Homeಮುಖಪುಟದ್ವೇಷ ಭಾಷಣ | ಅಸ್ಸಾಂ ಸಿಎಂ ಹಿಮಂತ ವಿರುದ್ಧ ಇಂಡಿಯಾ ಒಕ್ಕೂಟ ದೂರು

ದ್ವೇಷ ಭಾಷಣ | ಅಸ್ಸಾಂ ಸಿಎಂ ಹಿಮಂತ ವಿರುದ್ಧ ಇಂಡಿಯಾ ಒಕ್ಕೂಟ ದೂರು

- Advertisement -
- Advertisement -

ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ “ಕೋಮು ಉದ್ವಿಗ್ನ ಮತ್ತು ವಿಭಜಕ” ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅರೋಪಿಸಿ ಅಸ್ಸಾಂ ಮುಖ್ಯಮಂತ್ರಿ, ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಇಂಡಿಯಾ ಒಕ್ಕೂಟ ಶನಿವಾರ ಚುನಾವಣಾ ಆಯೋಗಕ್ಕೆ ಔಪಚಾರಿಕ ದೂರು ದಾಖಲಿಸಿದೆ ಎಂದು ಎಎನ್‌ಐ ವರದಿ ಮಾಡಿದೆ. ದ್ವೇಷ ಭಾಷಣ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್), ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪ್ರತಿನಿಧಿಗಳು ಭಾರತೀಯ ಚುನಾವಣಾ ಆಯೋಗ ಮತ್ತು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ. ದ್ವೇಷ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವೆಂಬರ್ 13 ಮತ್ತು 20 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಉದ್ದೇಶದಿಂದ ಹಿಮಂತ ಶರ್ಮಾ ಅವರು ಭಾಷಣ ಮಾಡಿದ್ದಾರೆ ಎಂದು ಇಂಡಿಯಾ ಒಕ್ಕೂಟದ ನಾಯಕರು ಆರೋಪಿಸಿದ್ದಾರೆ.

ನವೆಂಬರ್ 1 ರಂದು ಶರತ್‌ನಲ್ಲಿ ಮಾಡಿದ ಭಾಷಣದಲ್ಲಿ ಅವರು, “ಮುಸ್ಲಿಮರು ಪ್ರಧಾನವಾಗಿ ಒಂದೇ ಪಕ್ಷಕ್ಕೆ ಮತ ಹಾಕುತ್ತಾರೆ, ಆದರೆ ಹಿಂದೂ ಮತಗಳು ವಿಭಜನೆಯಾಗುತ್ತವೆ” ಎಂದು ಶರ್ಮಾ ಹೇಳಿಕೊಂಡಿದ್ದಾರೆ. ಹೇಮಂತ್ ಸೊರೆನ್ ನೇತೃತ್ವದ ರಾಜ್ಯ ಸರ್ಕಾರವು ‘ವಿಶೇಷ ಸಮುದಾಯ’ದ ಮತಕ್ಕಾಗಿ ‘ಒಳನುಸುಳುಕೋರರನ್ನು ಆಹ್ವಾನಿಸುತ್ತದೆ’ ಎಂದು ಅವರು ಆರೋಪಿಸಿದ್ದರು.

ಹಿಮಂತ ಅವರು ನೀಡಿದ ಈ ಭಾಷಣವು ಅವರು ಮತ್ತು ಅವರ ಪಕ್ಷವಾದ ಬಿಜೆಪಿಯಿಂದ ಪ್ರಚಾರ ಮಾಡುತ್ತಿರುವ ವಿಭಜಕ ರಾಜಕೀಯಕ್ಕೆ ಉದಾಹರಣೆಯಾಗಿದೆ ಎಂದು ಇಂಡಿಯಾ ಒಕ್ಕೂಟ ನಾಯಕರು ಹೇಳಿದ್ದಾರೆ.

“ಒಳನುಸುಳುವವರು” ಎಂಬಂತಹ ಪದಗಳನ್ನು ಬಳಸುವ ಮೂಲಕ ಅವರು “ದ್ವೇಷ ಮತ್ತು ಅಸಮಾಧಾನದ ಜ್ವಾಲೆಯನ್ನು ಹುಟ್ಟುಹಾಕುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ. ಹಿಮಂತ ಶರ್ಮಾ ಅವರು ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರನ್ನು ಗುರಿಯಾಗಿಸಿಕೊಂಡ ಸಂದರ್ಶನವನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

24 ಗಂಟೆಯೊಳಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಇಂಡಿಯಾ ಒಕ್ಕೂಟ ಎಚ್ಚರಿಸಿದೆ.

“ಅವರು ಉದ್ದೇಶಪೂರ್ವಕವಾಗಿ ಇಡೀ ಧಾರ್ಮಿಕ ಅಲ್ಪಸಂಖ್ಯಾತರನ್ನು ಒಂದೇ ದೃಷ್ಟಿಕೋನದಲ್ಲಿ ಚಿತ್ರಿಸುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಸಾಮಾಜಿಕ ವಿಭಜನೆಗಳನ್ನು ಬಳಸಿಕೊಳ್ಳುವ ಉದ್ದೇಶದಿಂದ ‘ಅಲ್ಪಸಂಖ್ಯಾತರನ್ನು’ ಒಳನುಸುಳುವವರು ಎಂದು ಬ್ರಾಂಡ್ ಮಾಡುತ್ತಿದ್ದಾರೆ. ಇಂತಹ ಭಾಷಣವು ಕೋಮು ಉದ್ವಿಗ್ನತೆಯನ್ನು ಉಲ್ಬಣಗೊಳಿಸುತ್ತದೆ ಮತ್ತು ಚುನಾವಣಾ ಲಾಭಕ್ಕಾಗಿ ಜಾರ್ಖಂಡ್‌ನ ಸಾಮಾಜಿಕ ರಚನೆಯನ್ನು ಮುರಿಯುವ ಅಪಾಯವನ್ನು ಸೃಷ್ಟಿ ಮಾಡುತ್ತಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಜಾರ್ಖಂಡ್‌ನ ಹೇಮಂತ್ ಸೊರೆನ್ ಸರ್ಕಾರವು ಬಾಂಗ್ಲಾದೇಶಿ ನುಸುಳುಕೋರರನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿರುವ ಹಿಮಂತಾ ಶರ್ಮಾ ಅವರ ಧ್ವನಿಮುದ್ರಣಗಳನ್ನು ಇಂಡಿಯಾ ಒಕ್ಕೂಟ ದೂರಿನೊಂದಿಗೆ ಸಲ್ಲಿಸಿದೆ.

“ಈ ಅಪಾಯಕಾರಿ ತಂತ್ರವು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ದುರ್ಬಲಗೊಳಿಸುವುದು ಮಾತ್ರವಲ್ಲದೆ ನಮ್ಮ ಸಂವಿಧಾನದ ಮೂಲಭೂತ ರಚನೆಯನ್ನು ಉಲ್ಲಂಘಿಸುತ್ತದೆ. ದ್ವೇಷ ಭಾಷಣದ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ವಿವಿಧ ನ್ಯಾಯಾಂಗ ಹೇಳಿಕೆಗಳನ್ನು ಮತ್ತು ತೀರ್ಪುಗಳ ವಿರುದ್ಧ ಅವರ ಈ ಹೇಳಿಕೆ ಇವೆ” ಎಂದು ಇಂಡಿಯಾ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....