Homeಮುಖಪುಟಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ 'ಬಾಡಿಗೆದಾರರು' ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

- Advertisement -
- Advertisement -

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए रोड नहीं है” ಮತ್ತು ಇಂಗ್ಲಿಷ್‌ನಲ್ಲಿ “This Road Not Allow Muslim” (ಈ ರಸ್ತೆ ಮುಸ್ಲಿಮರಿಗಾಗಿ ಅಲ್ಲ ಅಥವಾ ಈ ರಸ್ತೆಯಲ್ಲಿ ಮುಸ್ಲಿಮರು ಓಡಾಡುವಂತಿಲ್ಲ) ಎಂದು ಸ್ಪ್ರೇ ಪೇಂಟ್ ಮೂಲಕ ಅಳಿಸಲಾಗದಂತೆ ಬರೆದಿದ್ದರು.

ಈ ಕುರಿತು ಆಲ್ಟ್ ನ್ಯೂಸ್ ಹಂಚಿಕೊಂಡ ವಿಡಿಯೋವನ್ನು ಕೆಳಗೆ ನೋಡಬಹುದು

ಕೋಮು ದ್ವೇಷದ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಆ ಮಹಿಳೆಯರು ಬಿಬಿಸಿ ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಆ ಸಂದರ್ಶನದಲ್ಲಿ ಅವರು ತಮ್ಮ ಕೃತ್ಯವನ್ನು ಬಹಳ ಗಟ್ಟಿಯಾಗಿ ಸಮರ್ಥಿಸಿಕೊಂಡಿದ್ದಾರೆ.

“ಈ ದೇಶ ನಮ್ಮದು, ನಾವು ಏನು ಬೇಕಾದರೂ ಮಾಡಬಹುದು ಎಂದು ಆ ಮಹಿಳೆಯರು ಪ್ರತಿಪಾದಿಸಿದ್ದು, ಮುಸ್ಲಿಮರು ಭಾರತದಲ್ಲಿ ಬಾಡಿಗೆದಾರರು ಮತ್ತು ಅವರು ಹಾಗೆಯೇ ಬದುಕಬೇಕು” ಎಂದು ಹೇಳಿದ್ದಾರೆ.

ಮಹಿಳೆಯರು ದ್ವೇಷ ಬರಹ ಬರೆದಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋದಲ್ಲಿ, ಹಸಿರು ಬಣ್ಣದ ಬಟ್ಟೆ ಧರಿಸಿದ ಮತ್ತು ಕೇಸರಿ ಬಣ್ಣದ ಶಾಲು ಧರಿಸಿ ಇಬ್ಬರು ಮಹಿಳೆಯರು ಸ್ಪ್ರೇ-ಪೇಂಟಿಂಗ್ ಮಾಡುತ್ತಿರುವುದು ಕಂಡುಬಂದರೆ, ಬಿಳಿ ಬಣ್ಣದ ಬಟ್ಟೆ ಧರಿಸಿದ ವ್ಯಕ್ತಿಯೊಬ್ಬರು ವಿಡಿಯೋದ ಕೊನೆಯಲ್ಲಿ ಸ್ವಲ್ಪ ಸಮಯ ಕಾಣಿಸಿಕೊಂಡಿದ್ದಾರೆ. ಉತ್ತರಾಖಂಡ ರಾಜ್ಯದ ನಂಬರ್ ಪ್ಲೇಟ್ ಹೊಂದಿರುವ ಕೆಂಪು ಸ್ವಿಫ್ಟ್ ಡಿಝೈರ್ ಕಾರು ಕೂಡ ವಿಡಿಯೋದಲ್ಲಿ ಗೋಚರಿಸಿದೆ. ಮಹಿಳೆಯೊಬ್ಬರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೋಗಿರುವುವುದು ಕೇಳಿಸುತ್ತದೆ.

