Homeಮುಖಪುಟಹತ್ರಾಸ್ ಪ್ರಕರಣ ಪಕ್ಷಕ್ಕೆ ರಾಜಕೀಯ ಹಾನಿಯುಂಟುಮಾಡಿದೆ: BJP ದಲಿತ ಸಂಸದರ ಉವಾಚ

ಹತ್ರಾಸ್ ಪ್ರಕರಣ ಪಕ್ಷಕ್ಕೆ ರಾಜಕೀಯ ಹಾನಿಯುಂಟುಮಾಡಿದೆ: BJP ದಲಿತ ಸಂಸದರ ಉವಾಚ

ಈ ದುರ್ಘಟನೆ ಅಕ್ಟೋಬರ್ 28 ರಿಂದ ಪ್ರಾರಂಭವಾಗುವ ಬಿಹಾರ ಚುನಾವಣೆಯಲ್ಲಿ ಪಕ್ಷದ ಭವಿಷ್ಯವನ್ನು ಹಾಳುಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಬಿಜೆಪಿಯ ದಲಿತ ಸಂಸದರೊಬ್ಬರು ಎಚ್ಚರಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮೇಲ್ಜಾತಿ ಯುವಕರಿಂದ ಅತ್ಯಾಚಾರ ಮತ್ತು ಕೊಲೆಗಿಡಾದ ದಲಿತ ಯುವತಿಯ ಪ್ರಕರಣ ದೇಶದಾದ್ಯಂತ ತೀವ್ರ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿದೆ. ಈ ಅಮಾನವೀಯ ಘಟನೆ ದೇಶದ ಲಕ್ಷಾಂತರ ಜನಕ್ಕೆ ಆಘಾತ ತಂದಿದ್ದರೆ, ಉತ್ತರ ಪ್ರದೇಶದ ಬಿಜೆಪಿಯ ದಲಿತ ಸಂಸದರು ಮಾತ್ರ ಇದು ಪಕ್ಷಕ್ಕೆ ರಾಜಕೀಯ ಹಾನಿಯುಂಟುಮಾಡಿದೆ ಎಂದಿದ್ದಾರೆ!

ಉತ್ತರ ಪ್ರದೇಶದ ಆಡಳಿತ ಪಕ್ಷ ಬಿಜೆಪಿಯ ಹಲವು ದಲಿತ ಸಂಸದರು ಈ ಘಟನೆ ಆಡಳಿತದ ಚಿತ್ರಣವನ್ನು ದುರ್ಬಲಗೊಳಿಸಿದೆ. ಜೊತೆಗೆ ರಾಜಕೀಯವಾಗಿ ಹಾನಿಯುಂಟು ಮಾಡುತ್ತದೆ ಎಂದಿದ್ದಾರೆ. ಇದರ ಜೊತೆಗೆ ರಾಜ್ಯ ಸರ್ಕಾರದ ಆಡಳಿತದ ಮೇಲೆ ವಿಶ್ವಾಸ ವ್ಯಕ್ತಪಡಿಸಿರುವ ದಲಿತ ಸಂಸದರು ಪೊಲೀಸರಲ್ಲಿ ಆಳವಾಗಿ ಬೇರೂರಿರುವ ಜಾತಿವಾದ ಮತ್ತು ಭ್ರಷ್ಟಾಚಾರವೇ ಘಟನೆಗೆ ಕಾರಣ ಎಂದು ದೂಷಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉತ್ತರ ಪ್ರದೇಶ ಬಿಜೆಪಿಯ ಕನಿಷ್ಠ ನಾಲ್ಕು ದಲಿತ ಸಂಸದರು ಮೃತ ಸಂತ್ರಸ್ತೆಯ ಕುಟುಂಬವನ್ನು ಒಳಗೊಳ್ಳದೆ ಅವಸರದಲ್ಲಿ ಮೃತದೇಹವನ್ನು ದಹನ ಮಾಡಿದ ಪೊಲೀಸ್ ಕ್ರಮವನ್ನು “ಖಂಡನೀಯ” ಎಂದಿದ್ದಾರೆ. ಜೊತೆಗೆ ಪ್ರಕರಣದ ಸಮರ್ಪಕ ತನಿಖೆಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಇತ್ತೀಚಿನವರೆಗೂ ಬಿಜೆಪಿಯ ಎಸ್‌ಸಿ ಮೋರ್ಚಾದ ಮುಖ್ಯಸ್ಥರಾಗಿದ್ದ ಕೌಶಂಬಿ ಸಂಸದ ವಿನೋದ್ ಕುಮಾರ್ ಸೋಂಕರ್ ಹೇಳುವಂತೆ, “ಖಂಡಿತವಾಗಿಯೂ, ಈ ಘಟನೆಯು ರಾಜ್ಯ ಮತ್ತು ಸರ್ಕಾರದ ಚಿತ್ರಣವನ್ನು ದುರ್ಬಲಗೊಳಿಸಿದೆ. ಜನರನ್ನು ಸರ್ಕಾರದ ವಿರುದ್ಧ ಕೆರಳಿಸಿದೆ. ಇದು ರಾಜಕೀಯವಾಗಿ ನಮಗೆ ಹಾನಿಕಾರಕವಾಗಿದೆ. ಆದರೆ ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ದೊರಕಿಸಲು ರಾಜ್ಯ ಸರ್ಕಾರ ಅತ್ಯುತ್ತಮ ಪ್ರಯತ್ನ ಮಾಡುತ್ತಿದೆ” ಎಂದಿದ್ದಾರೆ. ಘಟನೆಗೆ ಪೊಲೀಸ್ ಅಧಿಕಾರಶಾಹಿ ವರ್ಗದ ಭ್ರಷ್ಟಾಚಾರ ಮತ್ತು ಜಾತಿವಾದವೇ ಕಾರಣ ಎಂದು ಸೋಂಕರ್ ಆರೋಪಿಸಿದ್ದಾರೆ.

