Homeಚಳವಳಿದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ...

ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ದ್ವೇಷದ ಭಾಷಣ ಮತ್ತು ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಗುಂಪು ಬಹಿರಂಗ ಪತ್ರ ಬರೆದಿದೆ.

ದ್ವೇಷದ ಭಾಷಣ ಮತ್ತು ಜಾತಿ ಆಧಾರಿತ ಹಿಂಸಾಚಾರ ವಿಷಯಗಳ ಬಗ್ಗೆ ಪ್ರಧಾನಿ ಮೌನವಾಗಿರುವುದು ದ್ವೇಷ ತುಂಬಿದ ಧ್ವನಿಗಳಿಗೆ ಧೈರ್ಯ ತುಂಬುತ್ತಿದೆ ಎಂದು ವಿದ್ಯಾರ್ಥಿಗಳು, ಅಧ್ಯಾಪಕರು ಪತ್ರದಲ್ಲಿ ಹೇಳಿದ್ದಾರೆ.

ಈ ಬಹಿರಂಗ ಪತ್ರಕ್ಕೆ ಐಐಎಂ-ಅಹಮದಾಬಾದ್ ಮತ್ತು ಐಐಎಂ-ಬೆಂಗಳೂರಿನ 13 ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಸೇರಿದಂತೆ 183 ಮಂದಿ ಸಹಿ ಮಾಡಿದ್ದಾರೆ.

ಇತ್ತೀಚಿಗೆ ಉತ್ತರಾಖಂಡದ ಹರಿದ್ವಾರದ ಧರ್ಮ ಸಂಸದ್ ಕಾರ್ಯಕ್ರಮದ ವೇಳೆ ನಡೆದ ದ್ವೇಷ ಭಾಷಣಗಳ ಹಿನ್ನೆಲೆಯಲ್ಲಿ ಪತ್ರ ಬರೆಯಲಾಗಿದೆ. ಹರಿದ್ವಾರದಲ್ಲಿ ನಡೆದ ಕಾರ್ಯಕ್ರಮದ ವೇಳೆ ಕೆಲವು ಹಿಂದೂ ಧಾರ್ಮಿಕ ಮುಖಂಡರು ಮುಸ್ಲಿಮರ ವಿರುದ್ಧ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳುವಂತೆ ಜನರನ್ನು ಒತ್ತಾಯಿಸಿದ್ದರು. ಜೊತೆಗೆ ಮುಸ್ಲೀಮರ ನರಮೇಧಕ್ಕೆ ಕರೆ ನೀಡಿದ್ದರು.

ಇದನ್ನೂ ಓದಿ: ಹರಿದ್ವಾರ ’ಧರ್ಮ ಸಂಸದ್’ ದ್ವೇಷ ಭಾಷಣ: ತನಿಖೆ ನಡೆಸಲು ಎಸ್‌ಐಟಿ ರಚನೆ

“ಧರ್ಮ, ಜಾತಿ ಗುರುತುಗಳ ಆಧಾರದ ಮೇಲೆ ಸಮುದಾಯಗಳ ವಿರುದ್ಧ ದ್ವೇಷದ ಭಾಷಣಗಳು ಮತ್ತು ಹಿಂಸಾಚಾರಕ್ಕೆ ಕರೆ ನೀಡುವುದು ಸ್ವೀಕಾರಾರ್ಹವಲ್ಲ. ಭಾರತೀಯ ಸಂವಿಧಾನವು ಗೌರವಯುತವಾಗಿ ಧರ್ಮವನ್ನು ಆಚರಿಸುವ ಹಕ್ಕನ್ನು ನೀಡಿದ್ದರೂ ಸಹ ದೇಶದಲ್ಲಿ ಭಯದ ವಾತಾವರಣ ಇದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

