Homeಮುಖಪುಟದ್ವೇಷ ಭಾಷಣ: ವಿವಾದಿತ ಕಾಳಿಚರಣ್ ಸ್ವಾಮಿಯನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸರು

ದ್ವೇಷ ಭಾಷಣ: ವಿವಾದಿತ ಕಾಳಿಚರಣ್ ಸ್ವಾಮಿಯನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸರು

- Advertisement -
- Advertisement -

ಡಿಸೆಂಬರ್ 19 ರಂದು ಪುಣೆಯಲ್ಲಿ ನಡೆದ “ಶಿವಪ್ರತಾಪ್ ದಿನ್” ಕಾರ್ಯಕ್ರಮದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿವಾದಿತ ಧಾರ್ಮಿಕ ಗುರು ಕಾಳಿಚರಣ್ ಮಹಾರಾಜ್‌ನನ್ನು ಛತ್ತೀಸ್‌ಗಢದ ರಾಯ್‌ಪುರ ಪೊಲೀಸರದಿಂದ ಪುಣೆ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹಾರಾಷ್ಟ್ರದ ಪುಣೆಯಲ್ಲಿ ವಿವಾದಿತ ಧಾರ್ಮಿಕ ಗುರು ಕಾಳಿಚರಣ್ ಮಹಾರಾಜ್ ಮತ್ತು ಇತರ ಐವರ ವಿರುದ್ಧ ದ್ವೇಷ ಭಾಷಣ ಪ್ರಕರಣ ದಾಖಲಾಗಿದೆ. ಕಾಳಿಚರಣ್ ಮಹಾರಾಜ್, ಬಲಪಂಥೀಯ ನಾಯಕ ಮಿಲಿಂದ್ ಎಕ್ಬೋಟೆ, ಕ್ಯಾಪ್ಟನ್ ದಿಗೇಂದ್ರ ಕುಮಾರ್ (ನಿವೃತ್ತ) ಮತ್ತು ಇತರರ ವಿರುದ್ಧ ಇಲ್ಲಿ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣಗಳನ್ನು ಮಾಡಿದ್ದಾರೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

1659 ರಲ್ಲಿ ಛತ್ರಪತಿ ಶಿವಾಜಿ ಮಹಾರಾಜರಿಂದ ಆದಿಲ್‌ಶಾಹಿ ಜನರಲ್ ಅಫ್ಜಲ್ ಖಾನ್ ಅವರನ್ನು ಕೊಂದ ನೆನಪಿಗಾಗಿ ಶುಕ್ರವಾರ ಪೇಟೇಯ ನಾಟುಬಾಗ್‌ನಲ್ಲಿ ಸಮಸ್ತ ಹಿಂದುತ್ವ ಅಘಾಡಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮದ ವಿಡಿಯೋ ತುಣುಕು ವೈರಲ್ ಆದ ನಂತರ ಡಿಸೆಂಬರ್ 28 ರಂದು ಖಡಕ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 295 (ಎ), 298, 505 (2), 34 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಕಥುವಾ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಅಪರಾಧಿ ಬಿಡುಗಡೆ, ಆತಂಕದಲ್ಲಿ ಸಂತ್ರಸ್ತ ಕುಟುಂಬ

ಎಫ್‌ಐಆರ್‌ನ ಪ್ರಕಾರ, ಕಾರ್ಯಕ್ರಮದ ಸಮಯದಲ್ಲಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ವಿರುದ್ಧ ದ್ವೇಷಪೂರಿತ ಭಾಷಣಗಳನ್ನು ಮಾಡಲಾಗಿದೆ.

ಛತ್ತೀಸ್‌ಗಢದ ರಾಯ್‌ಪುರದ ನ್ಯಾಯಾಲಯವು ಟ್ರಾನ್ಸಿಟ್ ರಿಮಾಂಡ್ ಮಂಜೂರು ಮಾಡಿದ ನಂತರ, ಕಾಳಿಚರಣ್ ಮಹಾರಾಜ್‌ನನ್ನು ಪುಣೆಗೆ ಕರೆತರಲಾಗುತ್ತಿದ್ದು, ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ಅಕೋಲಾದ ಶಿವಾಜಿನಗರದ ನಿವಾಸಿ ಕಾಳಿಚರಣ್ ಮಹಾರಾಜ್ ಅಲಿಯಾಸ್ ಅಭಿಜಿತ್ ಸರಾಗ್‌ರನ್ನು ಈ ಹಿಂದೆ ರಾಯ್‌ಪುರದಲ್ಲಿ ತಮ್ಮ ಭಾಷಣದ ವೇಳೆ ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಪುಣೆಯಲ್ಲಿ ಭಾಷಣ ಮಾಡುವಾಗಲೂ ಇದೇ ರೀತಿಯ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪುಣೆ ನಗರ ಪೊಲೀಸ್ ಕಮಿಷನರ್ ಅಮಿತಾಭ್ ಗುಪ್ತಾ ಅವರ ತಂಡವು ಕಾಳಿಚರಣ್ ಮಹಾರಾಜನನ್ನು ರಾಯ್‌ಪುರದಲ್ಲಿ ಬಂಧಿಸಿ, ವಶಕ್ಕೆ ಪಡೆದಿದ್ದು, ಇಂದು ಪುಣೆಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: ‘ಪಶ್ಚಾತ್ತಾಪವಿಲ್ಲ’: ಮಹಾತ್ಮ ಗಾಂಧಿ ಬಗ್ಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಾಳಿಚರಣ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...