Homeಮುಖಪುಟಹತ್ರಾಸ್: ಸಂತ್ರಸ್ತ ಯುವತಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ

ಹತ್ರಾಸ್: ಸಂತ್ರಸ್ತ ಯುವತಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ

ಇಂತಹ ಮೂರ್ಖತನದ, ಜಾತಿವಾದಿ, ಹುಚ್ಚುಚ್ಚಾಗಿ ಮಾತನಾಡುವವರು ಬಿಜೆಪಿಯಲ್ಲಿ ಮಾತ್ರ ಯಾಕೆ ಸಿಗುತ್ತಾರೆ ಎಂದು ಮಥುರಾದ ಮಾಜಿ ಸಂಸದ ಜಯಂತ್ ಚೌಧರಿ ಕಿಡಿಕಾರಿದ್ದಾರೆ.

- Advertisement -
- Advertisement -

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಹತ್ರಾಸ್‌‌ನ ದಲಿತ ಯುವತಿಯ ಬಗ್ಗೆ ಉತ್ತರ ಪ್ರದೇಶದ ಬರಾಬಂಕಿಯ ಬಿಜೆಪಿ ನಾಯಕನೊಬ್ಬ ವಿವಾದಾತ್ಮಕ ಹೇಳಿಕೆ ನೀಡಿದ್ದು, “ಯುವತಿಯೇ ತನ್ನ ಗೆಳೆಯನನ್ನು ಹೊಲಕ್ಕೆ ಕರೆಸಿಕೊಂಡಿರಬೇಕು, ಈ ಸಮಯದಲ್ಲಿ ಅವರು ಸಿಕ್ಕಿಬಿದ್ದಿರಬಹುದು” ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ವಿಡಿಯೋದಲ್ಲಿ ನವಾಬ್‌ಗಂಜ್ ಪುರಸಭೆಯ ಮಾಜಿ ಅಧ್ಯಕ್ಷರಾಗಿರುವ ರಂಜೀತ್ ಶ್ರೀವಾಸ್ತವ (67) ಘಟನೆಯಲ್ಲಿ ಅತ್ಯಾಚಾರ ನಡೆದಿಲ್ಲ ಎಂದು ಪ್ರತಿಪಾದಿಸಿದ್ದಾರೆ. “ಅಂತಹ” ಯುವತಿಯರ ಮೃತದೇಹಗಳು ಹೊಲಗಳಲ್ಲಿ ಮಾತ್ರ ಏಕೆ ಕಂಡುಬರುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

“ಸಾಮಾನ್ಯವಾಗಿ ಹೊಲಗಳಲ್ಲಿ ಹೀಗೆಯೆ ನಡೆಯುತ್ತದೆ. ಈ ರೀತಿ ಸಾಯುವವರು ಹೊಲಗಳಲ್ಲಿ, ಕಾಲುವೆಗಳಲ್ಲಿ, ಕಾಡಿನಲ್ಲಿ ಯಾಕೆ ಸಿಗುತ್ತಾರೆ. ಈ ಯುವತಿಯೇ ತನ್ನ ಗೆಳೆಯನನ್ನು ಹೊಲಕ್ಕೆ ಕರೆಸಿಕೊಂಡಿರಬೇಕು ಎಂದು ಶ್ರೀವಾಸ್ತವ ವಿಡಿಯೋದಲ್ಲಿ ಹೇಳಿದ್ದಾರೆ.

ಶ್ರೀವಾಸ್ತವ ಮೂವರು ಗಂಡು ಮಕ್ಕಳ ತಂದೆಯಾಗಿದ್ದು, ಅವರಲ್ಲಿ ಒಬ್ಬ ಉತ್ತರ ಪ್ರದೇಶ ಬಿಜೆಪಿಯ ಯುವ ವಿಭಾಗದ ಸದಸ್ಯರಾಗಿದ್ದಾರೆ.

ಶ್ರೀವಾಸ್ತವ ಅವರು ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಮಥುರಾದ ಮಾಜಿ ಸಂಸದ ಜಯಂತ್ ಚೌಧರಿ, “ಇಂತಹ ಮೂರ್ಖತನದ, ಜಾತಿವಾದಿ, ಹುಚ್ಚುಚ್ಚಾಗಿ ಮಾತನಾಡುವವರು ಬಿಜೆಪಿಯಲ್ಲಿ ಮಾತ್ರ ಯಾಕೆ ಸಿಗುತ್ತಾರೆ” ಎಂದು ಕಿಡಿಕಾರಿದ್ದಾರೆ.

ಮೇವನ್ನು ಸಂಗ್ರಹಿಸಲು ಹೊಲಕ್ಕೆ ಹೋಗಿದ್ದ ದಲಿತ ಯುವತಿಯನ್ನು ನಾಲ್ವರು ಮೇಲ್ಜಾತಿಯ ಯುವಕರು ಅತ್ಯಾಚಾರ ಮಾಡಿ ಚಿತ್ರಹಿಂಸೆ ನೀಡಿದ್ದರು. ಇದರಿಂದ ಯುವತಿಯ ಬೆನ್ನು ಮೂಳೆ, ಕುತ್ತಿಗೆಯ ಮೂಳೆಗಳು ಮುರಿದು ಆಕೆ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದರು. ದೆಹಲಿ ಆಸ್ಪತ್ರೆಯಲ್ಲೇ ಆಕೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.ಈ ಘಟನೆ ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು. ಸುಪ್ರೀಂ ಕೋರ್ಟ್‌ ಘಟನೆಯನ್ನು “ಭಯಾನಕ” ಎಂದು ಕರೆದಿತ್ತು.

ಇದನ್ನೂ ಓದಿ: ಪ್ರತಿಭಟನಾ ರ್‍ಯಾಲಿಯಲ್ಲಿ ಭಾಗವಹಿಸದಂತೆ ಜಿಗ್ನೇಶ್ ಮೇವಾನಿಗೆ ಗೃಹ ಬಂಧನ

ವಿಡಿಯೋ ನೋಡಿ: ನಿಜವಾಗಿಯೂ ರಾಮರಾಜ್ಯ ಬಂದರೆ ಹೇಗಿರುತ್ತದೆ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...