Homeಮುಖಪುಟದ್ವೇಷ ಭಾಷಣ ಆರೋಪ: ನ್ಯಾಯಾಧೀಶ ಯಾದವ್ ವಿರುದ್ಧ ಕ್ರಮಕ್ಕೆ ವಿಳಂಬ ಖಂಡಿಸಿದ ವಕೀಲರ ಗುಂಪು

ದ್ವೇಷ ಭಾಷಣ ಆರೋಪ: ನ್ಯಾಯಾಧೀಶ ಯಾದವ್ ವಿರುದ್ಧ ಕ್ರಮಕ್ಕೆ ವಿಳಂಬ ಖಂಡಿಸಿದ ವಕೀಲರ ಗುಂಪು

- Advertisement -
- Advertisement -

ನವದೆಹಲಿ: 2024ರ ಡಿಸೆಂಬರ್ ನಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರ ವಿರುದ್ಧ ಆಂತರಿಕ ತನಿಖೆಯನ್ನು ಪ್ರಾರಂಭಿಸದ ಸುಪ್ರೀಂ ಕೋರ್ಟ್ ನಿರ್ಧಾರದ ಬಗ್ಗೆ ಅಖಿಲ ಭಾರತ ನ್ಯಾಯವಾದಿಗಳ ಸಂಘ (ಎಐಎಲ್‌ಎಜೆ) ಕಳವಳ ವ್ಯಕ್ತಪಡಿಸಿದೆ.

ರಾಜ್ಯಸಭಾ ಸಚಿವಾಲಯವು ಈ ವಿಷಯದಲ್ಲಿ ವಿಶೇಷ ನ್ಯಾಯವ್ಯಾಪ್ತಿಯನ್ನು ಪ್ರತಿಪಾದಿಸಿ ನ್ಯಾಯಮೂರ್ತಿ ಯಾದವ್ ವಿರುದ್ಧದ ತನಿಖೆಯನ್ನು ಸುಪ್ರೀಂ ಕೋರ್ಟ್ ಸ್ಥಗಿತಗೊಳಿಸಿದೆ ಎಂದು ವರದಿಗಳು ಸೂಚಿಸಿದ ನಂತರ   ಅಖಿಲ ಭಾರತ ನ್ಯಾಯವಾದಿಗಳ ಸಂಘ (ಎಐಎಲ್‌ಎಜೆ) ಶುಕ್ರವಾರದಂದು ಖಂಡಿಸಿವೆ.

ದ್ವೇಷ ಭಾಷಣವು ಭ್ರಾತೃತ್ವದ ವಿರುದ್ಧವಾಗಿದೆ ಮತ್ತು ನ್ಯಾಯಾಂಗವು ತನ್ನ ಶ್ರೇಣಿಯೊಳಗೆ ಅದನ್ನು ಸಹಿಸಬಾರದು ಎಂದು ಎಐಎಲ್‌ಎಜೆ ಹೇಳಿಕೆಯಲ್ಲಿ ಹೇಳಲಾಗಿದೆ.

ನ್ಯಾಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಏಕರೂಪ ನಾಗರಿಕ ಸಂಹಿತೆಯ ಸಾಂವಿಧಾನಿಕ ಅಗತ್ಯ”ದ ಕುರಿತು ಮಾತನಾಡಿದ ನ್ಯಾಯಮೂರ್ತಿ ಯಾದವ್, ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ ಆರೋಪ ಹೊರಿಸಲಾಗಿತ್ತು. ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರಿಗೆ ಕ್ಷಮೆಯಾಚಿಸಲು ಸೂಚಿಸಿದೆ ಎಂದು ವರದಿಯಾಗಿದೆ. ಆದರೆ ಅವರು ಕ್ಷಮೆಯಾಚನೆಗೆ ನಿರಾಕರಿಸಿದ್ದಾರೆ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರರಿಂದ ರಾಜಕೀಯ ಬೆಂಬಲ ಇದೆ ಹೇಳಿಕೆಯಲ್ಲಿ ಆರೋಪಿಸಲಾಗಿದೆ.

2024ರ  ಡಿಸೆಂಬರ್ 13ರಂದು ಸಲ್ಲಿಸಲಾದ ದೋಷಾರೋಪಣೆ ಪ್ರಸ್ತಾವನೆಯನ್ನು ಅಂಗೀಕರಿಸದಿದ್ದಕ್ಕಾಗಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಎಐಎಲ್‌ಎಜೆ ಟೀಕಿಸಿದೆ ಮತ್ತು ಸಂಸತ್ತು ನ್ಯಾಯಾಧೀಶರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದೆ. ಆಂತರಿಕ ನ್ಯಾಯಾಂಗ ತನಿಖಾ ಪ್ರಕ್ರಿಯೆಯು ದೋಷಾರೋಪಣೆಗಿಂತ ಭಿನ್ನವಾಗಿದೆ ಮತ್ತು ಸ್ವತಂತ್ರವಾಗಿ ಮುಂದುವರಿಯಬೇಕಿತ್ತು ಎಂದು ಎಐಎಲ್‌ಎಜೆ ವಾದಿಸಿದೆ.

ಇದು ಕೇವಲ ವಿಳಂಬದ ಪ್ರಶ್ನೆಯಲ್ಲ, ಆದರೆ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರನ್ನು ರಕ್ಷಿಸುವ ಕ್ರಿಯೆಯಾಗಿದೆ ಎಂದು ಸಂಘವು ಹೇಳಿಕೆಯಲ್ಲಿ ತಿಳಿಸಿದೆ. ಈ ವಿಳಂಬವು ವಿಭಜಕ ಮನಸ್ಥಿತಿ ಹೊಂದಿರುವ ಇತರ ನ್ಯಾಯಾಧೀಶರನ್ನು ಇದೇ ರೀತಿ ವರ್ತಿಸಲು ಪ್ರೇರೇಪಿಸಬಹುದು ಎಂದು ಸಂಘವು ಹೇಳಿಕೆಯಲ್ಲಿ ತಿಳಿಸಿದೆ.

ಈ ಬಿಕ್ಕಟ್ಟನ್ನು “ಪ್ರಜ್ಞಾಪೂರ್ವಕವಾದುದ್ದು” ಎಂದು ಕರೆದ ಎಐಎಲ್‌ಎಜೆ, ತನಿಖೆ ಮುಗಿಯುವವರೆಗೆ ನ್ಯಾಯಮೂರ್ತಿ ಯಾದವ್ ಅವರ ನ್ಯಾಯಾಂಗ ಮತ್ತು ಆಡಳಿತಾತ್ಮಕ ಜವಾಬ್ದಾರಿಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ನ್ಯಾಯಾಧೀಶರಿಂದ ಬೇಷರತ್ತಾದ ಸಾರ್ವಜನಿಕ ಕ್ಷಮೆಯಾಚನೆಗಾಗಿ ಸಂಘವು ತನ್ನ ಕರೆಯನ್ನು ಹೇಳಿಕೆಯಲ್ಲಿ ಪುನರುಚ್ಚರಿಸಿದೆ.

ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ಅದರ ನಿಷ್ಪಕ್ಷಪಾತತೆಯ ಬಗ್ಗೆ ಸಾರ್ವಜನಿಕ ನಂಬಿಕೆ ಅಪಾಯದಲ್ಲಿದೆ ಎಂದು ಸಂಘವು ಎಚ್ಚರಿಸಿದೆ.

ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ: ಏಳು ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...