ಹಿಂದೂ ರಕ್ಷಾ ದಳದ ಮುಖ್ಯಸ್ಥ ಪಿಂಕಿ ಚೌಧರಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಈ ಸಂದೇಶವು ‘ಜಿಹಾದಿಗಳನ್ನು’ ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ. ಭಾರತದಲ್ಲಿ ಕೇವಲ ಹಿಂದೂಗಳು ಮಾತ್ರ ತೆರಿಗೆ ಪಾವತಿಸುತ್ತಾರೆ ಎಂದು ಯಾವುದೇ ಪುರಾವೆಗಳಿಲ್ಲದೆ ಅವರು ಪ್ರತಿಪಾದಿಸಿದ್ದಾರೆ. “ಹಿಂದೂ ರಕ್ಷಾ ದಳದ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರೆದಿರುವುದು ಸರಿಯಾಗಿದೆ, ಏಕೆಂದರೆ ರಸ್ತೆಗಳು ನಿರ್ಮಾಣವಾಗುವುದು ಕೇವಲ ಹಿಂದೂಗಳ ತೆರಿಗೆಯಿಂದ. ಈ ‘ಜಿಹಾದಿ’ ಜನರು ತೆರಿಗೆ ಕಟ್ಟುವುದಿಲ್ಲ, ಹಾಗಾಗಿ ಅವರಿಗೆ ರಾಷ್ಟ್ರೀಯ ಹೆದ್ದಾರಿಯನ್ನು ಬಳಸುವ ಹಕ್ಕಿಲ್ಲ. ಮುಸ್ಲಿಮರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲು ಬಿಡುವುದಿಲ್ಲ,” ಎಂದು ಅವರು ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಪಿಂಕಿ ಚೌಧರಿ ಅವರು ತಮ್ಮ ಹಳೆಯ ವಾದವನ್ನೇ ಮುಂದುವರಿಸುತ್ತಾ, ಮತ್ತೊಂದು ವಿಡಿಯೋ ಹೇಳಿಕೆಯಲ್ಲಿ ಕೋಮು ಪ್ರಚೋದಕ ಮಾತುಗಳನ್ನು ಆಡಿದ್ದಾರೆ. ಅವರ ಮಾತುಗಳ ಸಾರಾಂಶ ಇಲ್ಲಿದೆ:

“ಭಾರತದಲ್ಲಿ ಎಷ್ಟು ಶೇಕಡ ಮುಸ್ಲಿಮರಿದ್ದಾರೆ ಮತ್ತು ಅವರು ಎಷ್ಟು ತೆರಿಗೆ ಕಟ್ಟುತ್ತಾರೆ ಎಂಬುವುದು ಜನರಿಗೆ ತಿಳಿಯಬೇಕು. ನಾವು ಕಟ್ಟುವ ತೆರಿಗೆಯ ಲಾಭವನ್ನು ಈ ‘ಜಿಹಾದಿಗಳು’ ಪಡೆಯುತ್ತಿರುವುದರ ಬಗ್ಗೆ ಸರ್ಕಾರಕ್ಕೆ ಚಿಂತೆಯಿರಬೇಕು. ದೇವಸ್ಥಾನಗಳ ಕಾಣಿಕೆ ಹಣ ಸರ್ಕಾರಕ್ಕೆ ಹೋಗುತ್ತದೆ, ಆದರೆ ಮಸೀದಿ ಮತ್ತು ಮದರಸಾಗಳಿಂದ ಎಷ್ಟು ಹಣ ಬರುತ್ತದೆ? ದೇವಸ್ಥಾನಗಳಿಂದ ಹಣ ಹರಿಯುತ್ತದೆ, ಆದರೆ ಅದರ ಸೌಲಭ್ಯಗಳನ್ನು ಇವರು ಪಡೆಯುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಮುಸ್ಲಿಮರಿಗೆ ಸರ್ಕಾರಿ ಸೌಲಭ್ಯಗಳನ್ನು ನಿರಾಕರಿಸಬೇಕು. ನಾವು ತೆರಿಗೆ ಕಟ್ಟುತ್ತೇವೆ ಮತ್ತು ಹಿಂದೂಗಳ ಮತಗಳಿಂದಲೇ ಸರ್ಕಾರಗಳು ರಚನೆಯಾಗುತ್ತವೆ, ಆದರೆ ಎಲ್ಲಾ ಲಾಭಗಳು ಮುಸ್ಲಿಮರಿಗೆ ಹೋಗುತ್ತಿವೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ವಿಡಿಯೋವನ್ನು ಕೆಳಗಡೆ ನೋಡಬಹುದು

