Homeಮುಖಪುಟದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

ದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

- Advertisement -
- Advertisement -

ಭಾನುವಾರ ಹಿಂದುತ್ವ ಸಂಘಟನೆಗಳು, ಮುಸ್ಲಿಮರ ವಿರುದ್ಧ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡಿ ಮುಂಬೈ ಬಳಿ ರ್ಯಾಲಿ ನಡೆಸಿದವು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಲವಾರು ಹಿಂದುತ್ವ ಸಂಘಟನೆಗಳ ಸಮೂಹವಾದ ಸಕಲ್ ಹಿಂದೂ ಸಮಾಜವು ‘ಹಿಂದೂ ಜನ ಆಕ್ರೋಶ ಮೋರ್ಚಾ’ ರ್ಯಾಲಿಯನ್ನು ಮಹಾರಾಷ್ಟ್ರದ ಮೀರಾ ರಸ್ತೆಯಲ್ಲಿ ಆಯೋಜಿಸಲಾಗಿತ್ತು.

ಈ ವೇಳೆ ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡುವುದರ ಜೊತೆಗೆ, ರ್ಯಾಲಿಯಲ್ಲಿ ಭಾಗವಹಿಸಿದ ಕೆಲವರು “ಲವ್ ಜಿಹಾದ್” ಮತ್ತು “ಲ್ಯಾಂಡ್ ಜಿಹಾದ್” ವಿಚಾರವಾಗಿ ಮುಸ್ಲಿಮರ ವಿರುದ್ಧ ವಿಷಕಾರಿದ್ದಾರೆ.

ಈ ರ್ಯಾಲಿಯ ಭಾಷಣಕಾರರಲ್ಲಿ ಒಬ್ಬರಾದ ಕಾಜಲ್, ”ಇಸ್ಲಾಮಿಕ್ ಆಕ್ರಮಣಶೀಲತೆಯಲ್ಲಿ ಮೂರು ಪ್ರಮುಖ ಅಂಶಗಳಿವೆ. ಮೊದಲನೆಯದು ಲವ್ ಜಿಹಾದ್, ಎರಡನೆಯದು ಭೂ ಜಿಹಾದ್ ಮತ್ತು ಅಂತಿಮವಾಗಿ, ಮತಾಂತರದ ಸಮಸ್ಯೆ ಇದೆ” ಎಂದು ಆರೋಪ ಮಾಡಿದ್ದಾರೆ ಎಂದು ಹಿಂದೂಸ್ತಾನಿ ಪತ್ರಿಕೆಯ ವರದಿ ಮಾಡಿದೆ.

”ಈ ಮೂರಕ್ಕೂ ರಾಮ್ ನೇತೃತ್ವದ ಪರಿಹಾರವಿದೆ, ಅದೇನೆಂದರೆ ‘ಆರ್ಥಿಕ ಬಹಿಷ್ಕಾರ’. ಇದಕ್ಕೆ ರಾಜಕೀಯ ನಾಯಕರು, ಸುಪ್ರೀಂ ಕೋರ್ಟ್ ಅಥವಾ ಮಾಧ್ಯಮಗಳು ನಿಮ್ಮನ್ನು ತಡೆಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಕಾರ್ಯಕ್ರಮಕ್ಕೆ ಅನುಮತಿ: ಮಹಾರಾಷ್ಟ್ರಕ್ಕೆ ಸುಪ್ರೀಂ ಸೂಚನೆ

”ಲವ್ ಜಿಹಾದ್” ಎಂಬುದು ಇಸ್ಲಾಂಗೆ ಮತಾಂತರಿಸುವ ಸಲುವಾಗಿ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮೋಹಿಸಲು ಸಂಚು ಹೂಡುತ್ತಾರೆ. ಅಂತೆಯೇ, ”ಲ್ಯಾಂಡ್ ಜಿಹಾದ್” ಪ್ರತಿಪಾದಕರು ಮುಸ್ಲಿಮರು ಸಾರ್ವಜನಿಕ ಭೂಮಿ ಮತ್ತು ಹಿಂದೂಗಳ ಒಡೆತನದ ಆಸ್ತಿಯನ್ನು ಅತಿಕ್ರಮಿಸುವ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ಕಾಜಲ್ ಆರೋಪಿಸಿದ್ದಾರೆ.

