Homeಮುಖಪುಟದ್ವೇಷ ಭಾಷಣ: ಕ್ರಿಮಿನಲ್ ಕಾನೂನಿನ ಬದಲಾವಣೆ ಈಗಿನ ತುರ್ತ: ತಜ್ಞರ ಸಮಿತಿ

ದ್ವೇಷ ಭಾಷಣ: ಕ್ರಿಮಿನಲ್ ಕಾನೂನಿನ ಬದಲಾವಣೆ ಈಗಿನ ತುರ್ತ: ತಜ್ಞರ ಸಮಿತಿ

- Advertisement -
- Advertisement -

ದ್ವೇಷ ಭಾಷಣ ನಿಯಂತ್ರಣದ ಕಾನೂನಿಗೆ ಬದಲಾವಣೆಯ ಅಗತ್ಯತೆ ಈಗಿನ ತುರ್ತು ಎಂದು, ಮೂರು ವರ್ಷಗಳ ಹಿಂದೆ ಐಪಿಸಿ, ಸಿಆರ್‌ಪಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿನ ಕೆಲವು ಬದಲಾವಣೆಗಳ ಕುರಿತು ಮತ್ತು ದ್ವೇಷದ ಭಾಷಣದ ಕುರಿತ ವಿಶಾಲವಾದ ವ್ಯಾಖ್ಯಾನಕ್ಕೆ ನಿಯೋಜಿಸಿದ್ದ ತಜ್ಞರ ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆ.

“ಅನೇಕ ವಿಷಯಗಳಲ್ಲಿ ಕ್ರಿಮಿನಲ್ ಕಾನೂನನ್ನು ಬದಲಾಯಿಸುವ ತುರ್ತು ಇದೆ. ಆದರೆ ಅದು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ. ದ್ವೇಷದ ಭಾಷಣವನ್ನು ನಿಯಂತ್ರಿಸುವುದು ಈ ಸಮಯದ ಅಗತ್ಯವಾಗಿರುವುದರಿಂದ, ನಾವು ನೀಡಿದ ಸಲಹೆಗಳನ್ನು ವ್ಯಾಪಕ ಸಮಾಲೋಚನೆಗಾಗಿ ಇಡಬೇಕು. ನಾವೇನೂ ಬುದ್ಧಿವಂತಿಕೆಯ ಮಾಲೀಕರಲ್ಲ. ಆದರೆ ನಾವು ನೀಡಿದ ಸಲಹೆಗಳನ್ನು ಗಮನಿಸಬೇಕು” ಎಂದು ನಿವೃತ್ತ ಐಪಿಎಸ್ ಅಧಿಕಾರಿ ಮತ್ತು ಟಿ ಕೆ ವಿಶ್ವನಾಥನ್ ಸಮಿತಿಯ ಸದಸ್ಯ ನವನೀತ್ ವಾಸನ್ ಹೇಳಿದ್ದಾರೆ.

ಕಳೆದ ವರ್ಷ ಆಗಸ್ಟ್ ನಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಸುಧಾರಣೆಗೊಳಿಸುವುದಕ್ಕೆ ಕರೆ ನೀಡಿದ್ದರು. ನಾಲ್ಕು ಪ್ರಮುಖ ಅಪರಾಧ ನ್ಯಾಯ ಕಾನೂನುಗಳಲ್ಲಿ ಅಗತ್ಯವಿರುವ ಬದಲಾವಣೆಗಳ ಬಗ್ಗೆ ರಾಜ್ಯಗಳ ಅಭಿಪ್ರಾಯಗಳನ್ನು ಕೋರಿದ್ದರು.

ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ), ಶಸ್ತ್ರಾಸ್ತ್ರ ಕಾಯ್ದೆ ಮತ್ತು ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಕಾಯ್ದೆ (ಎನ್‌ಡಿಪಿಎಸ್)ಗಳ ಮೇಲೆ ಈ ಪ್ರಕ್ರಿಯೆ ನಡೆಯುತ್ತಿದೆ.