“ಈ ಕೃತ್ಯದ ಕುರಿತು ವಿಚಾರಿಸಲು ನಾವು ಸಹರಾನ್‌ಪುರ (ಗ್ರಾಮಾಂತರ) ಎಸ್‌ಪಿ ಸಾಗರ್ ಜೈನ್ ಅವರೊಂದಿಗೆ ಮಾತನಾಡಿದ್ದು, ಅವರು ಫೆಬ್ರವರಿ 27ರ ಬೆಳಗ್ಗೆಯೇ ಈ ಬಗ್ಗೆ ಎಫ್‌ಐಆರ್ ದಾಖಲಾಗಿರುವುದನ್ನು ಖಚಿತಪಡಿಸಿದ್ದಾರೆ. “ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಹೆಚ್‌ಎಐ) ಅಧಿಕಾರಿಯೊಬ್ಬರಿಂದ ನಮಗೆ ದೂರು ಬಂದಿದ್ದು, ಅದರ ಆಧಾರದ ಮೇಲೆ ನಾವು ಹಿಂದೂ ರಕ್ಷಾ ದಳದ ಕೆಲವು ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಈ ಕೃತ್ಯ ಎಸಗಿದವರನ್ನು ಪತ್ತೆಹಚ್ಚುವ ಕೆಲಸ ನಡೆಯುತ್ತಿದೆ. ಅವರು ಯಾರೆಂದು ಗುರುತಿಸಿದ ನಂತರ, ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂಬುವುದಾಗಿ ತಿಳಿಸಿದ್ದಾರೆ ಎಂದು ಆಲ್ಟ್ ನ್ಯೂಸ್ ಮಾ.2ರಂದು ವರದಿ ಮಾಡಿದೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 353(2) ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ, ಇದು ಧಾರ್ಮಿಕ, ಜನಾಂಗೀಯ, ಭಾಷಾ, ಪ್ರಾದೇಶಿಕ ಗುಂಪುಗಳು ಅಥವಾ ಜಾತಿಗಳ ನಡುವೆ ದ್ವೇಷ, ಅಥವಾ ಕೆಟ್ಟ ಇಚ್ಛೆಯನ್ನು ಪ್ರಚೋದಿಸುವ ಉದ್ದೇಶದಿಂದ ಸುಳ್ಳು ಮಾಹಿತಿ, ವದಂತಿಗಳು ಅಥವಾ ಆತಂಕಕಾರಿ ವಿಷಯಗಳ ಪ್ರಕಟಣೆ ಅಥವಾ ಪ್ರಸರಣವನ್ನು ಅಪರಾಧೀಕರಿಸುತ್ತದೆ. ಈ ಅಪರಾಧವು ಗುರುತಿಸಬಹುದಾದ ಮತ್ತು ಜಾಮೀನು ರಹಿತವಾಗಿದೆ ಎಂದು ಆಲ್ಟ್ ನ್ಯೂಸ್ ಉಲ್ಲೇಖಿಸಿದೆ.

ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯು ಎನ್‌ಹೆಚ್‌ಎಐ ಅಧಿಕಾರಿಯನ್ನು ಸುನಿಲ್ ಕುಮಾರ್ ಎಂದು ಗುರುತಿಸಿದೆ.

ಈ ಘಟನೆಯ ವಿಡಿಯೋ ವೈರಲ್ ಆದ ಮರುದಿನವೇ ಬಿಬಿಸಿ ಪತ್ರಕರ್ತ ದಿಲ್‌ನವಾಜ್ ಪಾಶಾ ದ್ವೇಷ ಬರಹ ಬರೆದಿದ್ದಾರೆ ಎನ್ನಲಾದ ಇಬ್ಬರು ಮಹಿಳೆಯರೊಂದಿಗೆ ಮಾತನಾಡಿದ್ದು, ಅವರಲ್ಲಿ ಒಬ್ಬರು ತಮ್ಮನ್ನು ಹಿಂದೂ ರಕ್ಷಾ ದಳದ ಜಿಲ್ಲಾ ಮುಖ್ಯಸ್ಥೆ ಶ್ರದ್ಧಾ ಸಿಂಗ್ ಎಂದು ಪರಿಚಯಿಸಿಕೊಂಡಿದ್ದಾರೆ. ಸಂದರ್ಶನದ ವೇಳೆ ಈ ಇಬ್ಬರೂ ಮಹಿಳೆಯರು ತಾವು ಮಾಡಿದ ಕೆಲಸದ ಬಗ್ಗೆ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ, ಬದಲಾಗಿ ತಾವು ಮಾಡಿದ್ದು ಸರಿ ಎಂಬಂತೆ ಉದ್ಧಟತನದ ಸಮರ್ಥನೆ ನೀಡಿದ್ದಾರೆ.