“ನಮ್ಮ ದೇಶದಲ್ಲಿ ಈಗ ಭಯದ ವಾತಾವರಣವಿದೆ. ಇತ್ತೀಚಿನ ದಿನಗಳಲ್ಲಿ ಚರ್ಚ್‌ಗಳು ಸೇರಿದಂತೆ ಪೂಜಾ ಸ್ಥಳಗಳನ್ನು ಧ್ವಂಸ ಮಾಡಲಾಗುತ್ತಿದೆ. ಮುಸ್ಲಿಂ ಸಹೋದರ ಸಹೋದರಿಯರ ವಿರುದ್ಧ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳುವಂತೆ ಕರೆ ನೀಡಲಾಗುತ್ತಿದೆ. ಇದೆಲ್ಲವನ್ನೂ ಯಾವುದೇ ಭಯವಿಲ್ಲದೆ, ನಿರ್ಭಯದಿಂದ ಮಾಡಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಐವರು ಪ್ರಾಧ್ಯಾಪಕರು ಈ ಪತ್ರವನ್ನು ರಚಿಸಿದ್ದಾರೆ. ಐಐಎಂನ ಅಧ್ಯಾಪಕ ಪ್ರತೀಕ್ ರಾಜ್ (ಸಹಾಯಕ ಪ್ರಾಧ್ಯಾಪಕ ಸ್ಟ್ರಾಟಜಿ), ದೀಪಕ್ ಮಾಲ್ಘಾನ್ (ಸಹ ಪ್ರಾಧ್ಯಾಪಕರು, ಸಾರ್ವಜನಿಕ ನೀತಿ), ದಾಲ್ಹಿಯಾ ಮಣಿ (ಸಹ ಪ್ರಾಧ್ಯಾಪಕರು, ‌ಉದ್ಯಮಶೀಲತೆ), ರಾಜಲಕ್ಷ್ಮಿ ವಿ ಮೂರ್ತಿ (ಸಹ ಪ್ರಾಧ್ಯಾಪಕರು, ಡಿಸಿಷನ್ ಸೈನ್ಸ್), ಹೇಮಾ ಸ್ವಾಮಿನಾಥನ್ (ಸಹ ಪ್ರಾಧ್ಯಾಪಕರು, ಸಾರ್ವಜನಿಕ ನೀತಿ) ಇವರ ಜೊತೆಗೆ ಪ್ರಮುಖ ಪರಿಸರ ಅರ್ಥಶಾಸ್ತ್ರಜ್ಞರಾದ ಮಾಲ್ಘಾನ್ ಕೂಡ ಸೇರಿದ್ದಾರೆ.

ಹರಿದ್ವಾರದಲ್ಲಿ ನಡೆದ ‘ಧರ್ಮ ಸಂಸದ್’ ವೇಳೆ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಪ್ರಕರಣದ ತನಿಖೆಗೆ ಐವರು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ.


ಇದನ್ನೂ ಓದಿ: ಹರಿದ್ವಾರದ ದ್ವೇಷ ಭಾಷಣಗಳ ವಿರುದ್ಧ ಸ್ವಯಂಪ್ರೇರಿತ ಕ್ರಮಕ್ಕಾಗಿ ಸುಪ್ರೀಂಕೋರ್ಟ್‌ಗೆ ಪತ್ರ ಬರೆದ 76 ಖ್ಯಾತ ವಕೀಲರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Sariyada krama kai golla beku inta Desha Drohi savvi Danakke bele illa evaga jatty Darma anta muslim krichan anta martiddare Narendra modi Desha vannu marta eddane sarkara yechet koldeku intavaru Desha Drohi

LEAVE A REPLY

Please enter your comment!
Please enter your name here

- Advertisment -

Must Read

ಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ | Naanu Gauri

ಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

0
ಗುಜರಾತ್‌ನಾದ್ಯಂತ ನಡೆದ ಹೈನುಗಾರಿಕೆ ನಡೆಸುವ ಸಮುದಾಯದ ಪ್ರತಿಭಟನೆಯ ನಂತರ ರಾಜ್ಯ ವಿಧಾನಸಭೆಯು ಗೋವು ನಿಯಂತ್ರಣ ಮಸೂದೆಯನ್ನು ಸರ್ವಾನುಮತದಿಂದ ಹಿಂಪಡೆದಿದೆ. ಸುಮಾರು ಐದು ತಿಂಗಳ ಹಿಂದೆ ರಾಜ್ಯದ ನಗರ ಪ್ರದೇಶಗಳ ರಸ್ತೆಗಳು ಮತ್ತು ಸಾರ್ವಜನಿಕ...