“ಇದು ಕಳೆದ ಕೆಲವು ವರ್ಷಗಳಿಂದ ಸೃಷ್ಠಿಯಾಗಿರುವ ಸಮಸ್ಯೆಯಲ್ಲ, ಇದು ತುಂಬಾ ಸಮಯದಿಂದಲೂ ಇರುವಂತಹದ್ದು. ರಾಜ್ಯದಲ್ಲಿ ಹಿಂದಿನ ಎಸ್‌ಪಿ ಮತ್ತು ಬಿಎಸ್‌ಪಿ ಸರ್ಕಾರಗಳು ಜಾತಿ ಹೆಸರಿನಲ್ಲಿ ಪೊಲೀಸ್ ವ್ಯವಸ್ಥೆಯಲ್ಲಿ ಮತ್ತು ಅಧಿಕಾರಶಾಹಿಯಲ್ಲಿ ಹುದ್ದೆಗಳನ್ನು ವಿತರಿಸಿದ್ದವು. ವಾಸ್ತವವಾಗಿ, ಈ ಪಕ್ಷಗಳಿಗೆ ಇನ್ನೂ ನಿಷ್ಠರಾಗಿರುವವರು ಬಿಜೆಪಿ ಮತ್ತು ಈಗಿನ ಸರ್ಕಾರವನ್ನು ದೂಷಿಸುತ್ತಿದ್ದಾರೆ ಎಂದು ನಮ್ಮಲ್ಲಿ ಕೆಲವರು ಮುಖ್ಯಮಂತ್ರಿಗೆ ತಿಳಿಸಿದ್ದಾರೆ ”ಎಂದು ಸಂಸದ ಸೋಂಕರ್‌ ಹೇಳಿದ್ದಾರೆ.

ಇನ್ನು ಹೆಸರು ಹೇಳಲು ಇಚ್ಚಿಸದ ಮತ್ತೊಬ್ಬ ದಲಿತ ಸಂಸದ, ಈ ದುರ್ಘಟನೆ ಅಕ್ಟೋಬರ್ 28 ರಿಂದ ಪ್ರಾರಂಭವಾಗುವ ಬಿಹಾರ ಚುನಾವಣೆಯಲ್ಲಿ ಪಕ್ಷದ ಭವಿಷ್ಯವನ್ನು ಹಾಳುಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

ಮೋಹನ್ ಲಾಲ್‌ಗಂಜ್ ಸಂಸದ ಕೌಶಲ್ ಕಿಶೋರ್ “ಯುಪಿ ಪೊಲೀಸರು ಬಡವರು ಮತ್ತು ದಲಿತರಿಗೆ ಕಿರುಕುಳ ನೀಡುತ್ತಿದ್ದಾರೆ. ಅವರು ತಮ್ಮ ವಿರುದ್ಧದ ದೌರ್ಜನ್ಯ ಪ್ರಕರಣಗಳನ್ನು ಮುಚ್ಚಿಹಾಕುತ್ತಾರೆ. ಅಂತಹ ಪೊಲೀಸರಿಗೆ ಶಿಕ್ಷೆಯಾಗುವಂತೆ ಸರ್ಕಾರ ಮಾಡಬೇಕು. ಈ ಸರ್ಕಾರ ಅಂತಹ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

PC: India Today

ಇನ್ನು ಬರಾಬಂಕಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರು ಈ ಘಟನೆಯ ಬಗ್ಗೆ ರಾಜ್ಯದ ದಲಿತರು ತುಂಬಾ ಅಸಮಾಧಾನಗೊಂಡಿದ್ದಾರೆ ಎಂದಿದ್ದಾರೆ. “ಈ ಕೃತ್ಯವನ್ನು ಖಂಡಿಸಬೇಕಾಗಿದೆ. ಅದು ಕೇವಲ ದಲಿತ ಯುವತಿ ಎಂಬ ಕಾರಣದಿಂದಲ್ಲ, ಇಂತಹ ದುರ್ಘಟನೆ ಯಾರಿಗೂ ಸಂಭವಿಸಬಾರದು. ಅಪರಾಧಿಗಳು ಪೊಲೀಸರೇ ಆಗಿರಲಿ ಅಥವಾ ಬೇರೆಯವರೇ ಆಗಿರಲಿ ಸರ್ಕಾರವು ಯಾರನ್ನೂ ಬಿಡುವುದಿಲ್ಲ ಎಂಬ ಖಾತ್ರಿ ನನಗಿದೆ” ಎಂದಿದ್ದಾರೆ.

