Homeಕರ್ನಾಟಕಹರ್ಷ ಹತ್ಯೆಯ ನಂತರ ದ್ವೇಷ ಭಾಷಣ: ಸಚಿವ ಈಶ್ವರಪ್ಪ ವಿರುದ್ದ ಎಫ್‌ಐಆರ್‌‌

ಹರ್ಷ ಹತ್ಯೆಯ ನಂತರ ದ್ವೇಷ ಭಾಷಣ: ಸಚಿವ ಈಶ್ವರಪ್ಪ ವಿರುದ್ದ ಎಫ್‌ಐಆರ್‌‌

- Advertisement -
- Advertisement -

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಕಾರ್ಯಕರ್ತ ಹರ್ಷಕೊಲೆಯ ನಂತರ ನಡೆದ ಹಿಂಸಾಚಾರದಲ್ಲಿ ದ್ವೇಷ ಭಾಷಣ ಮಾಡಿದ್ದ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಶಿವಮೊಗ್ಗ ಪಾಲಿಕೆಯ ಬಿಜೆಪಿ ಸದಸ್ಯ ಚೆನ್ನಬಸಪ್ಪ ವಿರುದ್ಧ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದ್ದು, ಅದರಂತೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ್ದರೂ ಸಚಿವರ ವಿರುದ್ಧ ಶಿವಮೊಗ್ಗ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ನಗರದ ನಿವಾಸಿ ರಿಯಾಜ್ ಅಹ್ಮದ್ ಅವರು ಸಚಿವರ ವಿರುದ್ದ ಮತ್ತು ಪಾಲಿಕೆ ಸದಸ್ಯನ ವಿರುದ್ದ ಪ್ರಕರಣ ದಾಖಲಿಸುವಂತೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವಾದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್ಜಿಯನ್ನು ಪರಿಗಣಿಸಿದ್ದ ನ್ಯಾಯಾಲಯ ಸಚಿವ ಈಶ್ವರಪ್ಪ ಮತ್ತು ಬಿಜೆಪಿ ಸದಸ್ಯನ ವಿರುದ್ದ ಪ್ರಕರಣ ದಾಖಲಿಸುವಂತೆ ನಿರ್ದೇಶನ ನೀಡಿದೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸಚಿವ ಈಶ್ವರಪ್ಪ ಅವರ ಕೋಮು ಪ್ರಚೋದನೆ ಮತ್ತು ಪ್ರಚೋದನಕಾರಿ ಹೇಳಿಕೆಗಳಿಂದಾಗಿ ಹರ್ಷ ಹತ್ಯೆಯ ನಂತರ ಶಿವಮೊಗ್ಗ ನಗರದಲ್ಲಿ ಹಿಂಸಾಚಾರ ನಡೆದಿದೆ ಎಂದು ರಿಯಾಜ್ ದೂರಿನಲ್ಲಿ ತಿಳಿಸಿದ್ದರು. ಈ ಹಿಂದೆ ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ದೂರು ನೀಡಲು ನಿರಾಕರಿಸಿದ್ದರು ಎಂದು ರಿಯಾಝ್ ಆರೋಪಿಸಿದ್ದದ್ದರು.

ಹರ್ಷ ಹತ್ಯೆಯ ನಂತರ ಮಾಧ್ಯಮದವರ ಜೊತೆಗೆ ಮಾತನಾಡಿದ್ದ ಈಶ್ವರಪ್ಪ, ಹರ್ಷ ಹತ್ಯೆ ಮಾಡಿದವರು ಮುಸ್ಲಿಂ ಗೂಂಡಾಗಳು ಎಂದು ಪೊಲೀಸ್ ತನಿಖೆಗೆ ಮೊದಲೇ ಹೇಳಿದ್ದರು. ಜೊತೆಗೆ ನಿಷೇದಾಜ್ಞೆ ಇದ್ದರೂ ತನ್ನ ನೇತೃತ್ವದಲ್ಲಿ ಈಶ್ವರಪ್ಪ ಅವರು ಮರವಣಿಗೆ ನಡೆಸಿದ್ದರು. ಈ ವೇಳೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನರು ಮುಸ್ಲಿಮರ ವಸತಿ ಪ್ರದೇಶಗಳಿಗೆ ನುಗ್ಗಿ ಬೆಂಕಿ ಹಚ್ಚಿ, ಅಪಾರ ಪ್ರಮಾಣದ ನಷ್ಟ ಉಂಟು ಮಾಡಿದ್ದರು.

ಎಫ್‌ಐಆರ್‌ ಕಾಪಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ’ಇವ ನಮ್ಮವ’ ಪರಂಪರೆ ನಮ್ಮದು: ನಿಜ ಆಧ್ಯಾತ್ಮಿಕ ಮಠಾಧೀಶರ ಮನದಾಳದ ಮಾತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...