Homeಮುಖಪುಟಮಹಾತ್ಮ ಗಾಂಧಿ ವಿರುದ್ಧ ದ್ವೇಷ ಭಾಷಣ: ಯತಿ ನರಸಿಂಗಾನಂದ ಮೇಲೆ ಎಫ್‌ಐಆರ್‌

ಮಹಾತ್ಮ ಗಾಂಧಿ ವಿರುದ್ಧ ದ್ವೇಷ ಭಾಷಣ: ಯತಿ ನರಸಿಂಗಾನಂದ ಮೇಲೆ ಎಫ್‌ಐಆರ್‌

- Advertisement -
- Advertisement -

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿಯಾಗಿ ದಾಸ್ನಾ ದೇವಿ ದೇವಸ್ಥಾನದ ಅರ್ಚಕ, ದ್ವೇಷ ಭಾಷಣಗಳಿಗೆ ಹೆಸರಾದ ಮಹಂತ ಯತಿ ನರಸಿಂಗಾನಂದ ಸರಸ್ವತಿ ಮಾತನಾಡಿರುವ ವಿಡಿಯೊ ಟ್ವಿಟರ್‌ನಲ್ಲಿ ವೈರಲ್‌ ಆಗಿದ್ದು, ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬುಧವಾರ ರಾತ್ರಿ ವೈರಲ್ ಆಗಿರುವ 2.20 ನಿಮಿಷಗಳ ವೀಡಿಯೊದಲ್ಲಿ, ಯತಿ ನರಸಿಂಗಾನಂದ ಸರಸ್ವತಿ ಅವರು, “ಮಹಾತ್ಮ ಗಾಂಧಿ ಭಾರತೀಯ ಮುಸ್ಲಿಮರಿಗೆ ಹಕ್ಕುಗಳನ್ನು ನೀಡಿದರು. ಗಾಂಧಿ ಕಾರಣದಿಂದಾಗಿ 100 ಕೋಟಿ ಹಿಂದೂ ಸಮುದಾಯಕ್ಕೆ ತಮ್ಮದೇ ಆದ ಒಂದು ಇಂಚು ಭೂಮಿ ಇಲ್ಲ” ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಾತ್ಮ ಗಾಂಧಿಯವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಪೊಲೀಸರು ಗುರುತಿಸಿದ್ದಾರೆ. ಯತಿ ನರಸಿಂಗಾನಂದರ ಹೇಳಿಕೆಗಳು ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಪಡಿಸುವ ಪರಿಸ್ಥಿತಿಗೆ ಕಾರಣವಾಗಬಹುದು ಎಂದು ಮುಸ್ಸೂರಿ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ.

ಮುಸ್ಸೂರಿ ಪೊಲೀಸ್ ಠಾಣೆಯಲ್ಲಿ ನರಸಿಂಗಾನಂದ ಸರಸ್ವತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆಗಳು), 153ಬಿ (ರಾಷ್ಟ್ರೀಯ ಏಕೀಕರಣಕ್ಕೆ ಹಾನಿಯುಂಟುಮಾಡುವ ಆರೋಪ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

“ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯತಿ ನರಸಿಂಗಾನಂದ ದ್ವೇಷ ಭಾಷಣ ಮಾಡುವುದು ಇದೇ ಮೊದಲೇನಲ್ಲ. ಮುಸ್ಲಿಮರ ನರಮೇಧಕ್ಕೆ ಕರೆ ನೀಡಿರುವ ಕುಖ್ಯಾತ ಇವರ ಮೇಲಿದೆ.

“ಭಾರತಕ್ಕೆ ಮುಸ್ಲಿಂ ವ್ಯಕ್ತಿ ಪ್ರಧಾನಿಯಾದರೆ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು. ಭಾರತಕ್ಕೆ ಮುಸ್ಲಿಂ ಪ್ರಧಾನಿ ಸಿಕ್ಕರೆ ಶೇಕಡಾ 40ರಷ್ಟು ಹಿಂದೂಗಳು ಸಾಯುತ್ತಾರೆ” ಎಂದು ನರಸಿಂಗಾನಂದ ಪ್ರಚೋದಿಸಿದ್ದರು.

2021ರಲ್ಲಿ ಹರಿದ್ವಾರದ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ್ದ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿತ್ತು. ಫೆಬ್ರವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಇದೇ ರೀತಿಯ ಹೇಳಿಕೆ ನೀಡಿದ್ದರು.

ದ್ವೇಷ ಭಾಷಣ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುತ್ತಾ ನರಸಿಂಗಾನಂದ, “ನಮಗೆ ಭಾರತದ ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ದೇಶದ 100 ಕೋಟಿ ಹಿಂದೂಗಳನ್ನು ಸಂವಿಧಾನ ಕೊಲ್ಲುತ್ತಿದೆ. ಈ ಸಂವಿಧಾನವನ್ನು ನಂಬಿದವರನ್ನು ಕೊಲ್ಲಲಾಗುತ್ತದೆ. ಈ ವ್ಯವಸ್ಥೆಯನ್ನು ನಂಬುವವರು, ಈ ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದಲ್ಲಿರುವವರು ಎಲ್ಲರೂ ನಾಯಿಯಂತೆ ಸಾಯುತ್ತಾರೆ” ಎಂದು ಮತ್ತೊಮ್ಮೆ ಪ್ರಚೋದನೆ ನೀಡಿದ್ದರು. ಸಂವಿಧಾನ ಮತ್ತು ಸುಪ್ರೀಂ ಕೋರ್ಟ್‌ ವಿರುದ್ಧ ನಾಲಗೆ ಹರಿಬಿಟ್ಟಿದ್ದರು.

ಇದನ್ನೂ ಓದಿರಿ: ಪಂಜಾಬ್‌: ಉದ್ಯಾನದಲ್ಲಿದ್ದ ಗಾಂಧಿ ಪ್ರತಿಮೆ ಧ್ವಂಸ

ಯತಿ ನರಸಿಂಗಾನಂದರ ದ್ವೇಷ ಭಾಷಣಗಳನ್ನು ಹೊರಗೆ ತಂದು ಸರ್ಕಾರದ ಮೇಲೆ ಒತ್ತಡ ಸೃಷ್ಟಿ ಮಾಡುವಲ್ಲಿ ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌‌ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಹೀಗಾಗಿ ಯತಿ ನರಸಿಂಗಾನಂದ ಅವರು ಜುಬೇರ್‌ ವಿರುದ್ಧ ಮೊದಲಿನಿಂದಲೂ ದ್ವೇಷ ಕಾರುತ್ತಲೇ ಬಂದಿದ್ದಾರೆ.

ಜುಬೇರ್‌ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಲೇ ಇದ್ದಾರೆ. ದ್ವೇಷ ಭಾಷಣಗಳನ್ನು ಹೊರಗೆ ಎಳೆಯುತ್ತಿದ್ದ ಜುಬೇರ್‌ ಅವರನ್ನೇ ಈಗ ವ್ಯವಸ್ಥೆ ಇಕ್ಕಟ್ಟಿಗೆ ಸಿಲುಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...