ರ್ಯಾಲಿಯಲ್ಲಿ ಶಾಸಕ ನಿತೇಶ್ ರಾಣೆ ಸೇರಿದಂತೆ ಭಾರತೀಯ ಜನತಾ ಪಕ್ಷದ ಮುಖಂಡರು ಮತ್ತು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಂತಹ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಮೀರಾ ಭಯಂದರ್ ಸ್ವತಂತ್ರ ಶಾಸಕಿ ಗೀತಾ ಜೈನ್ ಧ್ವಜಾರೋಹಣ ಮಾಡಿದರು.

ಮಹಾರಾಷ್ಟ್ರದಾದ್ಯಂತ ನವೆಂಬರ್‌ನಿಂದ ಇಂತಹ ಅನೇಕ ರ್ಯಾಲಿಗಳು ನಡೆಯುತ್ತಿವೆ. ಬಹುತೇಕ ಎಲ್ಲ ರ್ಯಾಲಿಗಳಲ್ಲೂ ಭಾಷಣಕಾರರು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ ಅಥವಾ ಸಮುದಾಯ ವಿರುದ್ಧ ಪಿತೂರಿ ನಡೆಸುವ ವಿಚಾರಗಳನ್ನು ಹರಿಬಿಡುತ್ತಿದ್ದಾರೆ.

ಫೆಬ್ರವರಿಯಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಆ ಪ್ರಕಾರ ”ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಸಂಘಟನೆಗಳ ರ್‍ಯಾಲಿಗೆ ಅನುಮತಿ ನೀಡಬಹುದು. ಗುಂಪಿನಿಂದ ಒಂದೇ ರ್ಯಾಲಿಗೆ ಅನುಮತಿ ನೀಡಬೇಕು ಮತ್ತು ಈ ವೇಳೆ ಯಾವುದೇ ದ್ವೇಷದ ಭಾಷಣ ಮಾಡಬಾರದು ಎಂದು ಷರತ್ತು ವಿಧಿಸಿತ್ತು.

”ಕಾನೂನನ್ನು ಧಿಕ್ಕರಿಸಿ ಮತ್ತು ಸಾರ್ವಜನಿಕ ಆದೇಶವನ್ನು ಉಲ್ಲಂಘಿಸುವ ಯಾವುದೇ ದ್ವೇಷದ ಭಾಷಣವನ್ನು ಯಾರೂ ಮಾಡಬಾರದು ಎಂಬ ಷರತ್ತಿಗೆ ಒಳಪಟ್ಟು ಅನುಮತಿ ನೀಡಬಹುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿತ್ತು. ಆದರೆ, ಮಹಾರಾಷ್ಟ್ರ ಸರ್ಕಾರ ಮತ್ತು ಹಿಂದೂ ಸಂಘಟನೆಗಳು ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ ಇಂತಹ ದ್ವೇ‍ಷ ಬಿತ್ತುವ ರ್ಯಾಲಿಗಳನ್ನು ನಡೆಸುತ್ತಿವೆ.

ಮುಸ್ಲಿಮರ ಆರ್ಥಿಕ ಬಹಿಷ್ಕಾರದ ಕರೆಯನ್ನು ಬೆಂಬಲಿಸುವುದಾಗಿ ಮಹಾರಾಷ್ಟ್ರದ ಮಾಜಿ ಸಿಎಂ ನಾರಾಯಣ ರಾಣೆ ಅವರು ತಿಳಿಸಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಆ ಎಲ್ಲಾ ಹಣವನ್ನು ಅವರು ಹಿಂದೂ ಸಮುದಾಯದ ವಿರುದ್ಧ ಬಳಸುತ್ತಾರೆ. ಆ ಹಣವನ್ನು ಸಮುದಾಯದ ಏಳಿಗೆಗೆ ಬಳಸಿದರೆ ಯಾರಿಗೂ ಸಮಸ್ಯೆಯಾಗುವುದಿಲ್ಲ. ಆದರೆ ಅವರು ಹಿಂದೂಗಳ ವಿರುದ್ಧ ಭಯೋತ್ಪಾದನೆ, ಲವ್ ಜಿಹಾದ್ ಮತ್ತು ಇತರ ಹಲವು ವಿಷಯಗಳ ಹೆಸರಿನಲ್ಲಿ ಹಣವನ್ನು ಬಳಸುತ್ತಾರೆ” ಎಂದು ರಾಣೆ ಮುಸ್ಲಿಂ ಸಮುದಾಯದ ವಿರುದ್ಧ ದ್ವೇ‍ಷದ ಮಾತುಗಳನ್ನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...