Homeಕರ್ನಾಟಕದ್ವೇಷ ಪ್ರಚೋದನೆ; ಕನ್ನಡ ಸುದ್ದಿವಾಹಿನಿಗಳ ವಿರುದ್ಧ 17 ದೂರು ನೀಡಿದರೂ ಪೊಲೀಸರಿಂದ ಸಿಗದ ಪ್ರತಿಕ್ರಿಯೆ- ಸಿಎಎಚ್‌ಎಸ್‌

ದ್ವೇಷ ಪ್ರಚೋದನೆ; ಕನ್ನಡ ಸುದ್ದಿವಾಹಿನಿಗಳ ವಿರುದ್ಧ 17 ದೂರು ನೀಡಿದರೂ ಪೊಲೀಸರಿಂದ ಸಿಗದ ಪ್ರತಿಕ್ರಿಯೆ- ಸಿಎಎಚ್‌ಎಸ್‌

- Advertisement -
- Advertisement -

ಹೋರಾಟಗಾರರ ಗುಂಪಾದ ಕ್ಯಾಂಪೇನ್ ಎಗೇನ್‌ಸ್ಟ್‌‌ ಹೇಟ್ ಸ್ಪೀಚ್ (ದ್ವೇಷ ಭಾಷಣ ವಿರುದ್ಧ ಅಭಿಯಾನ/ಸಿಎಎಚ್‌ಎಸ್) ದ್ವೇಷ ಪ್ರಚೋದಿತ ವರದಿಗಳನ್ನು ಖಂಡಿಸಿ ಒಂದು ವರ್ಷದ ಅವಧಿಯಲ್ಲಿ ಕನ್ನಡ ಸುದ್ದಿ ವಾಹಿನಿಗಳ ವಿರುದ್ಧ 17 ದೂರುಗಳನ್ನು ನೀಡಿದ್ದು, ಇದರಲ್ಲಿ ಯಾವುದನ್ನೂ ಪೊಲೀಸರು ಸ್ವೀಕರಿಸಿಲ್ಲ ಎಂದು ಗುಂಪಿನ ಸದಸ್ಯರು ಹೇಳಿರುವುದಾಗಿ ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಬೆಂಗಳೂರಿನಲ್ಲಿ ವೈಯಕ್ತಿಕ ವೈಷಮ್ಯದ ಕಾರಣ ನಡೆದ ಅಪರಾಧ ಕೃತ್ಯದ ವರದಿಯನ್ನು ತಿರುಚಿದ ಸಂಬಂಧ ಕನ್ನಡ ಸುದ್ದಿ ವಾಹಿನಿ ಪಬ್ಲಿಕ್ ಟಿವಿ ವಿರುದ್ಧ ಇತ್ತೀಚೆಗೆ ದೂರು ನೀಡಲಾಗಿದೆ. ಮೇ 9 ರಂದು ಪ್ರಸಾರವಾದ ಕಾರ್ಯಕ್ರಮದಲ್ಲಿ ‘ದೇವಾಲಯಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲು ಯೋಜಿಸಿದ ದುಷ್ಕರ್ಮಿಗಳು ಬಂಧನಕ್ಕೊಳಗಾಗಿದ್ದಾರೆ’ ಎಂದು ಸುದ್ದಿ ಪ್ರಕಟಿಸಲಾಯಿತು. ಹಿಂದೂಗಳನ್ನು ಗುರಿಯಾಗಿಸಿ ಕೃತ್ಯ ಎಸಗಲು ಯೋಜಿಸಲಾಗಿತ್ತು ಎಂದು ಯಾವುದೇ ಅಧಿಕೃತತೆ ಇಲ್ಲದೆ ಪಬ್ಲಿಕ್ ಟಿವಿ ವರದಿ ಬಿತ್ತರಿಸಿದೆ ಎಂದು ಸಿಎಎಚ್‌ಎಸ್ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ಪೊಲೀಸ್ ಕಮಿಷನರ್ ಸಿ.ಎಚ್.ಪ್ರತಾಪ್ ರೆಡ್ಡಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ಅವರ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಹಿಂದೂಗಳು ಮತ್ತು ಆರ್‌ಎಸ್‌ಎಸ್ ಮೇಲೆ ಹಲ್ಲೆ ನಡೆಸಲು ಸಂಚು ಎಂದು ಸುಳ್ಳು ಮತ್ತು ಆಧಾರರಹಿತ ಹೇಳಿಕೆಗಳನ್ನು ನೀಡಲಾಗಿದೆ ಎಂದು ಸಿಎಎಚ್‌ಎಸ್‌ ದೂರಿದೆ. ಆಜಾನ್, ಹಿಜಾಬ್ ವಿವಾದ, ಹುಬ್ಬಳ್ಳಿ, ಶಿವಮೊಗ್ಗ, ಪಾದರಾಯನಪುರ, ಕೆ.ಜಿ.ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಕೋಮು ಉದ್ವಿಗ್ನತೆಗೆ ಜೊತೆಗೆ ಈ ಅಪರಾಧ ಕೃತ್ಯವನ್ನು ನಿರೂಪಕ ವೈಯಕ್ತಿಕ ಕಾರಣಗಳಿಂದಾಗಿ ತಳುಕು ಹಾಕಿದ್ದಾನೆ ಎಂದು ತನಿಖಾಧಿಕಾರಿ ಹೇಳಿರುವುದಾಗಿ ವರದಿಯಾಗಿದೆ.

