Homeಮುಖಪುಟಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ, ಪೊಲೀಸರು ಜಾತಿಯಾಧಾರದಲ್ಲಿ ಅಪರಾಧ ಮತ್ತು ಅಪರಾಧಿಯನ್ನು ಗಣನೆಗೆ ತೆಗೆದುಕೊಳ್ಳುವುದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -
- Advertisement -

ಕಣ್ಣುಗಳಲ್ಲಿ ಭವಿಷ್ಯದ ಕನಸುಗಳನ್ನು ಕಟ್ಟಿಕೊಂಡು, ತನ್ನ ಕುಟುಂಬದ ಜೊತೆಗೆ ಖುಷಿಯಿಂದ ಜೀವನ ನಡೆಸುತ್ತಿದ್ದ ಹೆಣ್ಣು ಮಗಳ ಕನಸನ್ನು ಅಮಾನುಷವಾಗಿ ಆ ನಾಲ್ವರು ಕಿತ್ತುಕೊಂಡಿದ್ದಾರೆ. ಅದಕ್ಕಿಂತ ಘೋರವಾದ ವಿಚಾರವೆಂದರೆ ಅಂತಹ ವಿಕೃತ ಮನಸ್ಸಿನ ಆರೋಪಿಗಳ ಪರ ಸರ್ಕಾರ, ಪೊಲೀಸರು, ಜಾತಿವಾರು ಸಂಘಟನೆಗಳು ನಿಂತಿರುವುದು.

ಅತ್ಯಾಚಾರ ನಡೆದಿರುವುದಕ್ಕೆ ಸಾಕ್ಷಿಯಿದ್ದರೂ ಕಿರುಕುಳದ ಎಫ್‌ಐಆರ್ ದಾಖಲಿಸುವ ಪೊಲೀಸರು, ಜಾತಿಯಾಧಾರದಲ್ಲಿ ಅಪರಾಧ ಮತ್ತು ಅಪರಾಧಿಯನ್ನು ಗಣನೆಗೆ ತೆಗೆದುಕೊಳ್ಳುವುದು, ಇವೆಲ್ಲವೂ ಜನರಿಗೆ ವ್ಯವಸ್ಥೆ ಮೇಲೆ ಮತ್ತಷ್ಟು ಆಕ್ರೋಶ ಹುಟ್ಟಿಸುತ್ತಿದೆ.

ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ದಿನೇ ದಿನೇ ಅಧಿಕವಾಗುತ್ತಿದ್ದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ದಲಿತ ಯುವತಿಯರು, ಬಡ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳು ಬೆಳಕಿಗೆ ಬರುವುದೇ ಕಡಿಮೆಯಾಗಿದೆ. ಪೊಲೀಸ್ ವ್ಯವಸ್ಥೆ ಆರೋಪಿಗಳ ಪರ ನಿಂತು ಪ್ರಕರಣಗಳು ನ್ಯಾಯಾಲಯದವರೆಗೆ ಹೋಗಲು ಬಿಡುವುದೆ ಇಲ್ಲ. ಪೊಲೀಸ್ ಪಂಚಾಯಿತಿಗಳ ಮೂಲಕ ಪ್ರಕರಣ ಬಗೆ ಹರಿಸಲಾಗುತ್ತಿದೆ. ಇಲ್ಲವೇ ಹೆದರಿಸಿಯೋ, ಕೊಲೆ ಮಾಡಿಯೋ ಪ್ರಕರಣವನ್ನು ಮುಚ್ಚಿಹಾಕಲಾಗುತ್ತಿದೆ. ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಅತ್ಯಾಚಾರಿಗಳು ಇವರೇ ಎಂದು ಗೊತ್ತಿದ್ದರೂ ಶಿಕ್ಷೆ ನೀಡಲು ವರ್ಷಗಳೇ ಕಾಯಬೇಕಾಯಿತು.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ಈಗ ಮತ್ತೊಮ್ಮೆ ಹತ್ರಾಸ್ ಸಂತ್ರಸ್ತೆ, ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೊಮ್ಮೆ ದೇಶದಲ್ಲಿ ಸಂಚಲನ ಹುಟ್ಟು ಹಾಕಿದೆ. ಮಾನವೀಯತೆ, ಮನುಷ್ಯ ಕಷ್ಟಗಳಿಗೆ ಸ್ಪಂದಿಸುವ ಕೋಟ್ಯಾಂತರ ಮಂದಿ ಮೃತ ಸಂತ್ರಸ್ತೆಗೆ ನ್ಯಾಯ ಸಿಗಲಿ ಎಂದು ಒತ್ತಾಯಿಸುತ್ತಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಘಟನೆ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಮತ್ತೊಬ್ಬ ಮಗಳು ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಆದರೆ ಆಕೆಯ ಅಂತ್ಯಸಂಸ್ಕಾರಕ್ಕೂ ಸಹ ಆಕೆಯ ಕುಟುಂಬವನ್ನೇ ದೂರವಿಡಲಾಗಿದೆ. ದಲಿತ ಸಮುದಾಯದ ಮೇಲೆ ನಡೆಸುತ್ತಿರುವ ದೌರ್ಜನ್ಯ, ನಾಚಿಕೆಯಾಗಬೇಕು ಸರ್ಕಾರಕ್ಕೆ ಎಂದಿದ್ದಾರೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಘಟನೆಯನ್ನು ಖಂಡಿಸಿದ್ದು, ಹತ್ರಾಸ್‌ನಲ್ಲಿ ನಡೆದದ್ದು ಅಮಾನವೀಯ ಮತ್ತು ಕ್ರೌರ್ಯವನ್ನು ಮೀರಿದೆ ಎಂದಿದ್ದಾರೆ.

