Homeಮುಖಪುಟದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ...

ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

- Advertisement -
- Advertisement -

ಹಲವಾರು ದ್ವೇಷ ಭಾಷಣ ಮಾಡಿರುವ ಆರೋಪಿ, ಬಿಜೆಪಿ ಪರ ದುಷ್ಕರ್ಮಿ ಯತಿ ನರಸಿಂಹಾನಂದ್ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದಿದ್ದಕ್ಕಾಗಿ ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಅಕ್ಟೋಬರ್‌ನಲ್ಲಿ ಸಲ್ಲಿಸಲಾದ ಎಫ್‌ಐಆರ್‌ನಲ್ಲಿ, ‘ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಅಪರಾಧವನ್ನು ಸೇರಿಸಲಾಗಿದೆ’ ಎಂದು ಉತ್ತರ ಪ್ರದೇಶ ಪೊಲೀಸರು ಬುಧವಾರ ಅಲಹಾಬಾದ್ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ಇತ್ತಿಚೆಗೆ ಪರಿಚಯಿಸಲಾದ ಹೊಸ ಕಾನೂನಾದ ಭಾರತೀಯ ನ್ಯಾಯ ಸಂಹಿತೆಯ 152 ಸೆಕ್ಷನ್ ಅನ್ನು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 124A ಅಡಿಯಲ್ಲಿ ದೇಶದ್ರೋಹದ ಕಾನೂನಿಗೆ ಹೋಲಿಸಲಾಗುತ್ತದೆ. ಹಿಂದುತ್ವವಾದಿ ಯತಿ ನರಸಿಂಹಾನಂದ್ ಕುರಿತು ಪೋಸ್ಟ್ ಹಾಕುವ ಮೂಲಕ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಜುಬೈರ್ ವಿರುದ್ಧ ಅಕ್ಟೋಬರ್ 7 ರಂದು ಪೊಲೀಸರು ಪ್ರಕರಣ ದಾಖಲಿಸಿದ್ದರು. , ಆದರೆ ಅವುಗಳ ಕಾನೂನು ವ್ಯಾಖ್ಯಾನಗಳು ಮತ್ತು ಪರಿಣಾಮಗಳ ವಿಷಯದಲ್ಲಿ ಅವು ಸಮಾನವಾಗಿರುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ದಾಸ್ನಾ ದೇವಿ ದೇವಸ್ಥಾನದ ಅರ್ಚಕರಾಗಿರುವ ನರಸಿಂಹಾನಂದ ದ್ವೇಷ ಭಾಷಣ ಮಾಡುವ ದುಷ್ಕರ್ಮಿಯಾಗಿದ್ದು, ಅವರ ವಿರುದ್ಧ ಹಲವಾರು ಎಫ್‌ಐಆರ್ ದಾಖಲಾಗಿದೆ. ಅವರು ಸೆಪ್ಟೆಂಬರ್ 29 ರಂದು ಮಾಡಿದ್ದ ಭಾಷಣದಲ್ಲಿ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಅವರ ಈ ಹೇಳಿಕೆ ದೇಶದ ಹಲವಾರು ನಗರಗಳಲ್ಲಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿತ್ತು.

ಈ ಬಗ್ಗೆ ಅಕ್ಟೋಬರ್ 3 ರಂದು, ಜುಬೈರ್ ಅವರು X ನಲ್ಲಿ ಅವರ ಭಾಷಣದ ಉದ್ದೇಶಿತ ವೀಡಿಯೊವನ್ನು ಹಂಚಿಕೊಂಡಿದ್ದರು ಮತ್ತು ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು. ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ನರಸಿಂಹಾನಂದರ ವಿರುದ್ಧ ಹಲವಾರು ಎಫ್‌ಐಆರ್‌ಗಳನ್ನು ಕೂಡ ದಾಖಲಿಸಲಾಗಿದೆ.

