Homeರಾಷ್ಟ್ರೀಯದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

ದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಉತ್ತರಾಖಂಡದ ರೂರ್ಕಿಯಲ್ಲಿ ಬುಧವಾರ ನಡೆಯಲಿರುವ ಧಾರ್ಮಿಕ ಸಮಾವೇಶವು ಮುಸ್ಲಿಮರನ್ನು ಗುರಿಯಾಗಿಸುವ ವಿಶಿಷ್ಟ ‘ದ್ವೇಷ ಉತ್ಸವ’ವಾಗಿ ಬದಲಾಗಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಈ ತಿಂಗಳ ಆರಂಭದಲ್ಲಿ ನಡೆದ ಇದೇ ರೀತಿಯ ಘಟನೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನೆರೆಯ ಹಿಮಾಚಲ ಪ್ರದೇಶಕ್ಕೂ ತೀಕ್ಷ್ಣವಾದ ಪ್ರಶ್ನೆಗಳನ್ನು ಸುಪ್ರೀಂಕೋರ್ಟ್‌ ಕೇಳಿದೆ.

“ದ್ವೇಷದ ಭಾಷಣವನ್ನು ನಿಲ್ಲಿಸದಿದ್ದರೆ, ಉತ್ತರಾಖಂಡ ಮುಖ್ಯ ಕಾರ್ಯದರ್ಶಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ನಾವು ಮುಖ್ಯ ಕಾರ್ಯದರ್ಶಿಯನ್ನು ನ್ಯಾಯಾಲಯಕ್ಕೆ ಕರೆಸುತ್ತೇವೆ” ಎಂದು ನ್ಯಾಯಾಮೂರ್ತಿಗಳು ಹೇಳಿದ್ದು, ‘ಧರಮ್ ಸಂಸದ್’ನಲ್ಲಿ ಯಾವುದೇ ‘ಅಹಿತಕರ ಹೇಳಿಕೆ’ ನೀಡಲಾಗುವುದಿಲ್ಲ ಎಂದು ಖಚಿತಪಡಿಸಲು ರಾಜ್ಯದ ಉನ್ನತ ಅಧಿಕಾರಿಗಳಿಗೆ ಕೇಳಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಯನ್ನು ಅನುಸರಿಸಿ. ದ್ವೇಷದ ಭಾಷಣವನ್ನು ನಿಲ್ಲಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಿ” ಎಂದು ಸುಪ್ರೀಂಕೋರ್ಟ್‌ ಮುಂದಿನ ಬುಧವಾರದಂದು ನಿಗದಿಪಡಿಸಲಾದ ಕಾರ್ಯಕ್ರಮಕ್ಕೆ ಮುಂಚಿತವಾಗಿ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕಾರ್ಕಳ-ಹೆಬ್ರಿ: ಅಹಿಂಸೆಯ ಜೈನ ಕಾಶಿಯಲ್ಲಿ ಹಿಂಸೋನ್ಮಾದದ ಹಿಂದುತ್ವ ಕಾಳಗ!

ಪ್ರತ್ಯೇಕ ವಿಚಾರಣೆಯೊಂದರಲ್ಲಿ, ಈ ತಿಂಗಳ ಆರಂಭದಲ್ಲಿ ಮುಸ್ಲಿಮರ ವಿರುದ್ಧ ಮಾಡಲಾದ ದ್ವೇಷಪೂರಿತ ಭಾಷಣಗಳು ಮತ್ತು ಹಿಂದೂಗಳು ಹಿಂಸಾಚಾರ ನಡೆಸುವಂತೆ ಕರೆ ನೀಡಿದ ಘಟನೆಯ ಕುರಿತು ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗಂಭೀರ ಪ್ರಶ್ನೆಗಳನ್ನು ಕೇಳಿದೆ.

“ಸರ್ಕಾರವು ಇಂತಹ ಚಟುವಟಿಕೆಯನ್ನು ನಿಲ್ಲಿಸಬೇಕು. ಇದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಯಾವುದಾದರೂ ಕ್ರಮಗಳನ್ನು ತೆಗೆದುಕೊಂಡಿದೆಯೇ ಅಥವಾ ಇಲ್ಲವೇ ಎಂಬುದನ್ನು ನಮಗೆ ತಿಳಿಸಬೇಕು” ಎಂದು ಹೇಳಿದ ನ್ಯಾಯಾಲಯವು, ದ್ವೇಷ ಭಾಷಣಕಾರರ ವಿರುದ್ಧ ತಕ್ಷಣವೇ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಬಿಜೆಪಿ ಆಡಳಿತವನ್ನು ಕೇಳಿದೆ.

