Homeಮುಖಪುಟಹತ್ರಾಸ್ ಪ್ರಕರಣ: ಸಿಎಎ ವಿರೋಧಿ ಮಹಿಳಾ ನಾಯಕಿಯರಿಗೆ ನೋಟಿಸ್!

ಹತ್ರಾಸ್ ಪ್ರಕರಣ: ಸಿಎಎ ವಿರೋಧಿ ಮಹಿಳಾ ನಾಯಕಿಯರಿಗೆ ನೋಟಿಸ್!

- Advertisement -
- Advertisement -

2020 ರ ಅಕ್ಟೋಬರ್‌ನಲ್ಲಿ ನಡೆದ ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ದೌರ್ಜನ್ಯದ ವಿರುದ್ಧದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ 10 ಮಹಿಳಾ ನಾಯಕಿಯರಿಗೆ ಉತ್ತರ ಪ್ರದೇಶ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.

ಉತ್ತರ ಪ್ರದೇಶದ ಗ್ರಾಮದಲ್ಲಿ ನಾಲ್ಕು ‘ಮೇಲ್ಜಾತಿಯ’ ಠಾಕೂರ್ ಪುರುಷರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಗಾಯಗೊಂಡು 19 ವರ್ಷದ ದಲಿತ ಮಹಿಳೆ ಸಾವನ್ನಪ್ಪಿದ ಘಟನೆಯ ಬಗ್ಗೆ ಸರ್ಕಾರದ ಹೊಣೆಗಾರಿಕೆ ಮತ್ತು ನ್ಯಾಯಯುತ ತನಿಖೆಗಾಗಿ ಈ ನಾಯಕಿಯರು ಧ್ವನಿ ಎತ್ತಿದ್ದರು.

ನೋಟಿಸ್ ಸ್ವೀಕರಿಸಿದವರಲ್ಲಿ ಉಜ್ಮಾ ಪರ್ವೀನ್, ಸುಮಯ್ಯ ರಾಣಾ, ಮಧು ಗರ್ಗ್ ಮತ್ತು ಮೀನಾ ಸಿಂಗ್ ಅವರಂತಹ ನಾಯಕಿಯರು ಸೇರಿದ್ದಾರೆ. ಅವರು 2019 ರಲ್ಲಿ ಲಖನೌದಾದ್ಯಂತ ನಡೆದ ಸಿಎಎ ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

2020 ರ ಅಕ್ಟೋಬರ್ 8 ರಂದು ಲಕ್ನೋದ ಗೋಮತಿ ನಗರದ ‘1090 ಕ್ರಾಸಿಂಗ್’ ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ನೋಟಿಸ್ ಜಾರಿ ಮಾಡಲಾಗಿದೆ. ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

ದಿ ವೈರ್‌ನೊಂದಿಗೆ ಮಾತನಾಡಿದ ಪರ್ವೀನ್, ರಾಣಾ ಮತ್ತು ಸಿಂಗ್ ಎಲ್ಲರೂ ನೋಟಿಸ್ ಬಂದಿದ್ದು ಆಶ್ಚರ್ಯಕರವಾಗಿದೆ ಎಂದು ಹೇಳಿದ್ದಾರೆ. ಸಿಎಎ ವಿರೋಧಿ ಚಳವಳಿಯಲ್ಲಿ ಭಾಗವಹಿಸಿದ್ದ ಪರ್ವೀನ್ ಅವರಿಗೆ ಮಧ್ಯ ಲಖನೌದ ಗೌತಂಪಳ್ಳಿ ಪೊಲೀಸ್ ಠಾಣೆಯಿಂದ ಕರೆ ಬಂದಿದೆ.

