Homeಮುಖಪುಟಪ್ರವಾದಿ ಮುಹಮ್ಮದರ ಕುರಿತು ದ್ವೇಷ ಭಾಷಣ : ಯತಿ ನರಸಿಂಗಾನಂದ ಬಂಧನ

ಪ್ರವಾದಿ ಮುಹಮ್ಮದರ ಕುರಿತು ದ್ವೇಷ ಭಾಷಣ : ಯತಿ ನರಸಿಂಗಾನಂದ ಬಂಧನ

- Advertisement -
- Advertisement -

ಪ್ರವಾದಿ ಮುಹಮ್ಮದ್ ಮತ್ತು ಕುರಾನ್ ಕುರಿತು ಅವಹೇಳಕಾರಿ ಹೇಳಿಕೆ ನೀಡಿದ ಯತಿ ನರಸಿಂಗಾನಂದ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ನರಸಿಂಗಾನಂದ ಹೇಳಿಕೆ ವಿರುದ್ದ ಶುಕ್ರವಾರ ರಾತ್ರಿ ಉತ್ತರ ಪ್ರದೇಶದ ಹಲವು ನಗರಗಳಲ್ಲಿ ಪ್ರತಿಭಟನೆ ನಡೆದಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಬುಲಂದ್‌ಶಹರ್ ಪಟ್ಟಣದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶದ ಗಾಝಿಯಾಬಾದ್‌ನ ಪ್ರಸಿದ್ಧ ದಾಸ್ನಾ ದೇವಿ ದೇವಾಲಯದ ಮುಖ್ಯಸ್ಥನಾಗಿರುವ ನರಸಿಂಗಾನಂದ ವಿರುದ್ದ ದ್ವೇಷ ಭಾಷಣ ಆರೋಪದ ಮೇಲೆ ಶುಕ್ರವಾರ (ಅ.4) ಪ್ರಕರಣ ದಾಖಲಾಗಿತ್ತು.

ಗಾಝಿಯಾಬಾದ್‌ನ ಲೋಹಿಯಾ ನಗರದ ಹಿಂದಿ ಭವನದಲ್ಲಿ ಸೆಪ್ಟೆಂಬರ್ 29 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪ ಅವರ ಮೇಲಿದೆ.

ದ್ವೇಷ ಭಾಷಣಗಳಿಗೆ ಸಂಬಂಧಪಟ್ಟಂತೆ ನರಸಿಂಗಾನಂದ ವಿರುದ್ದ ಈಗಾಗಲೇ ಮೂರು ಪ್ರಕರಣಗಳು ದಾಖಲಾಗಿವೆ.

ಈ ಹಿಂದೆ 2022ರಲ್ಲಿ ದ್ವೇಷ ಭಾಷಣ ಮಾಡಿದದ್ದಕ್ಕಾಗಿ ನರಸಿಂಗಾನಂದ ಅವರನ್ನು ಬಂಧಿಸಲಾಗಿತ್ತು. ಡಿಸೆಂಬರ್ 2021ರಲ್ಲಿ, ಹರಿದ್ವಾರದಲ್ಲಿ ನಡೆದ ‘ಧರ್ಮ ಸಂಸದ್’ ನಲ್ಲಿ ನಡೆದ ಸಭೆಯಲ್ಲಿ ಹಿಂದೂಗಳಿಗೆ ಬೆದರಿಕೆಯಿರುವ ಸಾಧ್ಯತೆಯಿರುವುದರಿಂದ ಮುಸ್ಲಿಮರ ವಿರುದ್ಧ ಹೆಚ್ಚು ಪರಿಣಾಮಕಾರಿಯಾಗಿರುವ ಶಸ್ತ್ರಾಸ್ತ್ರಗಳೊಂದಿಗೆ ಸಜ್ಜಾಗಿರುವಂತೆ ಕರೆ ನೀಡಿದ್ದರು.

ಈ ಬಾರಿ ಪ್ರವಾದಿ ವಿರುದ್ದ ನೀಡಿದ್ದ ಅವಹೇಳನಕಾರಿ ಹೇಳಿಕೆ ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಮುಖ ಮುಸ್ಲಿಂ ನಾಯಕರು ಮತ್ತು ಸಂಸದ ಅಸಾದುದ್ದೀನ್ ಓವೈಸಿ ಸೇರಿದಂತೆ ಅನೇಕರು ನರಸಿಂಗಾನಂದ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದರು.

ಇದನ್ನೂ ಓದಿ : ಮಾಲೆಗಾಂವ್ ಪ್ರಕರಣ: ‘ಸಿಮಿ’ ಸ್ಫೋಟ ನಡೆಸಿರಬಹುದು ಎಂದು ಆರೋಪಿಸಿದ ಪ್ರಜ್ಞಾ ಠಾಕೂರ್ ಪರ ವಕೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...