Homeರಾಷ್ಟ್ರೀಯ‘ದ್ವೇಷ ಭಾಷಣ’: ಕೇರಳದ ಮಾಜಿ ಶಾಸಕ ಪಿ ಸಿ ಜಾರ್ಜ್‌ಗೆ 14 ದಿನಗಳ ನ್ಯಾಯಾಂಗ ಬಂಧನ

‘ದ್ವೇಷ ಭಾಷಣ’: ಕೇರಳದ ಮಾಜಿ ಶಾಸಕ ಪಿ ಸಿ ಜಾರ್ಜ್‌ಗೆ 14 ದಿನಗಳ ನ್ಯಾಯಾಂಗ ಬಂಧನ

- Advertisement -
- Advertisement -

ಏಪ್ರಿಲ್ 29 ರಂದು ತಿರುವನಂತಪುರಂನ ಅನಂತಪುರಿ ಹಿಂದೂ ಮಹಾ ಸಮ್ಮೇಳನದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಪ್ರಕರಣದಲ್ಲಿ ಕೇರಳದ ಹಿರಿಯ ರಾಜಕಾರಣಿ ಪಿ.ಸಿ. ಜಾರ್ಜ್ ಅವರನ್ನು ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಗುರುವಾರ ಒಪ್ಪಿಸಿದೆ.

ತಿರುವನಂತಪುರಂನ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅವರಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದ ನಂತರ ಮಂಗಳವಾರ ರಾತ್ರಿ ಪೊಲೀಸರು ಪಿಸಿ ಜಾರ್ಜ್ ಅವರನ್ನು ಬಂಧಿಸಿದ್ದರು. ಪಿಸಿ ಜಾರ್ಜ್ ಅವರು ಈಗಾಗಲೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರಿಂದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಯಾವುದೇ ಜಾಮೀನು ಅರ್ಜಿಯನ್ನು ಸಲ್ಲಿಸಲಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರ, ಅವರನ್ನು ಕೊಚ್ಚಿಯ ಪೊಲೀಸ್ ಠಾಣೆಯಿಂದ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು. ಅವರು ಈ ತಿಂಗಳು ಕೊಚ್ಚಿಯ ದೇವಾಲಯದ ಉತ್ಸವವೊಂದರಲ್ಲಿ ಮಾಡಿದ ಮತ್ತೊಂದು ದ್ವೇಷ ಭಾಷಣದ ತನಿಖೆಯ ಭಾಗವಾಗಿ ತೆರಳಿದ್ದರು.

ಇದನ್ನೂ ಓದಿ: ಮುಸ್ಲಿಮರ ವಿರುದ್ದ ದ್ವೇಷ ಭಾಷಣ: ಕೇರಳದ ಮಾಜಿ ಶಾಸಕನ ಬಂಧನ, ಜಾಮೀನು

ಕೊಟ್ಟಾಯಂ ಜಿಲ್ಲಾ ಪಂಚಾಯತ್ ಸದಸ್ಯರಾಗಿರುವ ಜಾರ್ಜ್ ಅವರ ಪುತ್ರ ಶೋನ್, ತಮ್ಮ ತಂದೆಯ ಬಂಧನ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪಿತೂರಿ ಎಂದು ಆರೋಪಿಸಿದ್ದಾರೆ. “ಅವರು (ವಿಜಯನ್) ಜಾರ್ಜ್ ಅವರನ್ನು ಕನಿಷ್ಠ ಒಂದು ಗಂಟೆ ಜೈಲಿನಲ್ಲಿ ಇರಿಸುವ ಮೂಲಕ ಯಾರನ್ನೊ ಮನವೊಲಿಸಲು ಬಯಸಿದ್ದರು. ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಬಾಕಿ ಇರುವ ಸಮಯದಲ್ಲಿ ನನ್ನ ತಂದೆಯನ್ನು ಬಂಧಿಸುವ ಮೂಲಕ ಅವರು ಕೆಲವು ವಲಯಗಳನ್ನು ಸಮಾಧಾನಪಡಿಸಲು ಬಯಸಿದ್ದರು” ಎಂದು ಶೋನ್ ಹೇಳಿದ್ದಾರೆ.

ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದ ನಂತರ ತಿರುವನಂತಪುರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರ್ಜ್ ಅವರ ಜಾಮೀನನ್ನು ರದ್ದುಗೊಳಿಸಿದೆ. ಈ ತಿಂಗಳು ಕೊಚ್ಚಿಯಲ್ಲಿ ನಡೆದ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಜಾರ್ಜ್ ಮತ್ತೊಂದು ದ್ವೇಷ ಭಾಷಣ ಮಾಡಿ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯದ ಗಮನಕ್ಕೆ ತಂದಿತ್ತು.

ಏಪ್ರಿಲ್ 29 ರಂದು ತಿರುವನಂತಪುರಂನ ಅನಂತಪುರಿ ಹಿಂದೂ ಮಹಾ ಸಮ್ಮೇಳನದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ದಕ್ಕಾಗಿ ಪಿ.ಸಿ ಜಾರ್ಜ್ ವಿರುದ್ಧ ಹಲವು ಸಂಘಟನೆಗಳು ದೂರು ದಾಖಲಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದವು. ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪಿ.ಸಿ. ಜಾರ್ಜ್, “ಮುಸ್ಲಿಮರು ನಡೆಸುತ್ತಿರುವ ರೆಸ್ಟೋರೆಂಟ್‌ಗಳಿಗೆ ಹೋಗಬಾರದು. ಅವರು ದೇಶದ ಮೇಲೆ ಹಿಡಿತ ಸಾಧಿಸುವ ಉದ್ದೇಶದಿಂದ ಚಹಾದಲ್ಲಿ ಸಂತಾನಹರಣ ಆಗುವ ದ್ರವವನ್ನು ಅದರಲ್ಲಿ ಬಳಸುತ್ತಾರೆ” ಎಂದು ಹೇಳಿದ್ದರು.

ಇದನ್ನೂ ಓದಿ: ಕೇರಳದಲ್ಲಿ ಬಂಡವಾಳಶಾಹಿಗಳೊಂದಿಗೆ ಕೈಜೋಡಿಸಿದ ಆಪ್; ಹುಸಿಯಾಗುತ್ತಿರುವ ಪರ್ಯಾಯ ರಾಜಕಾರಣದ ಭರವಸೆ

33 ವರ್ಷಗಳ ಕಾಲ ರಾಜ್ಯ ವಿಧಾನಸಭೆಯಲ್ಲಿ ಪೂಂಜಾರ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜಾರ್ಜ್ ಅವರು ಮುಸ್ಲಿಮರು ನಡೆಸುತ್ತಿರುವ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಮುಸ್ಲಿಮೇತರರನ್ನು ಅಂದಿನ ಭಾಷಣದಲ್ಲಿ ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...