ಸಿಆರ್‌ಪಿಸಿಯ ಸೆಕ್ಷನ್ 41 (ಎ) ಅಡಿಯಲ್ಲಿ ಪೊಲೀಸರು ತನ್ನನ್ನು ಕರೆಸಿಕೊಂಡು ಹತ್ರಾಸ್ ಘಟನೆಯ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ತನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದು ಅವರು ಹೇಳಿದರು. ಸೆಕ್ಷನ್ 188 (ಸಾರ್ವಜನಿಕ ಸೇವಕರಿಗೆ ಅಸಹಕಾರ), 145 (ಕಾನೂನುಬಾಹಿರ ಗುಂಪುಗೂಡುವಿಕೆ ) ಮತ್ತು 353 (ಸಾರ್ವಜನಿಕ ಸೇವಕರನ್ನು ತಡೆಯಲು ಹಲ್ಲೆ) ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ಪ್ರತಿಭಟನೆಯ ದಿನದಂದು, ಲಕ್ನೋ ಪೊಲೀಸರು ನನ್ನನ್ನು ರಸ್ತೆಯ ಮೂಲಕ ಎಳೆದೊಯ್ದರು. ಪೊಲೀಸರು ನನ್ನನ್ನು ಆರು ಗಂಟೆಗಳ ಕಾಲ ವಶಕ್ಕೆ ಪಡೆದರು. ಪೊಲೀಸರು ನನ್ನನ್ನು ಎಳೆದೊಯ್ಯುವ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಲಭ್ಯವಿದೆ” ಎಂದು ಪರ್ವೀನ್ ಹೇಳಿದ್ದಾರೆ. ಹಿರಿಯ ಮಹಿಳಾ ಹಕ್ಕುಗಳ ಕಾರ್ಯಕರ್ತೆ ಮತ್ತು ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘದ (ಎಐಡಿಡಬ್ಲ್ಯೂಎ) ಹಿರಿಯ ಸದಸ್ಯೆ ಮಧು ಗರ್ಗ್ ಕೂಡ ಇದೇ ರೀತಿಯ ನೋಟಿಸ್ ಸ್ವೀಕರಿಸಿದ್ದಾರೆ. ಇನ್‌ಸ್ಪೆಕ್ಟರ್ ಮಟ್ಟದ ಪೊಲೀಸ್ ಸಿಬ್ಬಂದಿ ತನ್ನ ಕಚೇರಿಗೆ ಬಂದು ವಿಚಾರಣೆ ಮಾಡಿದರು ಎಂದು ಗರ್ಗ್ ದಿ ವೈರ್‌ಗೆ ತಿಳಿಸಿದ್ದಾರೆ, 30 ನಿಮಿಷಗಳ ಕಾಲ ವಿಚಾರಣೆ ನಡೆಸಲಾಯಿತು ಎಂದು ಅವರು ಹೇಳಿದರು.

ಗರ್ಗ್ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ತೀವ್ರ ವಿಮರ್ಶಕರಾಗಿದ್ದಾರೆ, ಮಹಿಳೆಯರ ಹಕ್ಕುಗಳಿಗಾಗಿ ಸಕ್ರಿಯ ಪ್ರಚಾರಕರಾಗಿದ್ದಾರೆ ಮತ್ತು ಕಳೆದ ಮೂರು ದಶಕಗಳಲ್ಲಿ ಅನೇಕ ಚಳುವಳಿಗಳಿಗೆ ಕಾರಣರಾಗಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಅವರು ಕೂಡ ಗಮನ ಸೆಳೆದ ವ್ಯಕ್ತಿಯಾಗಿದ್ದರು.

ಅಖಿಲ ಭಾರತ ಪ್ರಗತಿಶೀಲ ಮಹಿಳಾ ಸಂಘದ (ಎಐಪಿಡಬ್ಲ್ಯೂಎ) ಮೀನಾ ಸಿಂಗ್ ಕೂಡ ಪೊಲೀಸರ ಮುಂದೆ ಹಾಜರಾಗಲು ಕರೆ ಸ್ವೀಕರಿಸಿದ್ದಾರೆ.. ಆದರೆ ಈವರೆಗೆ ನೋಟಿಸ್‌ನ ಭೌತಿಕ ಪ್ರತಿಯನ್ನು ಪೊಲೀಸರು ಕಳುಹಿಸದ ಕಾರಣ ಅವರು ತನ್ನ ಹೇಳಿಕೆಯನ್ನು ನೋಂದಾಯಿಸಲು ಪೊಲೀಸ್ ಠಾಣೆಗೆ ಭೇಟಿ ನೀಡಿಲ್ಲ. “ಪೊಲೀಸರು ನನಗೆ ಕಾನೂನು ನೋಟೀಸ್ ಕಳುಹಿಸುವವರೆಗೆ ನಾನು ಅಲ್ಲಿಗೆ ಹೋಗುವುದಿಲ್ಲ” ಎಂದು ಅವರು ಹೇಳಿದರು.

ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಖ್ಯಾತ ಉರ್ದು ಕವಿ ಮುನಾವ್ವರ್ ರಾಣಾ ಅವರ ಪುತ್ರಿಯರಾದ ಸುಮಯ್ಯ ರಾಣಾ ಮತ್ತು ಫೌಜಿಯಾ ರಾಣಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

188, 145, ಮತ್ತು 353 ಸೆಕ್ಷನ್‌ಗಳನ್ನು ಹೊರತುಪಡಿಸಿ, ಎಲ್ಲಾ ಕಾರ್ಯಕರ್ತರ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆ, 1897, ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 56 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

2020 ರ ಡಿಸೆಂಬರ್ 29 ರಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಕೆಲವೇ ದಿನಗಳ ಮೊದಲು ಸುಮಯ್ಯ ರಾಣಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ನವೆಂಬರ್‌ನಲ್ಲಿ, ಸರ್ಕಾರದ ನೀತಿಗಳನ್ನು ವಿರೋಧಿಸಿದರು ಮತ್ತು ಸಾರ್ವಜನಿಕ ಆಕ್ರೋಶವನ್ನು ಹರಡಿದರು ಎಂದು ಕೈಸರ್ಬಾಗ್ ಪೊಲೀಸರು ಆರೋಪಿಸಿ ಅವರಿಗೆ ನೋಟಿಸ್ ಕಳುಹಿಸಿದ್ದರು. ಸಿಆರ್‌ಪಿಸಿಯ ಸೆಕ್ಷನ್ 107/116 ರ ಅಡಿಯಲ್ಲಿ ನೋಟಿಸ್ ಕಳುಹಿಸಲಾಗಿದೆ.