“ತಮ್ಮ ಸಿದ್ಧಾಂತದ ಕಾರಣದಿಂದಾಗಿ ಅವರು ‘ಕೊಲೆಯ ಮನಸ್ಥಿತಿ’ ಹೊಂದಿದ್ದಾರೆ. ಅವರು ಉತ್ತರಪ್ರದೇಶದಲ್ಲಿ ಏನನ್ನೂ ಮಾಡಲು ಸಾಧ್ಯವಾಗದ ಕಾರಣ ಇಲ್ಲಿದ್ದಾರೆಯೇ ಎಂದು ನಿರೂಪಕ ಕೇಳುತ್ತಾನೆ. ಆತ ಸಮುದಾಯದ ಹೆಸರನ್ನು ಉಲ್ಲೇಖಿಸದಿದ್ದರೂ, ಪ್ರೇಕ್ಷಕರಿಗೆ ಇದು ಸ್ಪಷ್ಟವಾಗುತ್ತದೆ. ಆತ ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಿದ್ದಾನೆ. ಸಾರಾಯಿಪಾಳ್ಯದಲ್ಲಿರುವ ದೇವಸ್ಥಾನದ ಮೇಲೆ ದಾಳಿ ನಡೆಸಲು ಯೋಜಿಸಲಾಗಿದೆ ಎಂದು ಪಬ್ಲಿಕ್ ಟಿವಿ ಪ್ರತಿನಿಧಿ ಹೇಳಿದ್ದಾನೆ” ಎಂದು ಸಿಎಎಚ್‌ಎಸ್ ದೂರಿನಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

“ದಾಳಿಗಳನ್ನು ಯೋಜಿಸಲಾಗಿದೆ ಎನ್ನುವ ವರದಿಗಾರನು ತನ್ನ ಹೇಳಿಕೆಗೆ ಒಂದೇ ಒಂದು ಪೊಲೀಸ್ ಮೂಲವನ್ನು ಉಲ್ಲೇಖಿಸುವುದಿಲ್ಲ. ಬದಲಿಗೆ, ವೈಯಕ್ತಿಕ ದ್ವೇಷದ ಕಾರಣದಿಂದ ಮೂವರನ್ನು ಬಂಧಿಸಲಾಗಿದೆ ಎಂದು ಅವರು ಪೊಲೀಸ್ ಮೂಲಗಳನ್ನು ಹೇಳುತ್ತಿವೆ ಎನ್ನುತ್ತಾನೆ. ಪೊಲೀಸರಿಂದ ಸ್ಪಷ್ಟನೆಗಳು ದೊರೆತರೂ, ಹಿಂದೂಗಳ ವಿರುದ್ಧ ಪಿತೂರಿ ನಡೆದಿರುವುದಾಗಿ ಪ್ರತಿಪಾದಿಸಿ ವರದಿಗಳನ್ನು ಮಾಡಲಾಗಿದೆ” ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಪೊಲೀಸರ ಕಣ್ಣು ತಪ್ಪಿಸಿ” ಮಂಡ್ಯ ಮೂಲದ ವಿದ್ಯಾರ್ಥಿ ಮುಸ್ಕಾನ್ ಖಾನ್ ಸೌದಿ ಅರೇಬಿಯಾಕ್ಕೆ “ಉಗ್ರರನ್ನು ಭೇಟಿಯಾಗಲು” ಹೋಗಿರುವುದಾಗಿ ಕನ್ನಡ ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಮಾಡಿವೆ. ಪರಿಶೀಲಿಸದೆ ಸುದ್ದಿ ಪ್ರಕಟಿಸಿದ ಪವರ್ ಟಿವಿ, ಪಬ್ಲಿಕ್ ಟಿವಿ, ನ್ಯೂಸ್ 18 ಕನ್ನಡ ಮತ್ತು ಏಷ್ಯಾನೆಟ್ ಸುವರ್ಣ ಸಂಪಾದಕರಿಗೆ ಸಿಎಎಚ್‌ಎಸ್ ದೂರು ಸಲ್ಲಿಸಿದೆ.

