ್ತ (ಐಎಫ್‌ಎಸ್‌ಒ) ಕೆಪಿಎಸ್ ಎಂದು ಮಲ್ಹೋತ್ರಾ ಹೇಳಿದ್ದಾರೆ.

ಈ ನಡುವೆ ನೂಪುರ್ ಶರ್ಮಾ ಅವರ ಅವಹೇಳನಕಾರಿ ಹೇಳಿಕೆಯ ನಂತರ ಒಕ್ಕೂಟ ಸರ್ಕಾರವು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಒತ್ತಡಕ್ಕೆ ಸಿಲುಕಿದೆ. ಇದರಿಂದ ಆಡಳಿತಾರೂಢ ಬಿಜೆಪಿ ತನ್ನ ಪಕ್ಷದ ವಕ್ತಾರರು ಮತ್ತು ಟಿವಿ ಚರ್ಚೆಗಳಲ್ಲಿ ಭಾಗವಹಿಸುವ ನಾಯಕರಿಗೆ ಹೊಸ ನಿಯಮಗಳನ್ನು ನಿಗದಿಪಡಿಸಿದೆ.


ಇದನ್ನೂ ಓದಿ: ಉತ್ತರ ಪ್ರದೇಶ: ಜಾಮಾ ಮಸೀದಿಗೆ ಭೇಟಿ ನೀಡದಂತೆ ಯತಿ ನರಸಿಂಗಾನಂದಗೆ ಜಿಲ್ಲಾಡಳಿತ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತುರ್ಕಿಗಳು ಹಿಂದೂ ದೇವರುಗಳ ಬಗ್ಗೆ ಅವಹೇಳನ ಮಾಡಿದಾಗ ಸತ್ತು ಬಿದ್ದಿದ್ದ ನಾಯಿಗಳು ಈಗ ಪೈಗಂಬರ್ ಬಗ್ಗೆ ಮಾತನಾಡಿದ್ದಕ್ಕೆ ಹೊಲಸು ತಿಂದ ಹಂದಿ ತರ ಹಾರಾಡ್ತಿವೆ .ಇದಕ್ಕೆ ಏನನ್ನಬೇಕು ಹೇಳಿ

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...