“ಹೌದು, ನಾವೇ ಆ ಗೋಡೆ ಬರಹಗಳನ್ನು ಬರೆದಿದ್ದೇವೆ… ಮುಸ್ಲಿಮರು ತೆರಿಗೆ ಪಾವತಿಸುವುದಿಲ್ಲ” ಎಂದು ಶ್ರದ್ಧಾ ಸಿಂಗ್ ಹೇಳಿದ್ದಾರೆ. ಮುಸ್ಲಿಮರು ಕೂಡ ಜಿಎಸ್‌ಟಿ ಅಡಿಯಲ್ಲಿ ಪರೋಕ್ಷ ತೆರಿಗೆಗಳನ್ನು ಪಾವತಿಸುತ್ತಾರೆ ಎಂದು ಪತ್ರಕರ್ತರು ತಿಳಿಸಿದಾಗ, ಅದಕ್ಕೆ ಉತ್ತರಿಸಿದ ಸಿಂಗ್, “ಹಿಂದೂಗಳೂ ತೆರಿಗೆ ಕಟ್ಟುತ್ತಾರೆ. ಅವರು ಕಷ್ಟಪಟ್ಟು ಕೆಲಸ ಮಾಡಿ ತೆರಿಗೆ ಪಾವತಿಸುತ್ತಾರೆ… ಆದರೆ ಮುಸ್ಲಿಮರು ತೆರಿಗೆ ಕಟ್ಟುವುದಿಲ್ಲ” ಎಂದು ವಾದಿಸಿದ್ದಾರೆ. ಸಮಾಜದ ಶಾಂತಿ ಮತ್ತು ಸೌಹಾರ್ದತೆಯನ್ನು ಕೆಡಿಸುವ ಬಗ್ಗೆ ತಮಗೆ ಯಾವುದೇ ಭಯವಿಲ್ಲ ಎಂದು ಪುನರುಚ್ಚರಿಸಿದ ಸಿಂಗ್, ಈ ದೇಶ ತಮ್ಮದಾಗಿರುವುದರಿಂದ ತಮಗೆ ಇಷ್ಟ ಬಂದಿದ್ದನ್ನು ಮಾಡಬಹುದು ಮತ್ತು ಯಾರಿಗೆ ಇದು ಇಷ್ಟವಿಲ್ಲವೋ ಅವರು ಪಾಕಿಸ್ತಾನಕ್ಕೆ ಹೋಗಬಹುದು” ಎಂದು ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ.

“ಮುಸ್ಲಿಮರು ಈ ದೇಶದಲ್ಲಿ ಬಾಡಿಗೆದಾರರಿದ್ದಂತೆ; ಅವರು ಹಾಗೆಯೇ ಬದುಕಬೇಕು. ಅವರಿಗೆ ಏನನ್ನೂ ಮಾಡಲು ಅವಕಾಶ ನೀಡಬಾರದು” ಎಂದು ಮತ್ತೊಬ್ಬ ಮಹಿಳೆ ಹೇಳಿದ್ದಾರೆ. ತಮ್ಮ ಮೇಲೆ ಎಫ್‌ಐಆರ್ ದಾಖಲಾಗುವ ಬಗ್ಗೆ ತಮಗೆ ಯಾವುದೇ ಭಯವಿಲ್ಲ ಎಂದು ಹೇಳಿದ ಅವರು, ತಾವು ‘ಸರಿಯಾದ ಕೆಲಸ’ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ಹಿಂದೂ ರಕ್ಷಾ ದಳವು ತಮ್ಮ ಬೆನ್ನಿಗೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ. “ಈ ದೇಶ ನಮ್ಮದು, ಇಲ್ಲಿ ನಮಗೆ ಇಷ್ಟ ಬಂದಿದ್ದನ್ನು ನಾವು ಮಾಡುತ್ತೇವೆ” ಎಂದು ಅವರು ಉದ್ಧಟತನದಿಂದ ಮಾತನಾಡಿದ್ದಾರೆ.

ಬಿಬಿಸಿ ಪತ್ರಕರ್ತ (ಮುಸ್ಲಿಂ ಸಮುದಾಯದವರು) ತಾನು ಮನೆಗೆ ಮರಳಲು ಅದೇ ಹೆದ್ದಾರಿಯನ್ನು ಬಳಸಬೇಕಾಗುತ್ತದೆ ಎಂದು ಹೇಳಿದಾಗ, ಆ ಮಹಿಳೆ ಹೀಗೆ ಉತ್ತರಿಸಿದ್ದಾರೆ: “ನೀವು ರಸ್ತೆಯ ಕೆಳಗಿನಿಂದ ಹೋಗಿ. ನಿಮಗಾಗಿ ಪ್ರತ್ಯೇಕವಾದ ರಸ್ತೆಯನ್ನು ನೀವೇ ಮಾಡಿಕೊಂಡು ಅದರ ಮೂಲಕ ಹೋಗಿ.”

ಮಹಿಳೆಯರೊಂದಿಗೆ ಪತ್ರಕರ್ತ ನಡೆಸಿದ ಮಾತುಕತೆಯ ವಿಡಿಯೋವನ್ನು ಕೆಳಗಡೆ ನೋಡಬಹುದು

View this post on Instagram

A post shared by Dilnawaz Pasha (@dilnawazpasha)

COURTESY : altnews.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...