“ವಿದೇಶಕ್ಕೆ ಹಾರಿದ ವಿದ್ಯಾರ್ಥಿನಿ ಮುಷ್ಕಾನ್; ಉಗ್ರಗಾಮಿಗಳ ಭೇಟಿ ಸಂಚು ಇದೆಯಾ?” ಎಂದು ಪವರ್‌ ಟಿವಿ ವರದಿ ಬರೆದರೆ ಇತರ ಚಾನೆಲ್‌ಗಳು ಇದೇ ರೀತಿಯ ಹೇಳಿಕೆಗಳನ್ನು ನೀಡಿವೆ. ಬಲಪಂಥೀಯ ಪೋರ್ಟಲ್ OpIndia ಕೂಡ ಇದೇ ರೀತಿ ವರದಿ ಮಾಡಿದೆ. ಸೌದಿ ಅರೇಬಿಯಾಕ್ಕೆ ಮುಸ್ಕಾನ್ ಪ್ರವಾಸ ಮಾಡಿರುವ ಕುರಿತು ಆಗಿರುವ ಸುಳ್ಳು ಸುದ್ದಿಗಳಿಂದಾಗಿ ಆ ಹೆಣ್ಣು ಮಗಳಿಗೆ ಅಪಾಯ ಉಂಟಾಗಿದೆ. ಇಂತಹ ಬೇಜವಾಬ್ದಾರಿ ಮತ್ತು ದುರುದ್ದೇಶಪೂರಿತ ವರದಿಗಳಿಂದಾಗಿ ಮುಸ್ಕಾನ್‌ ಜೀವನ ಮತ್ತು ಸುರಕ್ಷತೆಗೆ, ಮುಸ್ಕಾನ್‌ ಕುಟುಂಬಕ್ಕೆ ಅಪಾಯ ಎದುರಾಗಿದೆ” ಎಂದು ತನ್ನ ದೂರಿನಲ್ಲಿ ಸಿಎಎಚ್‌ಎಸ್‌ ತಿಳಿಸಿದೆ.

ಇದನ್ನೂ ಓದಿರಿ: ‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

ವೈಯಕ್ತಿಕ ಕಾರಣಕ್ಕಾಗಿ ಮುಸ್ಕಾನ್ ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದ್ದು, ಇದಕ್ಕೆ ಪೊಲೀಸರ ಅನುಮತಿ ಅಗತ್ಯವಿಲ್ಲ ಎಂದು ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ತಿಳಿಸಿದ್ದಾರೆ. ಮುಸ್ಕಾನ್ ಮತ್ತು ಆಕೆಯ ಕುಟುಂಬದ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಉಮ್ರಾ ಯಾತ್ರೆಗಾಗಿ ಮುಸ್ಕಾನ್ ಸೌದಿ ಅರೇಬಿಯಾದಲ್ಲಿದ್ದರು ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ.

ದ್ವೇಷ ಭಾಷಣ ಬೇಡ ಅಥವಾ ದ್ವೇಷ ಭಾಷಣದ ವಿರುದ್ಧ ಅಭಿಯಾನವನ್ನು ಏಪ್ರಿಲ್ 2020ರಲ್ಲಿ ಪ್ರಾರಂಭಿಸಲಾಯಿತು. ಅಂದಿನಿಂದ ಕನ್ನಡ ಸುದ್ದಿ ವಾಹಿನಿಗಳಲ್ಲಿ ಮತಾಂಧತೆ ಮತ್ತು ಕೋಮು ಸಮಸ್ಯೆಗಳ ಸಮಸ್ಯಾತ್ಮಕ ಪ್ರಸಾರದ ನಿದರ್ಶನಗಳ ವಿರುದ್ಧ ಗುಂಪು ನಿರಂತರವಾಗಿ ಧ್ವನಿ ಎತ್ತುತ್ತಿದೆ. 2021 ರಲ್ಲಿ, CAHS ಕನ್ನಡ ಸುದ್ದಿ ವಾಹಿನಿಗಳ ವಿರುದ್ಧ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ 17 ದೂರುಗಳನ್ನು ದಾಖಲಿಸಿದೆ. ಆದರೆ ಯಾವುದನ್ನೂ ಸ್ವೀಕರಿಸಲಾಗಿಲ್ಲ ಎಂದು ‘ನ್ಯೂಸ್‌ ಮಿನಿಟ್’ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....