Homeರಾಜಕೀಯಯುಪಿ ಸಿಎಂ ಆದಿತ್ಯನಾಥ್ ವಿರುದ್ಧ ದ್ವೇಷ ಭಾಷಣ; ಎಸ್ಪಿ ನಾಯಕ ಅಜಂ ಖಾನ್ ದೋಷಿ ಎಂದ...

ಯುಪಿ ಸಿಎಂ ಆದಿತ್ಯನಾಥ್ ವಿರುದ್ಧ ದ್ವೇಷ ಭಾಷಣ; ಎಸ್ಪಿ ನಾಯಕ ಅಜಂ ಖಾನ್ ದೋಷಿ ಎಂದ ಕೋರ್ಟ್‌

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧದ ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಅಜಂ ಖಾನ್ ಅವರನ್ನು ರಾಜ್ಯದ ರಾಂಪುರದ ನ್ಯಾಯಾಲಯ ದೋಷಿ ಎಂದು  ಗುರುವಾರ ಘೋಷಿಸಿದೆ.

2019 ರಲ್ಲಿ ಅವರ ವಿರುದ್ಧ ದ್ವೇಷ ಭಾಷಣ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾಣೆ ನಡೆಸಿದ ನ್ಯಾಯಾಲಯ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು, ಅಜಂ ಖಾನ್‌ ಮತ್ತು ಇತರ ಇಬ್ಬರು ಆರೋಪಿಗಳಿಗೆ 2 ಸಾವಿರ ದಂಡದೊಂದಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶ ಸಿಎಂ ಮತ್ತು ಆಗಿನ ರಾಂಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ 2019 ರ ಏಪ್ರಿಲ್‌ನಲ್ಲಿ ರಾಮ್‌ಪುರದಲ್ಲಿ ಅಝಂ ಖಾನ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ತೆಲಂಗಾಣ: ಬಿಜೆಪಿಯಿಂದ ಆಪರೇಷನ್‌ ಕಮಲಕ್ಕೆ ಯತ್ನ; ಕೇಂದ್ರ ಸಚಿವರ ಆಪ್ತ ಸೇರಿದಂತೆ ಮೂವರ ಬಂಧನ

ಭೂಕಬಳಿಕೆ ಪ್ರಕರಣದಲ್ಲಿ ಆಜಂ ಖಾನ್ ಹಲವು ತಿಂಗಳುಗಳ ಕಾಲ ಜೈಲಿನಲ್ಲಿದ್ದರು. ನಂತರ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿ, ಜಾಮೀನಿಗಾಗಿ ಆರೋಪಿಗಳಿಗೆ “ತೀವ್ರ ಷರತ್ತುಗಳನ್ನು” ವಿಧಿಸಿದ್ದಕ್ಕಾಗಿ ಉಚ್ಚ ನ್ಯಾಯಾಲಯಗಳನ್ನು ಟೀಕಿಸಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...