ನಟಿ ಸ್ವರಾ ಭಾಸ್ಕರ್‌ ತಮ್ಮ ಟ್ವೀಟ್‌ನಲ್ಲಿ ಜಾತಿಯನ್ನು ನಿರಾಕರಿಸುವವರು, ಭಾರತದಲ್ಲಿ ಜಾತಿ ತಾರತಮ್ಯ ಇಲ್ಲ ಎನ್ನುವವರು ಇದನ್ನು ನೋಡಿ ಎಂದು ಮನೀಷ್ ಪಾಂಡೆಯವರು ಮಾಡಿರುವ ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಗ್ರೌಂಡ್ ರಿಪೋರ್ಟ್ ಶೇರ್‌ ಮಾಡಿದ್ದಾರೆ.

ನಟ ಅಕ್ಷಯ್ ಕುಮಾರ್ ಕೂಡ ಟ್ವಿಟ್ಟರ್‌ನಲ್ಲಿ ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಅತ್ಯಂತ ಕ್ರೂರ, ಇಂತಹ ಘಟನೆಗಳು ಯಾವಾಗ ನಿಲ್ಲುತ್ತದೆ ಎಂದು ಪ್ರಶ್ನಿಸಿದ್ದಾರೆ. ಅತ್ಯಾಚಾರಿಗಳಿಗೆ ಎಷ್ಟು ಕಠಿಣ ಶಿಕ್ಷೆಯಾಗಬೇಕು ಎಂದರೇ, ಶಿಕ್ಷೆಯ ಆಲೋಚನೆಯೇ ಅತ್ಯಾಚಾರಿಗಳನ್ನು ಭಯದಿಂದ ನಡುಗಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ನಟ, ಹೋರಾಟಗಾರ ಚೇತನ್, ಜಾತಿ,ಲಿಂಗ ಆಧಾರಿತ ಹಿಂಸಾಚಾರಕ್ಕೆ ಬಲಿಯಾದವರಿಗೆ ಇಂದಿನ ಭಾರತದಲ್ಲಿ ನ್ಯಾಯ ಬಹುದೊಡ್ಡ ಕನಸು. ಪೊಲೀಸ್ ಇಲಾಖೆಯ ನಿರಾಸಕ್ತಿ, ಬೇಜವಾಬ್ದಾರಿತನ, ನಿಂದನೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಪೊಲೀಸ್ ನೇತೃತ್ವದ ಹತ್ರಾಸ್ ಅತ್ಯಾಚಾರ, ಕೊಲೆ ಸಂತ್ರಸ್ತೆಯ ಶವಸಂಸ್ಕಾರ ಪೊಲೀಸ್ ಇಲಾಖೆಯು ಪ್ರಭಲರಿಗೆ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ತಿಳಿಸುತ್ತದೆ ಎಂದು ತಮ್ಮ ಟ್ವಿಟ್ಟರ್‌ ಮತ್ತು ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