ಯತಿ ನರಸಿಮಹಾನಂದ ಸರಸ್ವತಿ ಫೌಂಡೇಶನ್‌ನ ಪ್ರಧಾನ ಕಾರ್ಯದರ್ಶಿ ಉದಿತಾ ತ್ಯಾಗಿ ಅವರು ಗಾಜಿಯಾಬಾದ್‌ನ ಕವಿನಗರ ಪೊಲೀಸರಿಗೆ ದೂರು ಸಲ್ಲಿಸಿದ್ದು, ಮುಸ್ಲಿಮರನ್ನು ಹಿಂಸಾಚಾರಕ್ಕೆ ಪ್ರಚೋದಿಸುವ ಉದ್ದೇಶದಿಂದ ಜುಬೈರ್ ನರಸಿಂಹಾನಂದ ಅವರ ಹಳೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಎಫ್‌ಐಆರ್ ದಾಖಲಾದ ನಂತರ, ಜುಬೈರ್ ಬಂಧನದಿಂದ ರಕ್ಷಣೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ಬಾರ್ ಮತ್ತು ಬೆಂಚ್ ತಿಳಿಸಿದೆ.

ನವೆಂಬರ್ 25 ರಂದು, ನ್ಯಾಯಾಲಯವು ಪ್ರಕರಣದ ತನಿಖಾಧಿಕಾರಿಗೆ ಮುಂದಿನ ವಿಚಾರಣೆಯ ವೇಳೆಗೆ ಜುಬೈರ್ ವಿರುದ್ಧದ ಶಿಕ್ಷೆಯ ಸೆಕ್ಷನ್‌ಗಳನ್ನು ವಿವರಿಸುವ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿತು. ಬುಧವಾರ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152 ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66 ರ ಸೇರಿ ಎರಡು ಹೊಸ ಸೆಕ್ಷನ್‌ಗಳನ್ನು ಎಫ್‌ಐಆರ್‌ಗೆ ಸೇರಿಸಲಾಗಿದೆ ಎಂದು ತನಿಖಾಧಿಕಾರಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನ್ಯಾಯಾಲಯವು ಎಫ್‌ಐಆರ್‌ ಸೇರ್ಪಡೆಗೆ ಅನುಮತಿ ನೀಡಿದ್ದು, ಡಿಸೆಂಬರ್ 3 ರಂದು ವಿಚಾರಣೆಗೆ ಪ್ರಕರಣವನ್ನು ಪಟ್ಟಿ ಮಾಡಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನರಸಿಂಹಾನಂದ ಅವರು ಪದೇ ಪದೇ ನೀಡುವ ಕೋಮುವಾದಿ ಹೇಳಿಕೆಗಳು, ಮಹಿಳೆಯರು ಮತ್ತು ಹಿರಿಯ ರಾಜಕಾರಣಿಗಳ ಬಗ್ಗೆ ಅವರು ನೀಡುವ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಗಮನ ಸೆಳೆಯಲು ತಾನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾಗಿ ಜುಬೇರ್ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದಾರೆ. ತನ್ನ ವಿರುದ್ಧ ದಾಖಲಾದ ಎಫ್‌ಐಆರ್ ನರಸಿಂಹಾನಂದರ ಕ್ರಿಮಿನಲ್ ಚಟುವಟಿಕೆಗಳನ್ನು ಬಹಿರಂಗಪಡಿಸದಂತೆ ತಡೆಯುವ “ದುರುದ್ದೇಶಪೂರಿತ ಪ್ರಯತ್ನ” ಎಂದು ಅವರು ನ್ಯಾಯಾಲಯಕ್ಕೆ ಹೇಳಿದ್ದಾರೆ ಎಂದು ಬಾರ್ ಆಂಡ್‌ ಬೆಂಚ್ ವರದಿ ಮಾಡಿದೆ.

ಇದನ್ನೂ ಓದಿ: ಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ

ಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...