‘ಕರ್ನಾಟಕ ಹೈಕೋರ್ಟ್‌ನಲ್ಲೇ ನಮಾಜ್:2022’ ಎಂಬ ಶೀರ್ಷಿಕೆಯೊಂದಿಗೆ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ವಿಡಿಯೋ ಪ್ರಸಾರ ಮಾಡಿದ ಆರೋಪದ ಮೇಲೆ ಬಲಪಂಥೀಯ ವಿಚಾರ ಪ್ರತಿಪಾದಿಸುವ ಸಂವಾದ ಯೂಟ್ಯೂಬ್ ಚಾನೆಲ್ ಮೇಲೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಬಿಜೆಪಿ ಮತ್ತು ಆರ್‌ಎಸ್ಎಸ್ ಬೆಂಬಲಿಸುವ, ಹಿಂದುತ್ವ ಪ್ರತಿಪಾದಿಸುವ ಹಾಗೂ ಅಲ್ಪಸಂಖ್ಯಾತರ ವಿರುದ್ಧ ಕಿಡಿಕಾರುವ ಸಂವಾದ ಯೂಟ್ಯೂಬ್ ಚಾನೆಲ್ ಮತ್ತು ಫೇಸ್‌ಬುಕ್ ಪೇಜ್‌ನಲ್ಲಿ ಮೇ 14 ರಂದು ‘ಕರ್ನಾಟಕ ಹೈಕೋರ್ಟ್‌ನಲ್ಲೇ ನಮಾಜ್:2022’ ಎಂಬ ಶೀರ್ಷಿಕೆಯೊಂದಿಗೆ 1.48 ನಿಮಿಷದ ವಿಡಿಯೋ ಒಂದನ್ನು ಪ್ರಸಾರ ಮಾಡಿತ್ತು. ಅದು ಎಲ್ಲೆಡೆ ವೈರಲ್ ಆಗಿ ಎರಡು ಸಮುದಾಯಗಳ ನಡುವೆ ದ್ವೇಷಕ್ಕೆ ಕಾರಣವಾಗಿತ್ತು.
ನ್ಯಾಯಾಲಯದ ಆವರಣಕ್ಕೆ ಅನುಮತಿ ಇಲ್ಲದೆ ಪ್ರವೇಶ ಮಾಡಿ ವಿಡಿಯೋ ಚಿತ್ರೀಕರಣ ಮಾಡಿದೆ ಎಂದು ಆರೋಪಿಸಿ ಕರ್ನಾಟಕ ಹೈಕೋರ್ಟ್‌ನ ಆಡಳಿತ ವಿಭಾಗದ ಉಸ್ತುವಾರಿ ರಿಜಿಸ್ಟ್ರಾರ್ ಎನ್.ಜಿ ದಿನೇಶ್‌ರವರು ಮೇ 16ರಂದು ದೂರು ನೀಡಿದ್ದರು. ಅದರ ಆಧಾರದಲ್ಲಿ ವಿಧಾನಸೌಧ ಪೊಲೀಸರು ಐಪಿಸಿ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮ ಪ್ರವೇಶ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣ) ಅಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಸದ್ಯ ಈ ವಿಡಿಯೋ ಸಂವಾದ ಯೂಟ್ಯೂಬ್ ಮತ್ತು ಫೇಸ್‌ಬುಕ್‌ನಲ್ಲಿ ಡಿಲೀಟ್ ಆಗಿದ್ದರೂ ಸಹ ಇದೇ ವಿಡಿಯೋವನ್ನು ವಿಜಯವಾಣಿ ಪತ್ರಿಕೆಯ ಯೂಟ್ಯೂಬ್ ಚಾನೆಲ್‌ನಲ್ಲಿಯೂ ಸಹ ಪ್ರಕಟಿಸಲಾಗಿದೆ. ಅಲ್ಲದೆ ಇಂಡಿಯಾ ಟಿವಿ, ನಮೋ ಟಿವಿ ಸೇರಿ ಹಲವು ಫೇಸ್‌ಬುಕ್‌ಗಳಲ್ಲಿ ಈ ವಿಡಿಯೋ ಹರಿದಾಡುತ್ತಿದೆ.
ಇದನ್ನೂ ಓದಿ: ತ್ರಿಶೂಲವನ್ನು ನೀಡುತ್ತೇವೆ, ಪಡೆಯುತ್ತೇವೆ, ಬಳಸುತ್ತೇವೆ: ಪೊಲೀಸರ ಎದುರೇ ಬಜರಂಗದಳ ಕಾರ್ಯಕರ್ತರ ಘೋಷಣೆ