ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು. ಬಿಜೆಪಿ ಪಾದಯಾತ್ರೆ ಏಕೆ ಕೈಗೊಳ್ಳಬೇಕು ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಹಿಂದೆ ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ … Continue reading ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