Homeಮುಖಪುಟಕ್ಲಬ್‌ಹೌಸ್‌ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ದ್ವೇಷ ಭಾಷಣ: ಮುಂಬೈನಲ್ಲಿ ಮೂರು ಜನರ ಬಂಧನ

ಕ್ಲಬ್‌ಹೌಸ್‌ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ದ್ವೇಷ ಭಾಷಣ: ಮುಂಬೈನಲ್ಲಿ ಮೂರು ಜನರ ಬಂಧನ

ಬಂಧಿತ ಆರೋಪಿಗಳನ್ನು ಆಕಾಶ್, ಜೇಶ್ಣವ್ ಮತ್ತು ಯಶ್ ಪರಶಾರ್ ಎಂದು ಗುರುತಿಸಲಾಗಿದೆ

- Advertisement -
- Advertisement -

ಕ್ಲಬ್ ಹೌಸ್ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯ ಕುರಿತು ಅಶ್ಲೀಲ, ದ್ವೇಷದ ಮಾತುಗಳನ್ನಾಡಿದ ಆರೋಪದ ಮೇಲೆ ಹರಿಯಾಣ ಮೂಲದ ಮೂವರನ್ನು ಮುಂಬೈ ಪೋಲಿಸರು ಬಂಧಿಸಿದ್ದಾರೆ.

ಮುಂಬೈ ಅಪರಾಧ ವಿಭಾಗದ ಸೈಬರ್ ಪೋಲಿಸ್ ಠಾಣೆಯ ಸಿಬ್ಬಂದಿಯು ಕ್ಲಬ್‌ ಹೌಸ್‌ ಚರ್ಚೆಯಲ್ಲಿ ಭಾಗವಹಿಸಿದ್ದವರನ್ನು ಪತ್ತೆ ಹಚ್ಚಿ ಗುರುವಾರ ತಡರಾತ್ರಿ ಬಂಧಿಸಿದ್ದಲ್ಲೆ ಆರೋಪಿಗಳನ್ನು ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಒಪ್ಪಿಸುವುದ್ದಾಗಿ ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಆಕಾಶ್, ಜೇಶ್ಣವ್ ಮತ್ತು ಯಶ್ ಪರಶಾರ್ ಎಂದು ಗುರುತಿಸಲಾಗಿದೆ ಎಂದು ಮುಂಬೈ ಪೊಲೀಸರ ಹೇಳಿಕೆ ಉಲ್ಲೇಖಿಸಿ ಎಎನ್‌ಐ ಟ್ವೀಟ್ ಮಾಡಿದೆ.

ಕ್ಲಬ್ ಹೌಸ್ ಚರ್ಚೆ ಬೇಧಿಸಿ ದ್ವೇ‍ಷ ಹರಡುತ್ತಿದ್ದವರನ್ನು ಬಂಧಿಸಿದ್ದಕ್ಕಾಗಿ ಮುಂಬೈ ಪೊಲೀಸರನ್ನು ಹಲವರು ಶ್ಲಾಘಿಸಿದ್ದಾರೆ. ಈ ಕುರಿತು ಇಂದು ಮುಂಜಾನೆ ಶಿವಸೇನೆಯ ರಾಜಸಭಾ ಸದ್ಯಸರಾದ ಪ್ರಿಯಾಂಕ ಚತುರ್ವೆದಿ ಅವರು “ಹಿಂಸೆಯನ್ನು ವಿರೋಧಿಸೋಣ, ಕ್ಲಬ್ ಹೌಸ್ ಚರ್ಚೆಗಳನ್ನು ಪತ್ತೆಹಚ್ಚಿ ಆರೋಪಿ೯ಗಳನ್ನು ಬಂಧಿಸಿದ ಮುಂಬೈ ಪೊಲೀಸರಿಗೆ ಧನ್ಯವಾದ” ಎಂದು ಟ್ವೀಟ್ ಮಾಡಿದ್ದಾರೆ.

ಬುಧುವಾರ ದೆಹಲಿ ಪೋಲಿಸರು ಕ್ಲಬ್ ಹೌಸ್ ಮತ್ತು ಗೂಗಲ್‌ಗೆ ಪತ್ರ ಬರೆದು ಮುಸ್ಲಿಂ ಮಹಿಳೆಯರ ಕುರಿತು ಅಶ್ಲೀಲ ಮತ್ತು ದ್ವೇ‍ಷದ ಚರ್ಚೆ ನಡೆಸಿದ್ದ ಆಯೋಜಕರ ಮತ್ತು ಭಾಗವಹಿಸಿದ್ದವರ ವಿವರಗಳನ್ನು ಕೇಳಿದ್ದರು. ಹಾಗೆ ಆಡಿಯೋ ಚಾಟ್‌ನಲ್ಲಿ ಭಾಗವಹಿಸಿದ್ದ ಹಲವು ಸದ್ಯಸರನ್ನು ಪೋಲಿಸರು ಗುರುತಿಸಿದ್ದಾರೆ, ಇದರಲ್ಲಿ ಕೆಲ ಪುರುಷ ಮತ್ತು ಮಹಿಳೆಯರು ಪಾಲ್ಗೊಂಡಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮುಂಬೈ ಮೂಲದ ಸಂಸ್ಥೆಯೊಂದು ಈ ದ್ವೇ‍ಷ ಭಾಷಣಕ್ಕೆ ಸಂಬಂಧಿಸಿದಂತೆ ಕ್ಲಬ್ ಹೌಸ್‌ ಅನ್ನು ನಿಷ್ಕ್ರಿಯಗೊಳಿಸಬೇಕು ಮತ್ತು ಆರೋಪಿಗಳನ್ನು ಬಂಧಿಸಬೇಕೆಂದು ಬುಧುವಾರ ಮುಂಬೈ ನಗರ ಪೋಲಿಸರಿಗೆ ದೂರು ನೀಡಿದ್ದರು.


ಇದನ್ನೂ ಓದಿ: ಹೊಸ ಸಂಸತ್ತು ‘ಸೆಂಟ್ರಲ್‌ ವಿಸ್ಟಾ’ ನಿರ್ಮಾಣ ವೆಚ್ಚ ಯೋಜನೆಗಿಂತ 282 ಕೋಟಿ ರೂ. ಹೆಚ್ಚಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...