Homeಮುಖಪುಟಮುಸ್ಲಿಮರ ವಿರುದ್ಧ ದ್ವೇ‍ಷ ಭಾಷಣ: ಕಾನೂನು ಬಾಹಿರ ಎಂದ ಉತ್ತರಖಂಡ ಪೊಲೀಸರು

ಮುಸ್ಲಿಮರ ವಿರುದ್ಧ ದ್ವೇ‍ಷ ಭಾಷಣ: ಕಾನೂನು ಬಾಹಿರ ಎಂದ ಉತ್ತರಖಂಡ ಪೊಲೀಸರು

ಹರಿದ್ವಾರ ಧರ್ಮ ಸಂಸದ್ ದ್ವೇ‍ಷ ಭಾಷಣದ ಕುರಿತು ಎಫ್‌ಐಆರ್ ದಾಖಲಿಸಿರುವ ಪೊಲೀಸರು ಅದರಲ್ಲಿ ನರಸಿಂಗಾನಂದರ ಹೆಸರು ಸೇರಿಸದಿರುವುದು ಆಶ್ಚರ್ಯಕರವಾಗಿದೆ.

- Advertisement -
- Advertisement -

ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮ ಸಂಸದ್‌ನಲ್ಲಿ ಕೇಳಿಬಂದ ಮುಸ್ಲಿಮರ ವಿರುದ್ಧ ದ್ವೇ‍ಷಭಾಷಣಗಳಿಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು. ಆ ಮಾತುಗಳನ್ನು ಕಾನೂನು ಬಾಹಿರ ಎಂದಿರುವ ಉತ್ತರಖಂಡ ಪೊಲೀಸರು ಧಾರ್ಮಿಕ ದ್ವೇಷ ಬಿತ್ತುವ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಧರ್ಮ ಸಂಸದ್ ಪ್ರಮುಖ ಸಂಘಟಕರಲ್ಲಿ ಒಬ್ಬರಾದ ವಿವಾದಿತ ಉಗ್ರ ಹಿಂದುತ್ವ ನಾಯಕ ನರಸಿಂಗಾನಂದ ಗಿರಿ ಅವರು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದರು. ಭಯೋತ್ಪಾದಕ ಸಂಘಟನೆಯಾದ ಎಲ್‌ಟಿಟಿಇ ನಾಯಕ ಪ್ರಭಾಕರನ್‌ ತರ ಆಗುವಂತೆ ಹಿಂದೂ ಯುವಕರಿಗೆ ಕರೆ ನೀಡಿದ್ದು, ಅವರಿಗೆ 1 ಕೋಟಿ ರೂ.ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಹಿಂದೂಗಳು ಶಸ್ತ್ರಗಳನ್ನು ಕೈಗಿತ್ತೆಗೊಂಡು ಮುಸ್ಲಿಮರ ವಿರುದ್ಧ ಯುದ್ದ ಮಾಡಬೇಕು ಎಂದು ಅವರು ಕರೆ ನೀಡಿದ್ದರು.

ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ಇದು ನರಸಿಂಗಾನಂದ ಅವರ ಎರಡನೇ ಧರ್ಮ ಸಂಸದ್ ಆಗಿದ್ದು, ಮೊದಲನೇ ಧರ್ಮ ಸಂಸದ್‌‌ 2020 ರ ಜನವರಿ ತಿಂಗಳಲ್ಲಿ ನಡೆದಿತ್ತು. ಈ ವೇಳೆ ದೆಹಲಿ ವಿಧಾನಸಭಾ ಚುನಾವಣೆಗಳು ಇದ್ದವು. ಅಲ್ಲಿಯೂ ದ್ವೇಷಭಾಷಣ ಮಾಡಲಾಗಿತ್ತು ಮತ್ತು ಇದು ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಕೋಮು ಗಲಭೆಗಳಿಗೆ ಕಾರಣವಾಗಿತ್ತು ಎಂದು ದಿ ವೈರ್ ತನಿಖಾ ವರದಿಯೊಂದನ್ನು ಪ್ರಕಟಿಸಿದೆ. ಇದೀಗ ಹರಿದ್ವಾರದಲ್ಲಿ ಎರಡನೇ ಧರಂ ಸಂಸದ್‌ ನಡೆದಿದ್ದು, ಇನ್ನು ಕೆಲವೇ ತಿಂಗಳಲ್ಲಿ ಉತ್ತರಾಖಂಡದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅವರ ದ್ವೇಷ ಮಾತುಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಗುರುವಾರ ರಾತ್ರಿ, ಉತ್ತರಾಖಂಡ ಪೊಲೀಸರು ವಸೀಮ್ ರಿಜ್ವಿ ಮತ್ತು ಇತರರ ವಿರುದ್ಧ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಕೃತ್ಯಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹೇಳಿದರು. ಶಿಯಾ ವಕ್ಫ್ ಬೋರ್ಡ್‌ನ ಮಾಜಿ ಅಧ್ಯಕ್ಷ ರಿಜ್ವಿ ಇತ್ತೀಚೆಗೆ ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಮತ್ತು ತಮ್ಮ ಹೆಸರನ್ನು ಜಿತೇಂದ್ರ ನಾರಾಯಣ ತ್ಯಾಗಿ ಎಂದು ಬದಲಾಯಿಸಿಕೊಂಡರು. ತನಿಖೆ ಆರಂಭವಾದ ನಂತರ ಇನ್ನಷ್ಟು ಹೆಸರುಗಳನ್ನು ಸೇರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಪೊಲೀಸರು ನರಸಿಂಗಾನಂದರ ಹೆಸರು ಸೇರಿಸದಿರುವುದು ಆಶ್ಚರ್ಯಕರವಾಗಿದೆ.

“ಹರಿದ್ವಾರ್ ಧರ್ಮ ಸಂಸದ್‌ನಲ್ಲಿ ಏನು ನಡೆದಿದೆಯೋ ಅದು ತಪ್ಪು. ಸಂಬಂಧಪಟ್ಟವರು ಮತ್ತು ಹೊಣೆಗಾರರ ವಿರುದ್ಧ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ” ಎಂದು ಉತ್ತರಾಖಂಡ ಸರ್ಕಾರದ ವಕ್ತಾರ ಸುಬೋಧ್ ಉನಿಯಾಲ್ ಹೇಳಿದ್ದಾರೆ.

ಯತಿ ನರಸಿಂಗಾನಂದ್ ಈ ಹಿಂದೆಯೂ ಹಲವಾರು ಬಾರಿ ಪ್ರಚೋದನಾಕಾರಿ, ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.


ಇದನ್ನೂ ಓದಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...