ಬಿಜೆಪಿಯ ಆಜ್ಞೆಯ ಮೇರೆಗೆ ಫೇಸ್‌ಬುಕ್ ತನ್ನ ಕೆಲಸವನ್ನು ಕುಶಲತೆಯಿಂದ ನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದ ನಂತರ, 2017 ರಲ್ಲಿ ವಿವರವಾದ ವರದಿಯನ್ನು ಸಿದ್ಧಪಡಿಸಿದ ತಜ್ಞರ ಸಮಿತಿಯ ಸದಸ್ಯರನ್ನು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪರ್ಕಿಸಿತ್ತು.

ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಾದಾತ್ಮಕ ಸೆಕ್ಷನ್ 66 ಎ ಅನ್ನು ಸುಪ್ರೀಂ ಕೋರ್ಟ್ 2015 ರಲ್ಲಿ ತಡೆದ ನಂತರ ಮಾಜಿ ಕಾನೂನು ಕಾರ್ಯದರ್ಶಿ ಮತ್ತು ಲೋಕಸಭಾ ಪ್ರಧಾನ ಕಾರ್ಯದರ್ಶಿ ಟಿ.ಕೆ.ವಿಶ್ವನಾಥನ್ ನೇತೃತ್ವದ ತಜ್ಞರ ಸಮಿತಿಯನ್ನು ಕೇಂದ್ರ ರಚಿಸಿತು.

ಇದು 2017 ರಲ್ಲಿ ಸಲ್ಲಿಸಿದ ತನ್ನ ವರದಿಯಲ್ಲಿ, ದ್ವೇಷ ಮತ್ತು ಪ್ರಚೋದನೆಯನ್ನು ಹರಡಲು ದ್ವೇಷದ ಭಾಷಣ ಮತ್ತು ಸೈಬರ್‌ಪೇಸ್‌ನ ಬಳಕೆಯ ಪ್ರಕರಣಗಳನ್ನು ಎದುರಿಸಲು ಕಠಿಣ ನಿಬಂಧನೆಗಳನ್ನು ಪರಿಚಯಿಸಲು ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಐಟಿ ಕಾಯ್ದೆಯನ್ನು ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಶಿಫಾರಸು ಮಾಡಿತ್ತು.

ಡಿಜಿಟಲ್ ತಂತ್ರಜ್ಞಾನದಿಂದ ಒದಗಿಸಲಾದ ಅವಕಾಶಗಳು ಅಗಾಧವಾಗಿದ್ದರೂ, ಸಾರ್ವಜನಿಕ ಸುವ್ಯವಸ್ಥೆ ಮತ್ತು ರಾಷ್ಟ್ರೀಯ ಭದ್ರತೆಗೆ ಬೆದರಿಕೆಗಳು ನೈಜವಾಗಿವೆ. ಡಿಜಿಟಲ್ ವೇದಿಕೆಯ ಮೂಲಕ ಪ್ರಚಾರ ಮಾಡುವ ಹಾನಿಕಾರಕ ವಿಷಯಗಳಿಗೆ ಮತ್ತು ಇದು ದ್ವೇಷವನ್ನು ಸೃಷ್ಟಿಸುವ ಕಾರಣಕ್ಕೆ ಸರ್ಕಾರಗಳು ಮೂಕ ಪ್ರೇಕ್ಷಕನಂತಿರಲು ಸಾಧ್ಯವಿಲ್ಲ ಎಂದು ವರದಿ ಹೇಳಿದೆ.

ಅಪರಾಧ ನ್ಯಾಯ ವ್ಯವಸ್ಥೆಯ ಸಮಗ್ರ ಪುನರುಜ್ಜೀವನದಿಂದ ಮಾತ್ರ ದ್ವೇಷ ಭಾಷಣವನ್ನು ಪರಿಶೀಲಿಸುವ ಕ್ರಮಗಳನ್ನು ಒದಗಿಸಬಹುದು ಎಂದು ಸಮಿತಿಯ ಮತ್ತೊಬ್ಬ ಸದಸ್ಯರಾದ ಡಾ ಎಸ್ ಶಿವಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಕೇಂದ್ರ ಸಮಿತಿ; ಅಬ್ಜೆಕ್ಶನ್, ಮೈ ಲಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...