ಬಾಂಡ್ ತುಂಬಲು ಕೈಸರ್ಬಾಗ್ ಕೊಟ್ವಾಲಿಯಲ್ಲಿರುವ ಅವರ ಕಚೇರಿಯಲ್ಲಿ ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದೇನೆ ಎಂದು ರಾಣಾ ಹೇಳಿದ್ದಾರೆ. “ನಾನು ಸರ್ಕಾರದ ತಾರತಮ್ಯ ನೀತಿಗಳ ವಿರುದ್ಧ ಮೌನವಾಗಿ ಕುಳಿತುಕೊಳ್ಳುವುದಿಲ್ಲ” ಎಂದು ಅವರು ಹೇಳಿದರು.

ಈಗ ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರರಾಗಿರುವ ರಾಣಾ, ಬಿಜೆಪಿ ಸರ್ಕಾರವು “ಎಲ್ಲಾ ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಬಯಸಿದೆ ಆದರೆ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಇದು ಅಸಾಧ್ಯ, ಭಾರತದ ಸಂವಿಧಾನವು ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ನೀಡಿದೆ” ಎಂದು ಹೇಳಿದರು.

ಘಂಟಾ ಘರ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ರಾಣಾ ಕಾಣಿಸಿಕೊಂಡಿದ್ದರು ಮತ್ತು ಸಿಎಎ ಕುರಿತು ಭಾಷಣ ಮಾಡಲು ಇತರ ಪಟ್ಟಣಗಳಿಗೆ ಭೇಟಿ ನೀಡಿದ್ದರು. ಸಿಎಎ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಅವರ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ.
ಲಕ್ನೋದಲ್ಲಿ ದಾಖಲಾದ ಸುಮಾರು 7,000 ಪ್ರಕರಣಗಳ ಬಗ್ಗೆ ಯುಪಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತನಿಖಾ ಅಧಿಕಾರಿ ಸಂತೋಷ್ ಕುಮಾರ್ ಗೌಡ್ ಮಾತನಾಡಿ “10 ಮಹಿಳೆಯರ ವಿರುದ್ಧ ಪ್ರಕರಣಗಳು ದಾಖಲಾಗಿವೆ, ಮತ್ತು ಈಗ ಪೊಲೀಸ್ ಸಿಬ್ಬಂದಿ ಅವರನ್ನು ಕರೆದು ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ” ಎಂದು ಹೇಳಿದರು.

ಸುಮಯ್ಯ ರಾಣಾ ಅವರ ನೇತೃತ್ವದಲ್ಲಿ 30 ರಿಂದ 35 ಮಹಿಳೆಯರ ಗುಂಪು “ಸರ್ಕಾರ ವಿರೋಧಿ ಮೆರವಣಿಗೆ” ನಡೆಸಿ ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ಉಲ್ಲಂಘಿಸಿದೆ ಎಂದು ಯುಪಿ ಪೊಲೀಸರು ತಮ್ಮ ವರದಿಯಲ್ಲಿ ಹೇಳಿಕೊಂಡಿದ್ದಾರೆ,.

ಹುಸೇನಾಬಾದ್‌ನ ಐತಿಹಾಸಿಕ ಘಂಟಾ ಘರ್‌ನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ನಡೆಸಿದ ನಂತರ ಲಖನೌದ ಠಾಕೂರ್‌ಗಂಜ್ ಪೊಲೀಸ್ ಠಾಣೆಯಲ್ಲಿ 300 ಪ್ರತಿಭಟನಾಕಾರರ ವಿರುದ್ಧ, ಹೆಚ್ಚಾಗಿ ಮಹಿಳೆಯರ ವಿರುದ್ಧ ಸುಮಾರು 16 ಎಫ್‌ಐಆರ್ ದಾಖಲಿಸಲಾಗಿದೆ. ಸಾಂಕ್ರಾಮಿಕ ರೋಗದ ನಡುವೆಯೂ ಪ್ರತಿಭಟನಾ ನಿರತ ಮಹಿಳೆಯರು ಮಾಸ್ಕ್ ಧರಿಸಿರಲಿಲ್ಲ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಗಲಾಟೆ ಮಾಡಿದ್ದಾರೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.


ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...