Homeಅಂತರಾಷ್ಟ್ರೀಯಧರ್ಮ ಸಂಸದ್‌ನಲ್ಲಿ ದ್ವೇ‍ಷ ಭಾಷಣ: ಭಾರತದ ಉನ್ನತ ರಾಜತಾಂತ್ರಿಕರಿಗೆ ಸಮನ್ಸ್ ನೀಡಿದ ಪಾಕಿಸ್ತಾನ

ಧರ್ಮ ಸಂಸದ್‌ನಲ್ಲಿ ದ್ವೇ‍ಷ ಭಾಷಣ: ಭಾರತದ ಉನ್ನತ ರಾಜತಾಂತ್ರಿಕರಿಗೆ ಸಮನ್ಸ್ ನೀಡಿದ ಪಾಕಿಸ್ತಾನ

- Advertisement -
- Advertisement -

ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ, ನರಮೇಧಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಭಾರತದ ಇಸ್ಲಾಮಾಬಾದ್‌ನಲ್ಲಿನ ಉನ್ನತ ರಾಜತಾಂತ್ರಿಕರಿಗೆ ಸಮನ್ಸ್ ನೀಡಿದ್ದು, ಈ ಕುರಿತು ವಿವರಣೆ ನೀಡುವಂತೆ ಸೂಚಿಸಿದೆ.

ಭಾರತೀಯ ಹೈಕಮಿಷನ್‌ನ ಪ್ರಭಾರ ಅಧಿಕಾರಿಗಳನ್ನು ಇಸ್ಲಾಮಾಬಾದ್‌ನಲ್ಲಿರುವ ವಿದೇಶಾಂಗ ಸಚಿವಾಲಯಕ್ಕೆ ಕರೆಸಲಾಯಿತು ಮತ್ತು “ಭಾರತೀಯ ಮುಸ್ಲಿಮರ ನರಮೇಧಕ್ಕಾಗಿ ಹಿಂದುತ್ವ ಪ್ರತಿಪಾದಕರು ನೀಡಿರುವ ಬಹಿರಂಗ ಕರೆಗಳ ಬಗ್ಗೆ ಪಾಕಿಸ್ತಾನ ಸರ್ಕಾರದ ಗಂಭೀರ ಕಳವಳವನ್ನು ತಿಳಿಸುವಂತೆ ಕೇಳಲಾಯಿತು” ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಮುಸ್ಲಿಮರ ಹತ್ಯೆಗೆ ಬಹಿರಂಗ ಕರೆ ನೀಡಿದ್ದರೂ ಸಹ ಭಾರತ ಸರ್ಕಾರ ಇದುವರೆಗೂ ಯಾವುದೇ ವಿಷಾದವನ್ನು ವ್ಯಕ್ತಪಡಿಸಿಲ್ಲ, ಖಂಡಿಸಿಲ್ಲ ಅಥವಾ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಅತ್ಯಂತ ಖಂಡನೀಯ ಎಂದು ಪಾಕಿಸ್ತಾನವು ಭಾವಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಸ್ಲಾಮಾಬಾದ್‌ನ ಹೈಕಮಿಷನ್ ಆಫ್ ಇಂಡಿಯಾದಲ್ಲಿ ಪ್ರಭಾರಿಯಾಗಿ ನೇಮಕಗೊಂಡಿರುವ ಸುರೇಶ್ ಕುಮಾರ್ ರವರಿಗೆ ಸಮನ್ಸ ನೀಡಲಾಗಿತ್ತು.

ಡಿಸೆಂಬರ್ 17 ರಿಂದ 19ರವರೆಗೆ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ “ನಮ್ಮಲ್ಲಿ 100 ಜನರು 20 ಲಕ್ಷ ಜನರನ್ನು (ಮುಸ್ಲಿಮರು) ಕೊಲ್ಲಲು ಸಿದ್ಧರಿದ್ದರೆ, ನಾವು ಗೆದ್ದು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಹಿಂದೂ ಮಹಾಸಭಾದ ನಾಯಕಿ ಪೂಜಾ ಶಕುನ್ ಪಾಂಡೆ ಹೇಳಿದ್ದಾರೆ. ದೇಶದ ಮುಸ್ಲಿಮರನ್ನು ಉಲ್ಲೇಖಿಸಿ “ಕೊಲ್ಲಲು ಮತ್ತು ಜೈಲಿಗೆ ಹೋಗಲು ಸಿದ್ಧರಾಗಿರಿ” ಎಂದು ಬಲಪಂಥೀಯ ಹಿಂದೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಮುಸ್ಲಿಮರ ವಿರುದ್ದ ದ್ವೇಷ ಭಾಷಣಗಳಿಗೆ ಕುಖ್ಯಾತಿಯಾಗಿರುವ ಯತಿ ನರಸಿಂಗಾನಂದ ಎಂಬುವವರು ಧರ್ಮ ಸಂಸದ್ ಆಯೋಜಿಸಿದ್ದರು. ದ್ವೇ‍ಷ ಭಾಷಣಗಳಿಗೆ ಸಂಬಂಧಿಸಿದಂತೆ ಇದುವೆರೆಗೂ ಅವರ ಮೇಲೆ ಹತ್ತಾರು ಪ್ರಕರಗಳು ದಾಖಲಾಗಿವೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಕ್ಷದೊಂದಿಗೆ ನಿಕಟ ಸಂಬಂಧ ಹೊಂದಿರುವ ಪ್ರಭಾವಿ ಧಾರ್ಮಿಕ ಮುಖಂಡರು ಮತ್ತು ಪಕ್ಷದ ಕೆಲವು ಸದಸ್ಯರು ಈ ಸಮ್ಮೆಳನದಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ದ್ವೇಷ ಭಾಷಣ ಮಾಡಿದ್ದ ಆರೋಪದಲ್ಲಿ ವಾಸಿಂ ರಿಜ್ವಿ ಆಲಿಯಾಸ್ ಜಿತೇಂದ್ರ ತ್ಯಾಗಿ, ಧರ್ಮ ದಾಸ್ ಮತ್ತು ಅನ್ನಪೂರ್ಣ ಎಂಬುವವರ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಭಾಷಣ: ಮೋದಿ ವಿರುದ್ಧದ ದೂರಿಗೆ ‘ಜೆ.ಪಿ.ನಡ್ಡಾ’ಗೆ ನೊಟೀಸ್‌ ಕಳುಹಿಸಿದ ಚುನಾವಣಾ ಆಯೋಗ!

0
ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ದೂರುಗಳ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ನೋಟಿಸ್ ನೀಡಿದೆ. ಆದರೆ, ಈ ನೊಟೀಸ್‌ನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕಳುಹಿಸಲಾಗಿದ್ದು,...