#Hathras #Police #Abuseಜಾತಿ / ಲಿಂಗ ಆಧಾರಿತ ಹಿಂಸಾಚಾರಕ್ಕೆ ಬಲಿಯಾದವರಿಗೆ ನ್ಯಾಯ ಇಂದಿನ ಭಾರತದಲ್ಲಿ ಬಹುದೊಡ್ಡ ಕನಸುಪೊಲೀಸ್ ಇಲಾಖೆಯ…

Posted by Chetan Ahimsa on Wednesday, September 30, 2020

 

ನಟಿ ಕಂಗನಾ ರಾಣಾವತ್ ಸರ್ಕಾರ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ನೀಡುವ ನಂಬಿಕೆ ಇದೆ ಎಂದಿದ್ದಾರೆ.

ಉತ್ತರ ಪ್ರದೇಶದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಜೊತೆಗೆ ಅವರನ್ನು ಬೆಮಬಲಿಸುವ ಪ್ರಧಾನಿಗಳು, ಸಂಘಪರಿವಾರದವರು ಹೊರಬೇಕು ಎಂದಿದ್ದಾರೆ. ಜೊತೆಗೆ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ ಆಗಿದ್ದಾರೆ. ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ. ಮೊದಲು ಇವರನ್ನು ವಜಾ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಈ ದುರ್ಘಟನೆಗೆ ಅತ್ಯಾಚಾರಿಗಳು ಎಷ್ಟು ಕಾರಣವೋ ಉತ್ತರಪ್ರದೇಶ ಸರ್ಕಾರ ಕೂಡ ಅಷ್ಟೇ ಕಾರಣ ಎಂದು ಆರೋಪಿಸಿದ್ದಾರೆ. ಸಂತ್ರಸ್ತೆಯನ್ನು ಏಮ್ಸ್ ಗೆ ಸೇರಿಸಿಕೊಳ್ಳಬೇಕೆಂದು ನಾನು ಒತ್ತಾಯಿಸುತ್ತಲೇ ಇದ್ದೆ, ಆದರೆ ಬಿಜೆಪಿ ಸರ್ಕಾರ ಹಾಗೆ ಮಾಡಲಿಲ್ಲ. ನಮ್ಮ ಸಹೋದರಿಯ ಸಾವಿಗೆ ಕಾರಣವಾದ ಅತ್ಯಾಚಾರಿಗಳು ಉತ್ತರ ಪ್ರದೇಶ ಸರ್ಕಾರಕ್ಕೂ ಅಷ್ಟೇ ಕಾರಣ ಎಂದು ಟ್ವೀಟ್ ಮಾಡಿದ್ದಾರೆ.

#HathrasHorrorShocksIndia #Hathras #HatrasCase #HathrasHorror #JusticeForManisha, #JusticeForManishaValmiki, #JusticeForManishaValmiki ಹ್ಯಾಶ್‌ಟ್ಯಾಗ್‌ಗಳು ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿವೆ.

ಜನರ ಆಕ್ರೋಶ ಹೆಚ್ಚಾದ ಹಿನ್ನೆಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ಹತ್ರಾಸ್‌ನಲ್ಲಿ  ನಡೆದ ದುರ್ಘಟನೆಯ ಅಪರಾಧಿಗಳು ಬದುಕುಳಿಯುವುದಿಲ್ಲ. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಮುಂದಿನ ಏಳು ದಿನಗಳಲ್ಲಿ ಈ ತಂಡ ತನ್ನ ವರದಿಯನ್ನು ಸಲ್ಲಿಸಲಿದೆ. ಈ ಪ್ರಕರಣದ ವಿಚಾರಣೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ನಡೆಯುತ್ತದೆ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೃತ ಸಂತ್ರಸ್ತೆಗೆ ನ್ಯಾಯಬೇಕು ಎಂದು ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನಾಕಾರರನ್ನು ಬಂಧಿಸುವ ಕೆಲಸ ಕೂಡ ಉತ್ತರ ಪ್ರದೇಶ ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಮನೆ ಮುಂದೆ ಸಮಾಜವಾದಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ದೆಹಲಿಯ ಯುಪಿ ಭವನದ ಮುಂದೆ ಪ್ರತಿಭಟನೆ ನಡೆಸಲು ಒಟ್ಟುಗೂಡುತ್ತಿದ್ದ ಸುಮಾರು 60 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...