Homeಮುಖಪುಟಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

ಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

ಹಿಂದೂ-ಮುಸ್ಲಿಂ ಸಮುದಾಯದಲ್ಲಿ ದ್ವೇಷ ಸೃಷ್ಟಿಸಲು ಮತ್ತು ಪ್ರಕರಣದ ವಿಚಾರಣೆಯ ಗಮನವನ್ನು ಬೇರೆಡೆ ಸೆಳೆಯಲು (ಪಿಎಫ್‌ಐ ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯ ಕುಟುಂಬ ಸದಸ್ಯರು ಗೃಹಬಂಧನಕ್ಕೆ ಸಮಾನವಾದ ಪರಿಸ್ಥಿತಿಗಳಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ನೀಡಿದ್ದ ಸಿಆರ್‌ಪಿಎಫ್‌ ಭದ್ರತೆ ಹಿಂತೆಗೆದುಕೊಂಡ ನಂತರ, ಕುಟುಂಬ ಸದಸ್ಯರು ಜೀವಭಯಕ್ಕೆ ಒಳಗಾಗಿದ್ದಾರೆ ಎಂದು ನಾಗರಿಕ ಹಕ್ಕುಗಳ ಸಂಘಟನೆಗಳು ತಿಳಿಸಿವೆ.

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (PUCL) ಈ ಪ್ರಕರಣದ ಬಗ್ಗೆ ಸತ್ಯಶೋಧನಾ ವರದಿಯನ್ನು ಬಿಡುಗಡೆ ಮಾಡಿದೆ. ನಿರ್ಭಯಾ ನಿಧಿಯ ಮೂಲಕ ಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ಭದ್ರತೆ ಮತ್ತು ಪುನರ್ವಸತಿ ಕಲ್ಪಿಸಬೇಕು ಎಂದು ಸಂಸ್ಥೆ ಒತ್ತಾಯಿಸಿದೆ.

ಲಕ್ನೋದಲ್ಲಿ ಸುದ್ದಿಗೋಷ್ಠಿ ನಡೆಸಿದ ಪಿಯುಸಿಎಲ್ ಸದಸ್ಯರಾದ ಕಮಲ್ ಸಿಂಗ್, ಫರ್ಮನ್ ನಖ್ವಿ, ಅಲೋಕ್, ಶಶಿಕಾಂತ್ ಮತ್ತು ಕೆ.ಬಿ.ಮೌರ್ಯ, ಇಡೀ ಕುಟುಂಬವು ಗೃಹಬಂಧನದ ಪರಿಸ್ಥಿತಿಯಲ್ಲಿದೆ ಮತ್ತು ಅವರ ಸಾಮಾಜಿಕ ಬದುಕು ಸಮಾಜದಿಂದ ಪ್ರತ್ಯೇಕಗೊಂಡಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ:’ಸೇಡು ತೀರಿಸಿಕೊಳ್ಳುವುದಲ್ಲ, ಬದಲಾವಣೆ ಬೇಕು’; ಮಹಿಳಾ ಸಂಘಟನೆಗಳು

’CRPF ರಕ್ಷಣೆಯನ್ನು ಹಿಂತೆಗೆದುಕೊಂಡ ನಂತರ ಸಂತ್ರಸ್ತೆ ಕುಟುಂಬ ಸದಸ್ಯರು ಭಯದಲ್ಲಿ ಬದುಕುತ್ತಿದ್ದಾರೆ. ಕುಟುಂಬದ ಒಪ್ಪಿಗೆಯಿಲ್ಲದೆ ಮೃತ ಸಂತ್ರಸ್ತೆಯ ಅಂತ್ಯಸಂಸ್ಕಾರ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ. ಕೂಡಲೇ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಬೇಕು ಎಂದು ಪಿಯುಸಿಎಲ್ ಸದಸ್ಯರು ಒತ್ತಾಯಿಸಿದ್ದಾರೆ.

ಹಿಂದೂ-ಮುಸ್ಲಿಂ ಸಮುದಾಯದಲ್ಲಿ ದ್ವೇಷ ಸೃಷ್ಟಿಸಲು ಮತ್ತು ಪ್ರಕರಣದ ವಿಚಾರಣೆಯ ಗಮನವನ್ನು ಬೇರೆಡೆ ಸೆಳೆಯಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗಿದೆ ಎಂದು ಅಲೋಕ್ ಮತ್ತು ಫರ್ಮನ್ ನಖ್ವಿ ಆರೋಪಿಸಿದರು.

ಪಿಎಫ್‌ಐ ನಿಷೇಧಿತ ಸಂಸ್ಥೆಗಳ ಪಟ್ಟಿಯಲ್ಲಿಲ್ಲ. ಆದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದನ್ನು ಉಗ್ರಗಾಮಿ ಸಂಸ್ಥೆ ಎಂದಿದ್ದಾರೆ ಎಂದು ಕಮಲ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಅಕ್ಟೋಬರ್ 5 ರಂದು ಉತ್ತರಪ್ರದೇಶಕ್ಕೆ ತೆರಳಿದ್ದ, ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಸೇರಿ ಮೂವರನ್ನು ಪಿಎಫ್‌ಐ ಸಂಘಟನೆಯವರು ಎಂದು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.


ಇದನ್ನೂ ಓದಿ: ಹೈಕೋರ್ಟ್ ಮೇಲ್ವಿಚಾರಣೆ ಮಾಡಲಿ: ಹತ್ರಾಸ್ CBI ತನಿಖೆ ಮೇಲ್ವಿಚಾರಣೆಗೆ ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...