“ಸಂತ್ರಸ್ತರು ದಲಿತರಾಗಿದ್ದಾಗ ಅಥವಾ ಹಿಂದುಳಿದ ಜಾತಿಯವರಾಗಿದ್ದಾಗ, ನ್ಯಾಯ ಸಿಗುವುದು ಮತ್ತು ವ್ಯವಸ್ಥೆ ಕ್ರಮಗೊಳ್ಳು ವುದು ಕೆಲವೊಮ್ಮೆ ವಿಳಂಬವಾಗುತ್ತದೆ. ಏಕೆಂದರೆ ಅವರು ದುರ್ಬಲರು ಎಂಬ ಕಾರಣಕ್ಕೆ. ಆದರೆ  ಅಪರಾಧಿಗಳಿಗೆ ಶಿಕ್ಷೆಯಾಗದಿದ್ದರೆ ಸರ್ಕಾರ ತುಂಬಾ ನಷ್ಟವನ್ನು ಅನುಭವಿಸುತ್ತದೆ” ಎಂದು ಘಟನೆಯ ತೀವ್ರತೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಉತ್ತರ ಪ್ರದೇಶ ಸರ್ಕಾರ ಪ್ರಕರಣ ಕುರಿತು ಮೂರು ಮಂದಿ ಸದಸ್ಯರ ಎಸ್‌ಐಟಿ ತಂಡವನ್ನು ರಚನೆ ಮಾಡಿದ್ದು, 7 ದಿನಗಳಲ್ಲಿ ವರದಿ ನೀಡುವಂತೆ ಆದೇಶಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಸೂಚನೆ ಮೇರೆಗೆ ಈ ಎಸ್‌ಐಟಿ ತಂಡ ರಚಿಸಲಾಗಿದ ಎಂದು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ತಿಳಿಸಿದ್ದಾರೆ.

ದೇಶದೆಲ್ಲೆಡೆ ಪ್ರತಿಭಟನೆ ಮತ್ತು ವ್ಯಾಪಕ ಆಕ್ರೋಶವನ್ನು ಎದುರಿಸುತ್ತಿರುವ ಉತ್ತರ ಪ್ರದೇಶ ರಾಜ್ಯವು ಈ ಪ್ರಕರಣದ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯವನ್ನು ಸ್ಥಾಪಿಸುವುದಾಗಿ ಹೇಳಿದೆ. ಇದಲ್ಲದೆ, ಸಂತ್ರಸ್ತೆಯ ಕುಟುಂಬಕ್ಕೆ 25 ಲಕ್ಷ ರೂ.ಗಳ ಪರಿಹಾರ, ಕುಟುಂಬ ಸದಸ್ಯರಿಗೆ ಸರ್ಕಾರಿ ಕೆಲಸ, ಮತ್ತು ರಾಜ್ಯ ನಗರಾಭಿವೃದ್ಧಿ ಏಜೆನ್ಸಿಯ ಅಡಿಯಲ್ಲಿ ಹತ್ರಾಸ್ ನಗರದಲ್ಲಿ ಒಂದು ಮನೆ ಕೊಡುವುದಾಗಿ ಘೋಷಿಸಿದೆ.

ದಲಿತ ಯುವತಿ ಮೇಲೆ ನಡೆದ ಕ್ರೂರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಥವಾ ವಿಶೇಷ ತನಿಖಾ ತಂಡ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಕೂಡ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಲಾಗಿದೆ ಎಂದಿದೆ.

Hathras gangrape: Section 144 imposed ahead of Priyanka, Rahul Gandhi's visit
PC:Scroll.in

ಒಟ್ಟಾರೆ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರಲು ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಕಾರಣವಾಗಿದೆ. ತಮ್ಮದೆ ಪಕ್ಷದ ನಾಯಕರು ರಾಜ್ಯದ ಜನತೆ ಸರ್ಕಾರದ ಮೇಲೆ  ವಿಶ್ವಾಸ ಕಳೆದುಕೊಳ್ಳುತ್ತಿರುವುದು ಮತ್ತು ಮುಂದಿನ ಚುನಾವಣೆಯಲ್ಲಿ ಪರಿಣಾಮ ಬೀರುತ್ತದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿ, ದೇಶದ ಜನತೆ ಹತ್ರಾಸ್ ಪ್ರಕರಣದ ಮೇಲೆ ಕಣ್ಣಿಟ್ಟಿರುವಾಗ, ಆರೋಪಿಗಳಿಗೆ ಸರಿಯಾದ ಶಿಕ್ಷೆ ನೀಡುವ ಕೆಲಸ ಆಗಬೇಕಿದೆ. ಮತ್ತೆ ಇಂತಹ ದುರ್ಘಟನೆಗಳು ನಡೆಯದ ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವ ಅಗತ್ಯ ಸರ್ಕಾರದ ಮೇಲಿದೆ.


ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...