Homeಮುಖಪುಟಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಬಂಧನದ ತಡೆಯಾಜ್ಞೆ ವಿಸ್ತರಣೆ

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಬಂಧನದ ತಡೆಯಾಜ್ಞೆ ವಿಸ್ತರಣೆ

- Advertisement -
- Advertisement -

ಹಿಂದುತ್ವ ದುಷ್ಕರ್ಮಿ ಯತಿ ನರಸಿಂಹಾನಂದ ಅವರ ಬಗ್ಗೆ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ವಿಸ್ತರಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಫ್ಯಾಕ್ಟ್‌ಚೆಕ್ಕರ್‌ ಮೊಹಮ್ಮದ್ ಜುಬೈರ್

ನ್ಯಾಯಮೂರ್ತಿಗಳಾದ ಸಿದ್ಧಾರ್ಥ ವರ್ಮಾ ಮತ್ತು ಯೋಗೇಂದ್ರ ಕುಮಾರ್ ಶ್ರೀವಾಸ್ತವ ಅವರ ಪೀಠವು ಫೆಬ್ರವರಿ 17 ರವರೆಗೆ ಈ ವಿಷಯದಲ್ಲಿ ಬಂಧನದಿಂದ ಜುಬೇರ್‌ಗೆ ನೀಡಿದ್ದ ಮಧ್ಯಂತರ ರಕ್ಷಣೆಯನ್ನು ವಿಸ್ತರಿಸಿದೆ. ನರಸಿಂಗಾನಂದ ಅವರ ಬಗ್ಗೆ ಪೋಸ್ಟ್‌ ಹಾಕುವುದರೊಂದಿಗೆ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಜುಬೈರ್ ವಿರುದ್ಧ ಅಕ್ಟೋಬರ್ 7 ರಂದು ಪ್ರಕರಣ ದಾಖಲಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ದಸ್ನಾ ದೇವಿ ದೇವಸ್ಥಾನದ ಅರ್ಚಕರಾಗಿರುವ ನರಸಿಂಹಾನಂದ ಸೆಪ್ಟೆಂಬರ್ 29 ರಂದು ಉಪನ್ಯಾಸದ ಸಂದರ್ಭದಲ್ಲಿ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ವರದಿಯಾಗಿದೆ. ಇದರ ನಂತರ ಭಾರತದ ಹಲವಾರು ನಗರಗಳಲ್ಲಿ ಮುಸ್ಲಿಂ ಗುಂಪುಗಳು ಪ್ರತಿಭಟನೆ ನಡೆಸಿದ್ದವು. ಫ್ಯಾಕ್ಟ್‌ಚೆಕ್ಕರ್‌ ಮೊಹಮ್ಮದ್ ಜುಬೈರ್

ಅಕ್ಟೋಬರ್ 3 ರಂದು, ಜುಬೈರ್‌ ಅವರು ಎಕ್ಸ್‌ನಲ್ಲಿ ಭಾಷಣದ ವೀಡಿಯೊವನ್ನು ಹಂಚಿಕೊಂಡಿದ್ದರು ಮತ್ತು ನರಸಿಂಹಾನಂದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಇದರ ನಂತರ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡಿದ್ದಕ್ಕಾಗಿ ನರಸಿಂಗಾನಂದರ ವಿರುದ್ಧ ಈ ಹಿಂದೆ ಹಲವಾರು ಎಫ್‌ಐಆರ್ ದಾಖಲಿಸಲಾಗಿದೆ.

ತಮ್ಮ ವಿರುದ್ಧ ಎಫ್‌ಐಆರ್ ದಾಖಲಾದ ನಂತರ ಬಂಧನದಿಂದ ರಕ್ಷಣೆ ಕೋರಿ ಜುಬೈರ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದರ ನಂತರ ಡಿಸೆಂಬರ್ 20 ರಂದು, ನ್ಯಾಯಾಲಯವು ಜನವರಿ 6 ರವರೆಗೆ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ನೀಡಿತ್ತು. ಈ ವೇಳೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ “ಭಯಾನಕ ಅಪರಾಧಿ” ಅಲ್ಲ ಎಂದು ಕೋರ್ಟ್‌ ಹೇಳಿದ್ದು, ಅವರು ದೇಶ ಬಿಟ್ಟು ಹೊರ ಹೋಗದಂತೆಯೂ ನಿರ್ದೇಶಿಸಲಾಗಿತ್ತು.

ಇದನ್ನೂಓದಿ:  ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...