Homeಮುಖಪುಟಎನ್‌ಡಿಎ ತೊರೆದ ಅಕಾಲಿ ದಳದ ಬಿಕ್ರಂ ಸಿಂಗ್ ಅವರ Z-ಪ್ಲಸ್ ಭದ್ರತೆ ಹಿಂಪಡೆದ ಕೇಂದ್ರ!

ಎನ್‌ಡಿಎ ತೊರೆದ ಅಕಾಲಿ ದಳದ ಬಿಕ್ರಂ ಸಿಂಗ್ ಅವರ Z-ಪ್ಲಸ್ ಭದ್ರತೆ ಹಿಂಪಡೆದ ಕೇಂದ್ರ!

ಅಕಾಲಿ ದಳ ಪಕ್ಷವು ರೈತರೊಂದಿಗೆ ದೃಢವಾಗಿ ನಿಂತಿದೆ ಎಂಬ ಕಾರಣಕ್ಕೆ ಮಜಿತಿಯಾ ಅವರ ಭದ್ರತಾ ರಕ್ಷಣೆಯನ್ನು ಹಿಂಪಡೆಯಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಚೀಮಾ ಆರೋಪಿಸಿದ್ದಾರೆ.

- Advertisement -
- Advertisement -

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಪಂಜಾಬ್‌ನ ಮಾಜಿ ಸಚಿವ ಬಿಕ್ರಂ ಸಿಂಗ್ ಮಜಿತಿಯಾ ಅವರಿಗೆ ನೀಡಲಾಗಿದ್ದ Z-ಪ್ಲಸ್ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡಿದೆ ಎಂದು ಶಿರೋಮಣಿ ಅಕಾಲಿ ದಳ ಆರೋಪಿಸಿದ್ದು, ವಾಗ್ದಾಳಿ ನಡೆಸಿದೆ.

ಮಾಜಿ ಸಚಿವ ಮತ್ತು ಅಕಾಲಿ ದಳದ ಹಿರಿಯ ನಾಯಕ ಬಿಕ್ರಮ್ ಸಿಂಗ್ ಮಜಿತಿಯಾ ಅವರಿಗೆ ನೀಡಿದ್ದ Z-ಪ್ಲಸ್ ಭದ್ರತೆಯನ್ನು ಹಿಂಪಡೆದಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಮತ್ತು ರಾಜಕೀಯ ಪ್ರೇರಿತವಾದ ಈ ನಿರ್ಧಾರವನ್ನು ಅಕಾಲಿ ದಳವು ಖಂಡಿಸುತ್ತದೆ ಎಂದು ಪಕ್ಷದ ವಕ್ತಾರ ದಲ್ಜಿತ್ ಸಿಂಗ್ ಚೀಮಾ ಹೇಳಿದ್ದಾರೆ.

ಇದನ್ನೂ ಓದಿ: ಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಕೇಂದ್ರದ ಕೃಷಿ ಕಾನೂನುಗಳ ಪರವಾಗಿ ಮತ್ತು ಜಮ್ಮು-ಕಾಶ್ಮೀರದಲ್ಲಿ ಪಂಜಾಬಿ ಭಾಷೆಗೆ ಅಧಿಕೃತ ಸ್ಥಾನಮಾನವನ್ನು ನಿರಾಕರಿಸಿರುವುದರ ವಿರುದ್ಧ ಹಾಗೂ ಅಕಾಲಿ ದಳ ಪಕ್ಷವು ರೈತರೊಂದಿಗೆ ದೃಢವಾಗಿ ನಿಂತಿದೆ ಎಂಬ ಕಾರಣಕ್ಕೆ ಹಿರಿಯ ನಾಯಕ ಮಜಿತಿಯಾ ಅವರ ಭದ್ರತಾ ರಕ್ಷಣೆಯನ್ನು ಹಿಂಪಡೆಯಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಚೀಮಾ ಆರೋಪಿಸಿದ್ದಾರೆ.

“ಸಂಸತ್ತಿನಲ್ಲಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಮ್ಮ ಪಕ್ಷವು ಮತ ಚಲಾಯಿಸಿತ್ತು. ಈ ಭಾಗವಾಗಿಯೇ ಕೇಂದ್ರ ಕ್ಯಾಬಿನೆಟ್ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ತ್ಯಜಿಸಿದ್ದೆವು” ಎಂದು ಹೇಳಿದರು.

ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ಇಂತಹ ರಾಜಕಾರಣವು ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತದೆ ಎಂದು ಹೇಳಿದ ಚೀಮಾ, “ಹಿರಿಯ ಎಡಪಂಥೀಯ ನಾಯಕ ಮತ್ತು ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್ ಸಿಂಗ್ ಅವರ ಭದ್ರತಾ ಪಡೆಯನ್ನು ಹಿಂತೆಗೆದುಕೊಂಡ ನಂತರ ಇತ್ತೀಚೆಗೆ ತಾರ್ನ್‌ ತರಣ್‌ನಲ್ಲಿ ಅವರನ್ನು ಹೇಗೆ ಹತ್ಯೆ ಮಾಡಲಾಯಿತು ಎಂಬುದನ್ನು ನಾವು ಈಗಾಗಲೇ ನೋಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಎನ್‌ಡಿಎ ಮೈತ್ರಿಕೂಟ ತೊರೆದ ಪಂಜಾಬ್‌ನ ಅಕಾಲಿ ದಳ!

“ಸರ್ಕಾರದ ಗುಣಗಾನ ಮಾಡುವ ಜನರಿಗೆ ಅಪೇಕ್ಷೆ ಮತ್ತು ಮನೋಭಾವದ ಮೇಲೆ ಭದ್ರತೆಯನ್ನು ನೀಡಬಾರದು. ಕೃಷಿ ಸಮುದಾಯವನ್ನು ಬೆಂಬಲಿಸುವ ಸಲುವಾಗಿ ಅಕಾಲಿದಳ ಕೇಂದ್ರದ ವಿರುದ್ಧ ದನಿಯೆತ್ತಿದ್ದಕ್ಕೆ ಇದ್ದಕ್ಕಿದ್ದಂತೆ ಮಜಿತಿಯಾ ಅವರ ಭದ್ರತಾ ಪಡೆಯನ್ನು ಹಿಂಪಡೆಯಲಾಗಿದೆ. ಈ ಕ್ರಮ ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವಾಲಯ ವಿವರಿಸುತ್ತದೆಯೇ?” ಎಂದು ಅವರು ಪ್ರಶ್ನಿಸಿದರು.

ಮಜಿತಿಯಾ ಅವರನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕರು ಗುರಿಯಾಗಿಸಿಕೊಂಡಿದ್ದು, ಇವರನ್ನು ಕೊಲೆ ಮಾಡುವುದಾಗಿ ಬಹಿರಂಗ ಬೆದರಿಕೆ ಹಾಕಿದ್ದಾರೆ. ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕೂಡ ಇತ್ತೀಚೆಗೆ ಪಂಜಾಬ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗುತ್ತಿದೆ ಎಂದಿದ್ದರು.

ಹಾಗಾಗಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಅಕಾಲಿದಳ ತೀವ್ರ ವಾಗ್ದಾಲಿ ನಡೆಸಿದೆ.


ಇದನ್ನೂ ಓದಿ: ಕೃಷಿ ಮಸೂದೆ: ಪಂಜಾಬ್‌ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಪ್ ಶಾಸಕರ ಅಹೋರಾತ್ರಿ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...