“ಈ ಬಗ್ಗೆ ಸರ್ಕಾರವು ಮೇ 7ರೊಳಗೆ ಅಫಿಡವಿಟ್ ಸಲ್ಲಿಸಬೇಕು. ಅಂತಹ ಘಟನೆಗಳನ್ನು ತಡೆಯಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದನ್ನು ನಮಗೆ ತಿಳಿಸಬೇಕು” ಎಂದು ಅದು ಹೇಳಿದ್ದು, ಪ್ರಕರಣವನ್ನು ಮೇ 9 ರಂದು ವಿಚಾರಣೆ ಮಾಡುವುದಾಗಿ ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

“ಈ ಘಟನೆಗಳು ಇದ್ದಕ್ಕಿದ್ದಂತೆ, ರಾತ್ರೋರಾತ್ರಿ ಸಂಭವಿಸುವುದಿಲ್ಲ. ಕಾರ್ಯಕ್ರಮಗಳನ್ನು ಮುಂಚಿತವಾಗಿ ಘೋಷಿಸಲಾಗಿರುತ್ತದೆ. ನೀವು ಆಗಿನಿಂದಲೇ ಏಕೆ ಕಾರ್ಯನಿರ್ವಹಿಸಲಿಲ್ಲ? ದ್ವೇಷ ಭಾಷಣಗಳ ಕುರಿತು ಈಗಾಗಲೇ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿವೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

“ಬುಧವಾರ ಉತ್ತರಾಖಂಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಯಾವುದೇ ‘ಅಹಿತಕರ ಹೇಳಿಕೆ’ ನೀಡುವುದಿಲ್ಲ ಮತ್ತು ನ್ಯಾಯಾಲಯದ ಆದೇಶಗಳ ಪ್ರಕಾರ ಅಧಿಕಾರಿಗಳು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ” ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಭರವಸೆ ನೀಡಿದೆ.

ಕಳೆದ ಡಿಸೆಂಬರ್‌ನಲ್ಲಿ ಬಿಜೆಪಿ ಆಡಳಿತವಿರುವ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಮೂರು ದಿನಗಳ ಧರಮ್ ಸಂಸದ್‌ನಲ್ಲಿ ಪಾಲ್ಗೊಂಡ ದುಷ್ಕರ್ಮಿಗಳು ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣಗಳನ್ನು ಮಾಡಿದ್ದರು. ಈ ಭಾಷಣಗಳು ಮುಸ್ಲಿಮರ ನರಮೇಧಕ್ಕೆ ಕರೆ ನೀಡುವವರೆಗೂ ಹೋಗಿತ್ತು. ಇದರ ವಿರುದ್ದ ದೇಶದಾದ್ಯಂತ ಆಕ್ರೋಶ ವ್ಯಕ್ತವಾದ ನಂತರ ಪ್ರಕರಣ ದಾಖಲಾಗಿ ಬಂಧನಗಳು ನಡೆದವು.

ಇದನ್ನೂ ಓದಿ: ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

ಈ ತಿಂಗಳ ಆರಂಭದಲ್ಲಿ, ಕಾರ್ಯಕ್ರಮದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಯತಿ ನರಸಿಂಹಾನಂದ್‌ ತನ್ನ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾನೆ. ಹಿಮಾಚಲ ಪ್ರದೇಶದ ಉನಾದ ‘ಧಾರ್ಮಿಕ ಸಮಾವೇಶ’ದಲ್ಲಿ ಮಾತನಾಡಿದ ದುಷ್ಕರ್ಮಿ, “ಶಸ್ತ್ರಾಸ್ತ್ರಗಳನ್ನು ಎತ್ತಿಕೊಳ್ಳುವಂತೆ ಮತ್ತು ಮುಸ್ಲಿಮರ ಹತ್ಯೆಗಳನ್ನು ಮಾಡುವಂತೆ’ ಹಿಂದೂಗಳಿಗೆ ಬಹಿರಂಗವಾಗಿ ಕರೆ ನೀಡಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...